Sedam | ವಾರ್ತಾಭಾರತಿ ವರದಿ ಫಲಶ್ರುತಿ : ಅರ್ಧಕ್ಕೆ ನಿಲ್ಲಿಸಿದ ಶೌಚಾಲಯ ಕಾಮಗಾರಿಗೆ ಸಿಎಂ ಕಚೇರಿಯಿಂದ ಸ್ಪಂದನೆ

ಸೇಡಂ: ತಾಲೂಕಿನ ಯಡಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಬ್ಬಳ್ಳಿ ಗ್ರಾಮದಲ್ಲಿ ಸಾಮೂಹಿಕ ಶೌಚಾಲಯ ಕಾಮಗಾರಿ ಅರ್ಧಕ್ಕೆ ನಿಂತಿರುವ ಕುರಿತು ವಾರ್ತಾಭಾರತಿ ಪ್ರಕಟಿಸಿದ ವಿಶೇಷ ವರದಿಗೆ ಮುಖ್ಯಮಂತ್ರಿ ಕಚೇರಿ ಸ್ಪಂದಿಸಿದೆ.
ಈ ಸಂಬಂಧ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ. ವೈಷ್ಣವಿ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದು, ಕಾಮಗಾರಿ ಸ್ಥಗಿತಗೊಂಡಿರುವ ಕುರಿತು ವಾಸ್ತವಾಂಶ ಪರಿಶೀಲಿಸಿ ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಇದರ ಬೆನ್ನಲ್ಲೇ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಸಂಕನೂರ ಅವರು ಸೇಡಂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಜೊತೆಗೆ, ಕೈಗೊಂಡ ಕ್ರಮಗಳ ಕುರಿತು ಅನುಪಾಲನಾ ವರದಿ ಸಲ್ಲಿಸುವಂತೆಯೂ ಸೂಚಿಸಲಾಗಿದೆ.
Next Story






