Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸೇಡಂ | ವಾರ್ತಾಭಾರತಿ ವರದಿ ಫಲಶ್ರುತಿ :...

ಸೇಡಂ | ವಾರ್ತಾಭಾರತಿ ವರದಿ ಫಲಶ್ರುತಿ : ಮೂತ್ರಾಲಯಗಳ ಸ್ವಚ್ಛತಾ ಕಾರ್ಯ ಆರಂಭ

ವಾರ್ತಾಭಾರತಿವಾರ್ತಾಭಾರತಿ8 March 2026 7:50 AM IST
share
ಸೇಡಂ | ವಾರ್ತಾಭಾರತಿ ವರದಿ ಫಲಶ್ರುತಿ : ಮೂತ್ರಾಲಯಗಳ ಸ್ವಚ್ಛತಾ ಕಾರ್ಯ ಆರಂಭ

ಸೇಡಂ: ಪಟ್ಟಣ ಪುರಸಭೆ ಅವಧಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ಸಾರ್ವಜನಿಕ ಮೂತ್ರಾಲಯಗಳು ಸಮರ್ಪಕ ನಿರ್ವಹಣೆ ಕೊರತೆಯಿಂದ ದುರ್ವಾಸನೆ ಬೀರುತ್ತಿವೆ ಎಂಬ ಸುದ್ದಿ ಫೆ.26ರಂದು ವಾರ್ತಾ ಭಾರತಿ ಪತ್ರಿಕೆಯಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.

ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾದ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಮೂತ್ರಾಲಯಗಳ ಸ್ವಚ್ಛತಾ ಕಾರ್ಯ ಆರಂಭಗೊಂಡಿದ್ದು, ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ 2024-25ನೇ ಸಾಲಿನಲ್ಲಿ ಆಗಿನ ಪುರಸಭೆ ವತಿಯಿಂದ ಲೋಹಾರಗಲ್ಲಿ, ಕೊಡ್ಲಾ ಕ್ರಾಸ್, ಬಸವೇಶ್ವರ ವೃತ್ತ, ಚಿಂಚೋಳಿ ಕ್ರಾಸ್, ಊಡಗಿ ರಸ್ತೆ, ಹಳೆ ತಹಶೀಲ್ದಾರ್ ಕಚೇರಿ ರಸ್ತೆ, ಐಟಿಐ ಕಾಲೇಜು ರಸ್ತೆ ಹಾಗೂ ತಾಲೂಕು ಕ್ರೀಡಾಂಗಣ ರಸ್ತೆ ಸೇರಿ ಒಟ್ಟು ಎಂಟು ಸ್ಥಳಗಳಲ್ಲಿ ಸಾರ್ವಜನಿಕ ಮೂತ್ರಾಲಯಗಳನ್ನು ನಿರ್ಮಿಸಲಾಗಿತ್ತು.ಆದರೆ ನಿರಂತರ ನಿರ್ವಹಣೆ ಇಲ್ಲದ ಕಾರಣ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ಕುರಿತು ‘ನಿರ್ವಹಣೆ ಕೊರತೆಯಿಂದ ಗಬ್ಬೆದ್ದು ನಾರುತ್ತಿರುವ ಮೂತ್ರಾಲಯಗಳು’ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟವಾಗಿತ್ತು.

ಇದರ ಬೆನ್ನಲ್ಲೇ ಇದೀಗ ತಾಲೂಕು ಕ್ರೀಡಾಂಗಣ ಮುಖ್ಯರಸ್ತೆ, ಬಸವೇಶ್ವರ ವೃತ್ತ ಹಾಗೂ ತಹಶೀಲ್ದಾರ್ ಕಚೇರಿ ರಸ್ತೆಯ ಮೂತ್ರಾಲಯಗಳಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಉಳಿದ ಕಡೆಗಳಲ್ಲೂ ಸ್ವಚ್ಛ ಕಾರ್ಯ ಪೂರ್ಣಗೊಳ್ಳಲಿದೆ ಎಂದು ನಗರ ಆರೋಗ್ಯ ನಿರೀಕ್ಷಕ ಮಲ್ಲಿಕಾರ್ಜುನ ತಿಳಿಸಿದ್ದಾರೆ.

ನಗರಸಭೆಯ ಈ ಕ್ರಮಕ್ಕೆ ಸಾರ್ವಜನಿಕರಿಂದ ಸ್ವಾಗತ ವ್ಯಕ್ತವಾಗಿದ್ದು, ಮುಂದಿನ ದಿನಗಳಲ್ಲಿ ನಿಯಮಿತ ಸ್ವಚ್ಛತೆ ಹಾಗೂ ನಿರ್ವಹಣೆ ನಡೆಯಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.

ಸಾರ್ವಜನಿಕ ಮೂತ್ರಾಲಯಗಳಲ್ಲಿ ನೀರಿನ ಪೂರೈಕೆ ಮತ್ತು ಪೈಪ್‌ಲೈನ್ ದುರಸ್ತಿಸಂಬಂಧಪಟ್ಟ ಅಧಿಕಾರಿಗಳಗಮನಕ್ಕೆ ತರಲಾಗುವುದು. ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ.

-ಮಲ್ಲಿಕಾರ್ಜುನ, ಹಿರಿಯ ಆರೋಗ್ಯನಿರೀಕ್ಷಕರು, ಸೇಡಂ


Tags

Sedam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X