Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸೇಡಂ | ಕರ್ನಾಟಕಕ್ಕೆ ಕಲ್ಯಾಣ ನಾಡಿನ...

ಸೇಡಂ | ಕರ್ನಾಟಕಕ್ಕೆ ಕಲ್ಯಾಣ ನಾಡಿನ ಕೊಡುಗೆ ಅಪಾರ: ದಶರಥ ಸಾವೂರ

ವಾರ್ತಾಭಾರತಿವಾರ್ತಾಭಾರತಿ24 July 2026 8:54 PM IST
share
ಸೇಡಂ | ಕರ್ನಾಟಕಕ್ಕೆ ಕಲ್ಯಾಣ ನಾಡಿನ ಕೊಡುಗೆ ಅಪಾರ: ದಶರಥ ಸಾವೂರ
ವೀರಭದ್ರ ಮಾಮನಿ ಸ್ಮರಣಾರ್ಥ ‘ಕಲ್ಯಾಣ ಕರ್ನಾಟಕ ಪ್ರಶಸ್ತಿ’ ಪ್ರದಾನ

ಸೇಡಂ: ಕರ್ನಾಟಕದ ಅಭಿವೃದ್ಧಿ ಹಾಗೂ ವಿವಿಧ ಕ್ಷೇತ್ರಗಳ ಬೆಳವಣಿಗೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕೊಡುಗೆ ಅಪಾರವಾಗಿದೆ. ಇಲ್ಲಿನ ಸಾಧಕರನ್ನು ಗುರುತಿಸಿ, ಅವರ ಸಾಧನೆಗಳನ್ನು ಸಮಾಜದ ಮುಂದೆ ತರುವ ಕೆಲಸವಾಗಬೇಕು ಎಂದು ಪತ್ರಕರ್ತ ದಶರಥ ಸಾವೂರ ಹೇಳಿದರು.

ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ದೇವಾಲಯದ ಸಭಾಭವನದಲ್ಲಿ ಬೊಮ್ನಳ್ಳಿ ಸುದ್ದಿ ಪ್ರತಿಷ್ಠಾನದ ವತಿಯಿಂದ ಹಿರಿಯ ಪತ್ರಕರ್ತ ದಿವಂಗತ ವೀರಭದ್ರ ಮಾಮನಿ ಸ್ಮರಣಾರ್ಥ ಆಯೋಜಿಸಿದ್ದ ‘ಕಲ್ಯಾಣ ಕರ್ನಾಟಕ ಪ್ರಶಸ್ತಿ’ ಹಾಗೂ ಶಿಕ್ಷಣ ತಜ್ಞ ದಿವಂಗತ ಶಿವಯ್ಯ ಮಠಪತಿ ಸ್ಮರಣಾರ್ಥ ‘ಶಿವಸಂಪದ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗವು ಪತ್ರಿಕೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಈ ಭಾಗದ ಸಾಧಕರ ಕೊಡುಗೆಗಳನ್ನು ಗುರುತಿಸಿ ಮುನ್ನೆಲೆಗೆ ತರುವ ಅಗತ್ಯವಿದೆ ಎಂದು ಅವರು ಹೇಳಿದರು.

ಪ್ರಶಸ್ತಿಗಳು ವ್ಯಕ್ತಿಯ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಇಂತಹ ಗೌರವಗಳು ಪತ್ರಕರ್ತರಲ್ಲಿ ಹೊಸ ಉತ್ಸಾಹ ತುಂಬಿ, ಇನ್ನಷ್ಟು ಉತ್ತಮ ಕಾರ್ಯನಿರ್ವಹಣೆಗೆ ಪ್ರೇರಣೆ ನೀಡುತ್ತವೆ ಎಂದು ಅಭಿಪ್ರಾಯಪಟ್ಟರು.

ಸಮಾರಂಭದಲ್ಲಿ ಮಾತನಾಡಿದ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ದಿವಂಗತ ವೀರಭದ್ರ ಮಾಮನಿ ಹಾಗೂ ಶಿವಯ್ಯ ಮಠಪತಿಯವರ ಸೇವೆ ಈ ಭಾಗಕ್ಕೆ ಅಪಾರವಾಗಿದೆ. ಅವರ ಮಾರ್ಗದರ್ಶನದಿಂದ ಅನೇಕರು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಿದ್ದಾರೆ ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪತ್ರಕರ್ತ ಪ್ರಶಸ್ತಿಯನ್ನು ದಶರಥ ಸಾವೂರ ಹಾಗೂ ಯಾದಗಿರಿಯ ಪತ್ರಕರ್ತ ಜಗದೀಶಸ್ವಾಮಿ ಅವರಿಗೆ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಚಂದ್ರಗುಂಡ ಶಿವಾಚಾರ್ಯರು ಹಾಗೂ ಬೊಮ್ನಳ್ಳಿ ಸುದ್ದಿ ಪ್ರತಿಷ್ಠಾನದ ಅಧ್ಯಕ್ಷ ಶಿವಯ್ಯಸ್ವಾಮಿ ಬಿಬ್ಬಳ್ಳಿ ಮಾತನಾಡಿದರು. ಮಹಿಪಾಲರೆಡ್ಡಿ ಮುನ್ನೂರ ಸ್ವಾಗತಿಸಿದರು. ಸಿದ್ದಯ್ಯಸ್ವಾಮಿ ಆಡಕಿ ಕಾರ್ಯಕ್ರಮ ನಿರೂಪಿಸಿದರು. ನಾಗಯ್ಯಸ್ವಾಮಿ ಬೊಮ್ನಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

KarnatakaSedam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X