Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಫಜಲಪುರ | ಎಂಆರ್‌ಪಿ ದರಕ್ಕಿಂತ...

ಅಫಜಲಪುರ | ಎಂಆರ್‌ಪಿ ದರಕ್ಕಿಂತ ಹೆಚ್ಚಿಗೆ ಮಾರಾಟ ಮಾಡಿದರೆ ಕಠಿಣ ಕ್ರಮ: ಡಾ. ಬಾಲರಾಜ ಬಿರಾದಾರ

ವಾರ್ತಾಭಾರತಿವಾರ್ತಾಭಾರತಿ4 Jun 2026 11:34 PM IST
share
ಅಫಜಲಪುರ | ಎಂಆರ್‌ಪಿ ದರಕ್ಕಿಂತ ಹೆಚ್ಚಿಗೆ ಮಾರಾಟ ಮಾಡಿದರೆ ಕಠಿಣ ಕ್ರಮ: ಡಾ. ಬಾಲರಾಜ ಬಿರಾದಾರ

ಅಫಜಲಪುರ: ಹತ್ತಿ ಬೀಜ ಖರೀದಿಸುವ ರೈತರು ಅಧಿಕೃತ ಆಗ್ರೋ ಕೇಂದ್ರಗಳಿಂದ ಮಾತ್ರ ಬೀಜಗಳನ್ನು ಖರೀದಿಸಬೇಕು. ಖಾಸಗಿ ವ್ಯಕ್ತಿಗಳಿಂದ ಯಾವುದೇ ಕಾರಣಕ್ಕೂ ಬೀಜ ಖರೀದಿಸಬಾರದು ಎಂದು ಕೃಷಿ ಉಪನಿರ್ದೇಶಕ ಡಾ. ಬಾಲರಾಜ ಬಿರಾದಾರ ರೈತರಿಗೆ ಎಚ್ಚರಿಕೆ ನೀಡಿದರು.

ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಕೃಷಿ ಪರಿಕರ ಮಾರಾಟಗಾರರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳಿಂದ ನಕಲಿ ಹತ್ತಿ ಬೀಜಗಳು ರಾಜ್ಯಕ್ಕೆ ಬರುತ್ತಿರುವ ಬಗ್ಗೆ ಮಾಹಿತಿ ದೊರೆತಿದ್ದು, ರೈತರು ಜಾಗರೂಕರಾಗಿ ಅಧಿಕೃತ ಮಾರಾಟ ಕೇಂದ್ರಗಳಿಂದಲೇ ಬೀಜ ಖರೀದಿಸಬೇಕು ಎಂದು ಸಲಹೆ ನೀಡಿದರು.

ಆಗ್ರೋ ಕೇಂದ್ರಗಳ ಮಾಲಕರು ಎಂಆರ್‌ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ಬೀಜ ಅಥವಾ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಅವರ ಪರವಾನಗಿಯನ್ನು ರದ್ದುಪಡಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ ಅವರು, ರೈತರಿಗೆ ಕಡ್ಡಾಯವಾಗಿ ಖರೀದಿ ರಸೀದಿ ನೀಡಬೇಕು ಎಂದು ಸೂಚಿಸಿದರು. ರೈತ ಸಂಪರ್ಕ ಕೇಂದ್ರಗಳಲ್ಲಿ ತೊಗರಿ, ಹೆಸರು ಮತ್ತು ಉದ್ದು ಬೀಜಗಳ ಮಾರಾಟ ಈಗಾಗಲೇ ಆರಂಭಗೊಂಡಿದ್ದು, ಈ ಬಾರಿ ಬೀಜದ ಕೊರತೆ ಇಲ್ಲ ಎಂದು ತಿಳಿಸಿದರು.

ಅಲ್ಪ ಪ್ರಮಾಣದ ಮಳೆಯಾದ ತಕ್ಷಣ ಬಿತ್ತನೆಗೆ ಮುಂದಾಗದೆ, ಸಮರ್ಪಕ ಮಳೆ ಬಿದ್ದು ಭೂಮಿಯಲ್ಲಿ ತೇವಾಂಶ ಹೆಚ್ಚಾದ ಬಳಿಕವೇ ಬಿತ್ತನೆ ಕೈಗೊಳ್ಳಬೇಕು ಎಂದು ರೈತರಿಗೆ ಸಲಹೆ ನೀಡಿದರು.

ತಹಶೀಲ್ದಾರ್ ಸಂಜೀವಕುಮಾರ ದಾಸರ ಮಾತನಾಡಿ, ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಬೀಜ ಮತ್ತು ರಸಗೊಬ್ಬರ ಮಾರಾಟವಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಹಾಗೂ ಮಾರಾಟಗಾರರು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು. ಕಳಪೆ ಅಥವಾ ನಕಲಿ ಬೀಜ ಪೂರೈಕೆ ಕಂಡುಬಂದರೆ ತಕ್ಷಣ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದರು.

ತಾಲೂಕಿನಲ್ಲಿ ಸದ್ಯ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಇಲ್ಲ ಎಂದು ತಿಳಿಸಿದ ಅವರು, ಕಾಳಸಂತೆಯಲ್ಲಿ ಬೀಜ ಮಾರಾಟ ಕಂಡುಬಂದರೆ ಕೂಡಲೇ ಮಾಹಿತಿ ನೀಡುವಂತೆ ಮನವಿ ಮಾಡಿದರು. ಬೀಜ ಮತ್ತು ರಸಗೊಬ್ಬರ ವಿತರಣೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಹಾಗೂ ಎಲ್ಲಾ ಅಂಗಡಿಗಳ ಮುಂದೆ ದರಪಟ್ಟಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಸೂಚಿಸಿದರು.

ಸಹಾಯಕ ಕೃಷಿ ಅಧಿಕಾರಿ ಎಸ್.ಎಚ್. ಗಡಗಿಮನಿ ಮಾತನಾಡಿ, ರಸಗೊಬ್ಬರದ ಚೀಲಗಳ ಮೇಲೆ ಮುದ್ರಿಸಿರುವ ದರವನ್ನು ಪರಿಶೀಲಿಸಿ ಅದೇ ದರಕ್ಕೆ ಮಾರಾಟ ಮಾಡಬೇಕು ಎಂದು ಮಾರಾಟಗಾರರಿಗೆ ಸೂಚಿಸಿದರು. ರೈತರು ರಸಗೊಬ್ಬರಗಳನ್ನು ಸಮತೋಲಿತ ಪ್ರಮಾಣದಲ್ಲಿ ಬಳಸಬೇಕು ಹಾಗೂ ಕಡ್ಡಾಯವಾಗಿ ಎಫ್‌ಐಡಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು. ಅಂಗಡಿ ಮಾಲಕರು ರೈತರೊಂದಿಗೆ ಗೌರವಯುತವಾಗಿ ವರ್ತಿಸುವಂತೆ ಕರೆ ನೀಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮಳೇಂದ್ರ ಡಾಂಗೆ ಮಾತನಾಡಿ, ರೈತರಿಗೆ ಯಾವುದೇ ತೊಂದರೆ ಆಗದಂತೆ ಕೃಷಿ ಇಲಾಖೆ ಅಗತ್ಯ ಪ್ರಮಾಣದಲ್ಲಿ ಬೀಜ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು. ರೈತರಿಂದ ಹೆಚ್ಚುವರಿ ಹಣ ಪಡೆದು ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಕಲಿ ಬೀಜ ಮತ್ತು ರಸಗೊಬ್ಬರಗಳ ಮಾರಾಟ ತಡೆಯಲು ಜಾಗೃತಿ ಹಾಗೂ ಕಟ್ಟುನಿಟ್ಟಿನ ನಿಗಾವಹಿಸುವ ಅಗತ್ಯವಿದೆ ಎಂದು ಹೇಳಿದರು.

ಸಭೆಯಲ್ಲಿ ತಾಲೂಕು ಕೃಷಿಕ ಸಮಾಜದ ಸದಸ್ಯರು, ರೈತ ಮುಖಂಡರು, ಆಗ್ರೋ ಮಾಲೀಕರು, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ರೈತರು ಭಾಗವಹಿಸಿದ್ದರು.

Tags

Dr. Balaraj BiradarAfzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X