Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸೇಡಂ | ಫೆ.8ರಂದು ಕನ್ನಡ ಜಾನಪದ...

ಸೇಡಂ | ಫೆ.8ರಂದು ಕನ್ನಡ ಜಾನಪದ ಸಮ್ಮೇಳನ, ದಶಮಾನೋತ್ಸವ ಸಂಭ್ರಮ : ಶಿವರಾವ ಭೋವಿ

ವಾರ್ತಾಭಾರತಿವಾರ್ತಾಭಾರತಿ3 Feb 2026 8:51 PM IST
share
ಸೇಡಂ | ಫೆ.8ರಂದು ಕನ್ನಡ ಜಾನಪದ ಸಮ್ಮೇಳನ, ದಶಮಾನೋತ್ಸವ ಸಂಭ್ರಮ : ಶಿವರಾವ ಭೋವಿ

ಸೇಡಂ : ತಾಲೂಕು ಕನ್ನಡ ಜಾನಪದ ಪರಿಷತ್ತು ವತಿಯಿಂದ ಫೆ.8ರಂದು ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ 3ನೇ ಕನ್ನಡ ಜಾನಪದ ಸಮ್ಮೇಳನ ಹಾಗೂ ದಶಮಾನೋತ್ಸವ ಸಂಭ್ರಮದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ ತಾಲೂಕಾಧ್ಯಕ್ಷ ಶಿವರಾವ ಭೋವಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 7.30ಕ್ಕೆ ಕಾರ್ಯಕ್ರಮವು ಧ್ವಜಾರೋಹಣದೊಂದಿಗೆ ಚಾಲನೆ ಪಡೆಯಲಿದೆ. ಕಜಾಪ ರಾಜ್ಯಾಧ್ಯಕ್ಷರಾದ ಡಾ.ಎಸ್.ಬಾಲಾಜಿ ಅವರು ರಾಷ್ಟ ಧ್ವಜಾರೋಹಣ ನೆರವೇರಿಸಲಿದ್ದಾರೆ. ಜಿಲ್ಲಾಧ್ಯಕ್ಷ ಎಂ.ನಿ.ನಿಂಗಪ್ಪ ನಾಡ ಧ್ವಜಾರೋಹಣ, ತಾಲೂಕು ಅಧ್ಯಕ್ಷ ಶಿವರಾವ ಭೋವಿ ಪರಿಷತ್ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು.

ಅಂದು ಬೆಳಗ್ಗೆ 8.30ಕ್ಕೆ ಶ್ರೀ ಕೊತ್ತಲ ಬಸವೇಶ್ವರ ದೇವಾಲಯದಿಂದ ಸರ್ಕಾರಿ ನೌಕರರ ಭವನದ ವರೆಗೆ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ ನಡೆಯಲಿದ್ದು, ಕೊತ್ತಲ ಬಸವೇಶ್ವರ ದೇವಾಲದ ಸದಾಶಿವ ಮಹಾಸ್ವಾಮಿ ದಿವ್ಯ ಸಾನಿಧ್ಯ ವಹಿಸಲಿದ್ದು, ಪುರಸಭೆ ಮಾಜಿ ಅಧ್ಯಕ್ಷ ವೀರೇಂದ್ರ ರುದ್ನೂರ ಉದ್ಘಾಟಿಸಲಿದ್ದಾರೆ. ವೀರಣ್ಣ ಮಾದೇನೊರ್, ಬಸವರಾಜ ಮಳಗಿ, ಶೇಖಪ್ಪ ಸಜ್ಜನ ಉಪಸ್ಥಿತಿ ಇರಲಿದ್ದಾರೆ ಎಂದು ವಿವರಿಸಿದರು.

ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಹಾಗೂ ಶಾಲಾ ಮಕ್ಕಳ ಸಾಂಸ್ಕೃತಿಕ ತಂಡಗಳು ಪಾಲ್ಗೊಳ್ಳಲಿವೆ. ಬೆಳಿಗ್ಗೆ 10.15ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಜ್ಞಾನಪ್ರಕಾಶ ಮಹಾಸ್ವಾಮಿಗಳು ಹಾಗೂ ಪಂಚಾಕ್ಷರಿ ಮಹಾಸ್ವಾಮಿಗಳು ವಹಿಸಲಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಬಸವರಾಜ ಆರ್.ಪಾಟೀಲ ಊಡಗಿ, ಮಾಜಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೇದಾರ್‌, ಎಸ್.ಬಾಲಾಜಿ, ಮುಡುಬಿ ಗುಂಡೇರಾವ, ಶಿವರಾವ ಭೋವಿ, ಡಾ. ಶರಣಪ್ಪ ಗೋನಾಳ, ಎಂ.ಬಿ.ನಿoಗಪ್ಪ, ಡಾ.ಎಚ್.ಬಿ.ಪಾಟೀಲ, ಬಿಇಒ ಮಾರುತಿ ಹುಜರಾತಿ, ಬಸವರಾಜ ಸಾಗರ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕ್ಯಾಲೆಂಡರ್ ಬಿಡುಗಡೆ, ಸಮ್ಮೇಳನಾಧ್ಯಕ್ಷರ ಸನ್ಮಾನ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ದಶಮಾನೋತ್ಸವ ಗೌರವ ಸನ್ಮಾನ ಮಾಡಲಾಗುವುದು ಎಂದರು.

ಮಧ್ಯಾಹ್ನ ಮಕ್ಕಳ ಮತ್ತು ಮಹಿಳಾ ಸಂಘಗಳ ಗೋಷ್ಠಿ ನಡೆಯಲಿದ್ದು, ಸಾಹಿತಿ ಡಾ.ಜಗನ್ನಾಥ ತರನಳ್ಳಿ ಅವರು ಉಪನ್ಯಾಸ ನೀಡಲಿದ್ದಾರೆ. ಡಾ.ಶ್ರೀನಿವಾಸರೆಡ್ಡಿ ಪಾಟೀಲ ಕೋಲಕುಂದಾ, ಲಿಂಗಾರೆಡ್ಡಿ ಶೇರಿ, ಸಿದ್ದಪ್ಪ ತಳ್ಳಳ್ಳಿ, ಶೋಭಾದೇವಿ ಚಕ್ಕಿ, ಡಾ.ಚಂದ್ರಕಲಾ ಬಿದರಿ, ಶರಣಪ್ಪ ಮಹಾಗಾಂವ, ಸಿದ್ದಯ್ಯಸ್ವಾಮಿ ಆಡಕಿ, ಅವಿನಾಶ ಬೊರಂಚಿ ಆಗಮಿಸಲಿದ್ದಾರೆ ಎಂದರು.

ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ರಾಜಯೋಗಿನಿ ಬ್ರಹ್ಮಕುಮಾರಿ ಕಲಾವತಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಕನ್ನಡ ಜಾನಪದ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಶಿವರಾವ ಭೋವಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ. ಈ ಸಾಂಸ್ಕೃತಿಕ ಹಬ್ಬದಲ್ಲಿ ತಾಲ್ಲೂಕಿನ ಸಮಸ್ತ ಜನತೆ, ಸಾಹಿತ್ಯಾಸಕ್ತರು ಹಾಗೂ ಜಾನಪದ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘಟಕರು ಕೋರಿದರು.

ಪರಿಷತ್ ಖಜಾಂಚಿ ಶಿವಯೋಗಿ ಸಕ್ಪಾಲ್, ಸಂಚಾಲಕ ಗುರುಲಿಂಗ ಕೋಡ್ಲಾ, ಜಗನ್ನಾಥ ಎಂ.ಭಾಗೋಡಿ, ಮಲ್ಲಮ್ಮ ಪತ್ರಿ, ರಾಜೇಶ್ವರಿ ಬಿಲಗುಂದಿ, ಪುಷ್ಪ ಗೊಬ್ಬೂರ, ಭವಾನಿ ಕೇಶ್ವರ ಪತ್ರಿಕಾಗೋಷ್ಠಿಯಲ್ಲಿದ್ದರು.ಕನ್ನಡ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಮುರುಳಿಧರ ದೇಶಪಾಂಡೆ ಅವರು ಆಯ್ಕೆಯಾಗಿದ್ದಾರೆ ಎಂದು ಹೇಳಿದರು.

Tags

Sedam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X