ಕಲಬುರಗಿ ಪಾಲಿಕೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಆಯ್ಕೆ

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಚುನಾವಣೆ ಗುರುವಾರ ಪಾಲಿಕೆಯ ಇಂದಿರಾ ಸ್ಮಾರಕ ಭವನ (ಟೌನ್ ಹಾಲ್)ದಲ್ಲಿ ಮೇಯರ್ ಶೇಕ್ ಅಜ್ಮಲ್ ಗೋಲಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕರ, ಹಣಕಾಸು ಹಾಗೂ ಮೇಲ್ಮನವಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೈಯದಾ ನೂರ್ ಫಾತಿಮಾ ಜೈದಿ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರೇಣುಕಾ ಪರಶುರಾಮ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೈಯದಾ ಮಸೀರಾ ನಸ್ರೀನ್ ಹಾಗೂ ಲೆಕ್ಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ತಹಸೀನ್ ಆಯ್ಕೆಯಾಗಿದ್ದಾರೆ ಎಂದು ಸಭಾ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಉಪ ಮೇಯರ್ ಫರ್ಹಾನಾಜ (ಫರ್ಹಾ ಖುಸ್ರೋ ಜಾಗಿರದಾರ), ಆಯುಕ್ತ ಶಿಂಧೆ ಅವಿನಾಶ ಸಂಜೀವನ್ ಹಾಗೂ ಪಾಲಿಕೆಯ ಇತರೆ ಅಧಿಕಾರಿ-ಸಿಬ್ಬಂದಿ ಉಪಸ್ಥಿತರಿದ್ದರು.
Next Story




