Sedam | ಡಾ.ಶರಣಪ್ರಕಾಶ್ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡುವಂತೆ ಮಹಿಳಾ ಘಟಕದಿಂದ ವಿಶೇಷ ಪೂಜೆ

ಸೇಡಂ: ರಾಜ್ಯದ ಹಿರಿಯ ನಾಯಕರು ಸೇಡಂ ಕ್ಷೇತ್ರದ ಶಾಸಕ ಡಾ.ಶರಣಪ್ರಕಾಶ್ ಪಾಟೀಲ್ ಅವರಿಗೆ ಉಪ ಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡುವಂತೆ ಆಗ್ರಹಿಸಿ, ಸೇಡಂ ನಗರದ ಕೊತ್ತಲ ಬಸವೇಶ್ವರ ದೇವಸ್ಥಾನದಲ್ಲಿ ಸೇಡಂ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಮಂಗಳವಾರ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಘಟಕದ ಮುಖಂಡರು, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಡಾ. ಶರಣಪ್ರಕಾಶ ಪಾಟೀಲ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಸಚಿವರಾಗಿ ಸಮರ್ಥ ಆಡಳಿತ, ಜನಪರ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ ಎಂದು ಹೇಳಿದರು.
ಅವರ ಅನುಭವ, ಪ್ರಾಮಾಣಿಕತೆ ಹಾಗೂ ಕಳಂಕರಹಿತ ರಾಜಕೀಯ ಜೀವನವನ್ನು ಪರಿಗಣಿಸಿ ರಾಜ್ಯ ಸರ್ಕಾರವು ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ, ಡಾ. ಶರಣಪ್ರಕಾಶ ಪಾಟೀಲ ಅವರಿಗೆ ಇನ್ನಷ್ಟು ಉನ್ನತ ಸ್ಥಾನಮಾನ ದೊರೆಯಲಿ ಹಾಗೂ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಸೇವೆ ಸಲ್ಲಿಸುವ ಅವಕಾಶ ಸಿಗಲಿ ಎಂದು ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಸೇಡಂ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಲಿತ ಯಾಕಾಪೂರ, ಬಸಮ್ಮ ಪಾಟೀಲ, ಶೋಭಾ ವಾಲಿಕರ್, ನೀರಜಾ ಕುಲಕರ್ಣಿ, ಸಂಧ್ಯಾರಾಣಿ, ಸರೋಜಾ, ರೇಣುಕಾ, ಯಂಕಮ್ಮ, ಮಲ್ಲಮ್ಮ ಪತ್ರಿ, ಮಮತಾ ಮಾಠಪತಿ, ನೀಲಾಬಾಯಿ ರಾಥೋಡ್, ಲಕ್ಷ್ಮೀ ಲೋಕಪಲ್ಲಿ ಸೇರಿದಂತೆ ಮಹಿಳಾ ಘಟಕದ ಪದಾಧಿಕಾರಿಗಳು, ಕಾರ್ಯಕರ್ತೆಯರು ಉಪಸ್ಥಿತರಿದ್ದರು.






