Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸೇಡಂ ತಾಲೂಕನ್ನು ಬಾಲ, ಕಿಶೋರ ಕಾರ್ಮಿಕ...

ಸೇಡಂ ತಾಲೂಕನ್ನು ಬಾಲ, ಕಿಶೋರ ಕಾರ್ಮಿಕ ಮುಕ್ತಗೊಳಿಸಲು ಬದ್ಧರಾಗಿ: ಶ್ರೇಯಾಂಕ ಧನಶ್ರೀ

ವಾರ್ತಾಭಾರತಿವಾರ್ತಾಭಾರತಿ11 Sept 2026 11:42 PM IST
share
ಸೇಡಂ ತಾಲೂಕನ್ನು ಬಾಲ, ಕಿಶೋರ ಕಾರ್ಮಿಕ ಮುಕ್ತಗೊಳಿಸಲು ಬದ್ಧರಾಗಿ: ಶ್ರೇಯಾಂಕ ಧನಶ್ರೀ

ಸೇಡಂ: ತಾಲೂಕನ್ನು ಬಾಲ ಹಾಗೂ ಕಿಶೋರ ಕಾರ್ಮಿಕ ಮುಕ್ತ ತಾಲೂಕನ್ನಾಗಿ ರೂಪಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಟಿಬದ್ಧರಾಗಿ ಕಾರ್ಯನಿರ್ವಹಿಸಬೇಕು ಎಂದು ತಹಶೀಲ್ದಾರ್ ಶ್ರೇಯಾಂಕ ಧನಶ್ರೀ ಸೂಚಿಸಿದರು.

ಗುರುವಾರ ಸೇಡಂ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ತಾಲೂಕು ಬಾಲಕಾರ್ಮಿಕ ನಿರ್ಮೂಲನಾ, ಪುನರ್ವಸತಿ ಹಾಗೂ ಟಾಸ್ಕ್‌ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಬಾಲಕಾರ್ಮಿಕರ ಪತ್ತೆ ಹಾಗೂ ರಕ್ಷಣಾ ಕಾರ್ಯಾಚರಣೆಗೆ ಸೇಡಂ, ಮಳಖೇಡ, ಮುಧೋಳ, ಕೋಡ್ಲಾ ಹಾಗೂ ಅಡಕಿ ವ್ಯಾಪ್ತಿಯಲ್ಲಿ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ನಿಯಮಿತವಾಗಿ ದಿಢೀರ್ ದಾಳಿ ನಡೆಸಿ ಬಾಲಕಾರ್ಮಿಕರನ್ನು ನೇಮಿಸಿಕೊಂಡಿರುವ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಂಡು ಎಫ್‌ಐಆರ್ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರದ ನಿಯಮಾವಳಿಯಂತೆ ನೇಮಕಗೊಂಡಿರುವ ನಿರೀಕ್ಷಕರು ತಿಂಗಳಿಗೆ ಕನಿಷ್ಠ 15 ತಪಾಸಣೆಗಳನ್ನು ಕಡ್ಡಾಯವಾಗಿ ನಡೆಸಬೇಕು. ತಪಾಸಣೆ ಸಂದರ್ಭದಲ್ಲಿ ಬಾಲಕಾರ್ಮಿಕರು ಕಂಡುಬಂದಲ್ಲಿ ಮಕ್ಕಳನ್ನು ರಕ್ಷಿಸಿ, ಸಂಬಂಧಿಸಿದ ಮಾಲಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಶಾಲೆ ತೊರೆದ ಮಕ್ಕಳು, ಬಾಲ್ಯವಿವಾಹ ಹಾಗೂ ಬಾಲಗರ್ಭಿಣಿ ಪ್ರಕರಣಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಅಂತಹ ಪ್ರಕರಣಗಳನ್ನು ತಡೆಗಟ್ಟಲು ಇಲಾಖೆಗಳ ನಡುವೆ ಪರಿಣಾಮಕಾರಿ ಸಮನ್ವಯ ಅಗತ್ಯವಿದೆ ಎಂದು ತಹಶೀಲ್ದಾರ್ ತಿಳಿಸಿದರು.

ಆರೋಗ್ಯ ಇಲಾಖೆಯು ಆರ್‌ಸಿಎಚ್ ಪೋರ್ಟಲ್‌ನಲ್ಲಿರುವ ಅಗತ್ಯ ಮಾಹಿತಿಯನ್ನು ಪೊಲೀಸ್ ಇಲಾಖೆಯೊಂದಿಗೆ ಹಂಚಿಕೊಂಡು, ಬಾಲ್ಯವಿವಾಹ ಸೇರಿದಂತೆ ಸಂಬಂಧಿತ ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲು ಸಹಕರಿಸಬೇಕು ಎಂದು ಸೂಚಿಸಿದರು.

ಶಾಲಾ-ಕಾಲೇಜುಗಳು ಹಾಗೂ ವಸತಿನಿಲಯಗಳಲ್ಲಿ ಬಾಲಕಾರ್ಮಿಕ ಪದ್ಧತಿ, ಬಾಲ್ಯವಿವಾಹ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಹಾಗೂ ‘ಗುಡ್ ಟಚ್–ಬ್ಯಾಡ್ ಟಚ್’ ಕುರಿತು ಮಕ್ಕಳಿಗೆ ಹಾಗೂ ಪೋಷಕರಿಗೆ ವ್ಯಾಪಕ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ನಿರ್ದೇಶನ ನೀಡಿದರು.

ಕಲಬುರಗಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಅವರು ಜಿಲ್ಲಾಧಿಕಾರಿಗಳ ನಿರ್ದೇಶನಗಳು, ಕೈಗೊಂಡಿರುವ ಕ್ರಮಗಳು ಹಾಗೂ ಸೇಡಂ ತಾಲೂಕಿನಲ್ಲಿನ ಬಾಲಕಾರ್ಮಿಕ ಸ್ಥಿತಿಗತಿಯ ಕುರಿತು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Tags

SedamShreyanka Dhanashree
share
ವಾರ್ತಾಭಾರತಿ
ವಾರ್ತಾಭಾರತಿ
Next Story
X