Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Sedam | ವಾರ್ತಾಭಾರತಿ ವರದಿ ಫಲಶ್ರುತಿ:...

Sedam | ವಾರ್ತಾಭಾರತಿ ವರದಿ ಫಲಶ್ರುತಿ: ಮತ್ತೆ ಆರಂಭಗೊಂಡ ಬಿಇಒ ಕಚೇರಿ ಕಟ್ಟಡ ಕಾಮಗಾರಿ

ವಾರ್ತಾಭಾರತಿವಾರ್ತಾಭಾರತಿ1 Oct 2026 6:38 PM IST
share
Sedam | ವಾರ್ತಾಭಾರತಿ ವರದಿ ಫಲಶ್ರುತಿ: ಮತ್ತೆ ಆರಂಭಗೊಂಡ ಬಿಇಒ ಕಚೇರಿ ಕಟ್ಟಡ ಕಾಮಗಾರಿ

ಸೇಡಂ: ಪಟ್ಟಣದಲ್ಲಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿ ಕಟ್ಟಡದ ಕಾಮಗಾರಿ ಇದೀಗ ಮತ್ತೆ ಆರಂಭಗೊಂಡಿದೆ. ಈ ಕುರಿತು ವಾರ್ತಾಭಾರತಿ ದಿನಪತ್ರಿಕೆಯಲ್ಲಿ ಏ. 29ರಂದು ಪ್ರಕಟಗೊಂಡ ವರದಿಗೆ ಅಧಿಕಾರಿಗಳು ಸ್ಪಂದಿಸಿದ್ದು, ಹೊಸ ಟೆಂಡರ್ ಮೂಲಕ ಕಾಮಗಾರಿಗೆ ಮರುಚಾಲನೆ ನೀಡಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಟ್ಟಡದ ಕಾಮಗಾರಿ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಅರ್ಧಕ್ಕೆ ನಿಂತಿತ್ತು. ಇದರಿಂದ ಶಿಕ್ಷಣ ಇಲಾಖೆಯ ವಿವಿಧ ಸೇವೆಗಳಿಗೆ ಆಗಮಿಸುವ ಶಿಕ್ಷಕರು ಹಾಗೂ ಸಾರ್ವಜನಿಕರು ಹಲವು ವರ್ಷಗಳಿಂದ ತೊಂದರೆ ಅನುಭವಿಸುವಂತಾಗಿತ್ತು. ಈ ಕುರಿತು ಪತ್ರಿಕೆ ವರದಿ ಪ್ರಕಟಿಸಿತ್ತು. ವರದಿ ಬಳಿಕ ಇದೀಗ ಹೊಸ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಲಾಗಿದ್ದು, ನಾಲ್ಕೈದು ತಿಂಗಳಲ್ಲಿ ಕಟ್ಟಡ ನಿರ್ಮಾಣ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯು ಹಳೆ ಜೂನಿಯರ್ ಕಾಲೇಜು ಆವರಣದಲ್ಲಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಶಿಥಿಲಾವಸ್ಥೆಯಲ್ಲಿರುವ ಈ ಕಟ್ಟಡದಲ್ಲಿ ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಕಚೇರಿಗೆ ಆಗಮಿಸುವ ಶಿಕ್ಷಕರು ಹಾಗೂ ಸಾರ್ವಜನಿಕರಿಗೆ ಸಮರ್ಪಕ ಆಸನ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳು ಇಲ್ಲದಿರುವುದರಿಂದ ತೊಂದರೆ ಅನುಭವಿಸುತ್ತಿದ್ದಾರೆ.

90 ಲಕ್ಷ ರೂ. ವೆಚ್ಚದ ಯೋಜನೆ :

2022-23ನೇ ಸಾಲಿನ ಡಿಎಂಎಫ್ ಯೋಜನೆಯಡಿ ಸುಮಾರು 90 ಲಕ್ಷ ರೂ. ವೆಚ್ಚದಲ್ಲಿ ನೂತನ ಬಿಇಒ ಕಚೇರಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ದೊರೆತಿತ್ತು. ಆಗಿನ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ ಅವರು ಕಾಮಗಾರಿಗೆ ಚಾಲನೆ ನೀಡಿದ್ದರು. ಕಲಬುರಗಿ ಮೂಲದ ಗುತ್ತಿಗೆದಾರರಿಗೆ ಟೆಂಡರ್ ನೀಡಲಾಗಿತ್ತು. ಆರಂಭಿಕ ಹಂತದ ಕಾಮಗಾರಿ ನಡೆದ ಬಳಿಕ ಕಾಮಗಾರಿ ಸ್ಥಗಿತಗೊಂಡಿತ್ತು ಎಂದು ತಿಳಿದುಬಂದಿದೆ.

ಇದೀಗ ಹೊಸ ಟೆಂಡರ್ ಮೂಲಕ ಕಾಮಗಾರಿ ಪುನರಾರಂಭಗೊಂಡಿದ್ದು, ಕಟ್ಟಡ ನಿರ್ಮಾಣದ ವೇಳೆ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಯಾವುದೇ ಕಾರಣಕ್ಕೂ ಕಳಪೆ ಗುಣಮಟ್ಟದ ಕಾಮಗಾರಿ ನಡೆಯದಂತೆ ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

“ಹಿಂದಿನ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾಮಗಾರಿ ಅರ್ಧಕ್ಕೆ ನಿಂತಿತ್ತು. ಇದೀಗ ಹೊಸ ಟೆಂಡರ್ ಮೂಲಕ ಕಾಮಗಾರಿ ಪುನರಾರಂಭಿಸಲಾಗಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಕಳಪೆ ಗುಣಮಟ್ಟದ ಕಾಮಗಾರಿ ನಡೆಯದಂತೆ ನಿಗಾ ವಹಿಸಲಾಗುವುದು” ಎಂದು ಇಂಜಿನಿಯರಿಂಗ್ ಉಪವಿಭಾಗದ ಎಇಇ ವಿಶ್ವನಾಥ್ ತಿಳಿಸಿದ್ದಾರೆ.

“ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾಮಗಾರಿ ಪೂರ್ಣಗೊಳಿಸುವಂತೆ ಸಂಘಟನೆಯ ವತಿಯಿಂದ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು. ಪತ್ರಿಕೆಯಲ್ಲಿ ವರದಿ ಪ್ರಕಟವಾದ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡು ಅರ್ಧಕ್ಕೆ ನಿಂತಿದ್ದ ಕಾಮಗಾರಿಯನ್ನು ಪುನರಾರಂಭಿಸಿರುವುದು ಸ್ವಾಗತಾರ್ಹ” ಎಂದು ಜಯ ಕರ್ನಾಟಕ ವೇದಿಕೆ ಉಪಾಧ್ಯಕ್ಷ ವರದಾ ಸ್ವಾಮಿ ಬಿ. ಹಿರೇಮಠ ತಿಳಿಸಿದ್ದಾರೆ.

Tags

VartabharatiSedam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X