Sedam | ಎಸೆಸೆಲ್ಸಿ ಪರೀಕ್ಷೆ : ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ಶೇ.100 ಫಲಿತಾಂಶ

ಸೇಡಂ: ತಾಲೂಕಿನ ಆಡಕಿ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಸಾಧಿಸಿ ಗಮನ ಸೆಳೆದಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ವಸತಿ ಶಾಲೆಯ ಪ್ರಾಂಶುಪಾಲ ಮಲ್ಲಕಪ್ಪ ಜಿ. ಬಿರಾದಾರ ಅವರು, ಒಟ್ಟು 47 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲ 47 ವಿದ್ಯಾರ್ಥಿಗಳೂ ಉತ್ತೀರ್ಣರಾಗುವ ಮೂಲಕ ಶೇ.100 ಫಲಿತಾಂಶ ದಾಖಲಿಸಿದ್ದಾರೆ ಎಂದು ತಿಳಿಸಿದರು.
ಫಲಿತಾಂಶದ ವಿವರಗಳಲ್ಲಿ 9 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 28 ಮಂದಿ ಉನ್ನತ ಶ್ರೇಣಿ, 7 ಮಂದಿ ದ್ವಿತೀಯ ಶ್ರೇಣಿ ಹಾಗೂ 3 ಮಂದಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳಲ್ಲಿ ಪೂಜಾ ಬಿ. (ಶೇ.91.36), ಸಂಗೀತ ಕೆ. (ಶೇ.90.72), ಶ್ರಾವಣಿ ಎಂ. (ಶೇ.89.28), ಕಿರಣಕುಮಾರ (ಶೇ.89.28), ಉಮೇಶ್ (ಶೇ.88.16), ನಂದಿನಿ ಪಿ. (ಶೇ.87.84), ಸೃಷ್ಟಿ (ಶೇ.87.04), ಗೌತಮಿ (ಶೇ.86.72) ಮತ್ತು ಆನಂದ ಎಂ. (ಶೇ.85.44) ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ವಿಶೇಷ ಸಾಧನೆ ತೋರಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಪ್ರಾಂಶುಪಾಲರು ಹಾಗೂ ಶಾಲಾ ಸಿಬ್ಬಂದಿ ಸಂತೋಷ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನವೇ ಈ ಯಶಸ್ಸಿಗೆ ಕಾರಣವೆಂದು ಅವರು ತಿಳಿಸಿದ್ದಾರೆ.






