ಸೇಡಂ | ಜ.25 ರಂದು ಸಾವಿತ್ರಿಬಾಯಿ ಫುಲೆ ಜಯಂತಿ : : ಡಾ.ಪ್ರಮೀಳಾ ಪಾಟೀಲ್

ಸೇಡಂ: ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ನಗರದ ನೌಕರರ ಭವನದಲ್ಲಿ ರವಿವಾರ ಬೆಳಗ್ಗೆ 11 ಗಂಟೆಗೆ ಮಹಾತ್ಮೆ ಸಾವಿತ್ರಿಬಾಯಿ ಫುಲೆ ಅವರ 195ನೇ ಜಯಂತ್ಯೋತ್ಸವದ ಅಂಗವಾಗಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಮಾತೆ ಸಾವಿತ್ರಿಬಾಯಿ ಫುಲೆ ಹಾಗೂ ಜ್ಯೋತಿಬಾ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಎರಡು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷೆ ಡಾ.ಪ್ರಮೀಳಾ ಪಾಟೀಲ ಎಸ್.ಬಿಬ್ಬಳ್ಳಿ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಹಾಲಪ್ಪಯ್ಯ ವಿರಕ್ತ ಮಠದ ಶ್ರೀ ಪಂಚಾಕ್ಷರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದು, ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಭಾಗ್ಯಶ್ರೀ ಶರಣಪ್ರಕಾಶ ಪಾಟೀಲ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಸಾವಿತ್ರಿಬಾಯಿ ಫುಲೆ ಸಂಘದ ಸಂಸ್ಥಾಪಕ ಅಧ್ಯಕ್ಷೆ ಡಾ.ಲತಾ ಎಸ್.ಮುಳ್ಳೂರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಸಂತೋಷಿರಾಣಿ ರಾಜಕುಮಾರ ಪಾಟೀಲ ತೆಲ್ಕೂರ, ಪಲ್ಲವಿ ಬಾಲರಾಜ ಗುತ್ತೇದಾರ, ಸಾವಿತ್ರಿಬಾಯಿ ಫುಲೆ ಜಿಲ್ಲಾಧ್ಯಕ್ಷೆ ಸೇವಂತಾ ಚವ್ಹಾಣ, ಪ್ರಧಾನ ಕಾರ್ಯದರ್ಶಿ ಸಾವಿತ್ರಿ ಪಾಟೀಲ ಅವರು ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ. ನಿವೃತ್ತ ಪ್ರಾಧ್ಯಾಪಕ ಸಿದ್ದಲಿಂಗಪ್ಪ ಬೀಳಗಿ ಹಾಗೂ ಕಸಾಪ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರು ಅವರು ಪುಸ್ತಕ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಭಾಜನರಾದ ಶಿವಯ್ಯ ಸ್ವಾಮಿ ಬಿಬ್ಬಳ್ಳಿ, ಮಂಗಲಾ ಕಪರೆ, ಶೋಭಾದೇವಿ ಚಕ್ಕಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಾರುತಿ ಹುಜರಾತಿ, ಕ್ಷೇತ್ರ ಸಮನ್ವಯಾಧಿಕಾರಿ ಶಂಕರಲಿಂಗಪ್ಪ, ಅಕ್ಷರ ದಾಸೋಹದ ಉಮಾಪತಿ ರಾಜು, ನೌಕರರ ಸಂಘದ ಅಧ್ಯಕ್ಷ ಅರವಿಂದ ಪಸಾರ, ಮುಖ್ಯ ಗುರುಗಳ ಸಂಘದ ಅಧ್ಯಕ್ಷ ಅಶೋಕರೆಡ್ಡಿ ಚಿಲುಮೆ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅನೀಲ ಸುಬೇದಾರ, ಗೃಹ ನಿರ್ಮಾಣ ಸಂಘದ ಅಧ್ಯಕ್ಷ ನಾಗಪ್ಪ ಹೊನ್ನಳ್ಳಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ ಹೂಗಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಯ್ಯ ಗುತ್ತೇದಾರ, ತಾಲ್ಲೂಕು ಅಧ್ಯಕ್ಷ ಬಸವರಾಜ ಸಾಗರ, ಪ್ರಾಥಮಿಕ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ಸಕ್ರೆಪ್ಪ ಕುಂಬಾರ, ಜಿಪಿಟಿ ಸಂಘದ ಅಧ್ಯಕ್ಷ ಲಕ್ಷ್ಮಣ ರಂಜೋಳಕರ್, ದೈಹಿಕ ಶಿಕ್ಷಣ ವಿಭಾಗದ ಅಧ್ಯಕ್ಷೆ ರತ್ನಮ್ಮ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಲಲಿತಾ ಸಂಗಮೇಶ ಹಾಗೂ ಕೋಶಾಧ್ಯಕ್ಷೆ ಕಸ್ತೂರಿ ಸೇಡಂಕರ್ ಉಪಸ್ಥಿತರಿದ್ದರು.
ಎರಡು ಕೃತಿ ಲೋಕಾರ್ಪಣೆ :
ಡಾ.ಪ್ರಮೀಳಾ ಪಾಟೀಲ ಎಸ್. ಬಿಬ್ಬಳ್ಳಿ ಅವರು ರಚಿಸಿದ ‘ನೀನಿಲ್ಲದೇ ಏನಿದೆ’ ಹಾಗೂ ‘ಹೊಂಬಿಸಿಲು’ ಎಂಬ ಎರಡು ಕೃತಿಗಳ ಲೋಕಾರ್ಪಣೆ ನಡೆಯಲಿದೆ.
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 50 ಮಂದಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.







