ಸೇಡಂ| ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

ಕಲಬುರಗಿ: ಕಮಲಾವತಿ ನದಿಯಿಂದ ಟ್ರ್ಯಾಕ್ಟರ್ ಮೂಲಕ ಅಕ್ರಮ ಮರಳು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೇಡಂ ಪೊಲೀಸರು, ಟ್ರ್ಯಾಕ್ಟರ್ ಅನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸೇಡಂ ತಾಲೂಕಿನ ಬಟಗೀರ (ಬಿ) ಗ್ರಾಮದ ಸಮೀಪವಿರುವ ಕಮಲಾವತಿ ನದಿಯಿಂದ ಟ್ರ್ಯಾಕ್ಟರ್ ಮೂಲಕ ಅಕ್ರಮ ಮರಳು ಸಾಗಾಟ ನಡೆಸಲಾಗುತ್ತಿದೆ ಎಂಬ ಮಾಹಿತಿ ದೊರೆತ ಹಿನ್ನೆಲೆ ಸಿಪಿಐ ಮಹಾದೇವ ದಿಡಿಮನಿ, ಸಿಬ್ಬಂದಿ ಮಾರುತಿ, ಬಾಲಕೃಷ್ಣ ರೆಡ್ಡಿ ಸೇರಿದಂತೆ ಇತರೆ ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ದಾಳಿ ವೇಳೆ ಟ್ರ್ಯಾಕ್ಟರ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಕುರಿತು ಚಾಲಕ ಹಾಗೂ ವಾಹನ ಮಾಲಕನ ವಿರುದ್ಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





