ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಮೃತ್ಯು : ಸಚಿವ ಪ್ರಿಯಾಂಕ ಖರ್ಗೆ ಸಂತಾಪ

ಕಲಬುರಗಿ : ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಹಿನ್ನೆಲೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿಯು ಅತ್ಯಂತ ನೋವಿನ ಸಂಗತಿಯಾಗಿದೆ. ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅವರು ಕರ್ತವ್ಯನಿಷ್ಠೆ, ದಕ್ಷತೆ, ಜನಪರ ನಿಲುವುಗಳಿಂದ ಜನಮಾನಸದಲ್ಲಿ ಅಚ್ಚಳಿಯದ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ, ದುಃಖದಲ್ಲಿರುವ ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
Next Story





