Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಇ-ಪೌತಿ ಪ್ರಕರಣ ಕಾಲಮಿತಿಯೊಳಗೆ...

ಇ-ಪೌತಿ ಪ್ರಕರಣ ಕಾಲಮಿತಿಯೊಳಗೆ ಇತ್ಯರ್ಥಗೊಳಿಸಿ : ಡಿಸಿಎಂ ಜಿ.ಪರಮೇಶ್ವರ್‌

ವಾರ್ತಾಭಾರತಿವಾರ್ತಾಭಾರತಿ7 July 2026 7:55 PM IST
share
ಇ-ಪೌತಿ ಪ್ರಕರಣ ಕಾಲಮಿತಿಯೊಳಗೆ ಇತ್ಯರ್ಥಗೊಳಿಸಿ : ಡಿಸಿಎಂ ಜಿ.ಪರಮೇಶ್ವರ್‌
ಕಲಬುರಗಿ ವಿಭಾಗದ 32 ದೇವಾಲಯಗಳ ಸಮಗ್ರ ಅಭಿವೃದ್ಧಿಗೆ ಕಾರ್ಯ ಯೋಜನೆ ರೂಪಿಸಲು ಸೂಚನೆ

ಕಲಬುರಗಿ: ಕಲಬುರಗಿ ಕಂದಾಯ ವಿಭಾಗದಲ್ಲಿ ಬಾಕಿ ಉಳಿದಿರುವ 2,23,190 ಇ-ಪೌತಿ ಪ್ರಕರಣಗಳನ್ನು ನಿಗದಿತ ಕಾಲಮಿತಿಯೊಳಗೆ ಇತ್ಯರ್ಥಗೊಳಿಸುವಂತೆ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ. ಪರಮೇಶ್ವರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಒಟ್ಟು 3,57,024 ಇ-ಪೌತಿ ಪ್ರಕರಣಗಳಲ್ಲಿ ಇದುವರೆಗೆ 1,33,834 ಪ್ರಕರಣಗಳನ್ನು ಮಾತ್ರ ಇತ್ಯರ್ಥಗೊಳಿಸಲಾಗಿದೆ. ವಿವಿಧ ಕಾರಣಗಳಿಂದ ಬಾಕಿ ಉಳಿದಿರುವ 2,23,190 ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ವಿಜಯನಗರ, ಕಲಬುರಗಿ, ಬೀದರ್ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಅತಿ ಹೆಚ್ಚು ಇ-ಪೌತಿ ಪ್ರಕರಣಗಳು ಬಾಕಿ ಉಳಿದಿದ್ದು, ಅವುಗಳನ್ನು ಆದ್ಯತೆಯ ಮೇರೆಗೆ ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು.

ಒಟ್ಟು 17,576 ದರ್ಖಾಸ್ತು ಪ್ರಕರಣಗಳಲ್ಲಿ 10,775 ಪ್ರಕರಣಗಳಿಗೆ ಅನುಬಂಧ-1ಎ ಮಂಜೂರಾಗಿದ್ದು, ಈ ಪ್ರಕರಣಗಳಲ್ಲಿ ಕೂಡಲೇ ಪೋಡಿ ದುರಸ್ತಿ ಮಾಡಿ ಆರ್‌ಟಿಸಿ ನೀಡಬೇಕು. ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಕರಣಗಳಿರುವುದರಿಂದ ಜಿಲ್ಲಾಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದರು.

ಕಲಬುರಗಿ ವಿಭಾಗದಲ್ಲಿ 1,483 ಹೊಸ ಕಂದಾಯ ಗ್ರಾಮಗಳನ್ನು ರಚಿಸಬೇಕಿದ್ದು, ಇದುವರೆಗೆ 1,048 ಗ್ರಾಮಗಳಿಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. ಉಳಿದ 435 ಗ್ರಾಮಗಳಿಗೆ ಅಧಿಸೂಚನೆ ಹೊರಡಿಸಲು ಕ್ರಮ ಕೈಗೊಳ್ಳಬೇಕು. ಜನಗಣತಿ–2027 ಬಳಿಕ ಅಂತಿಮ ಅಧಿಸೂಚನೆ ಹೊರಡಿಸುವ ಕಾರ್ಯವನ್ನು ವಿಳಂಬವಿಲ್ಲದೆ ಪೂರ್ಣಗೊಳಿಸುವಂತೆ ಸೂಚಿಸಿದರು.

ಕಲಬುರಗಿ ವಿಭಾಗದಲ್ಲಿ ಪ್ರವರ್ಗ ‘ಎ’ಗೆ ಸೇರಿದ 32 ಅಧಿಸೂಚಿತ ದೇವಾಲಯಗಳ ಸಮಗ್ರ ಅಭಿವೃದ್ಧಿಗೆ ಕಾರ್ಯಯೋಜನೆ ರೂಪಿಸಬೇಕು. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ನಾಲ್ಕು ದೇವಾಲಯಗಳ ಒಟ್ಟು 32.26 ಎಕರೆ ಒತ್ತುವರಿ ಜಮೀನನ್ನು ತೆರವುಗೊಳಿಸಿ ಇಲಾಖೆಯ ಸುಪರ್ದಿಗೆ ಪಡೆಯಬೇಕು. ಮುಂದಿನ ದಿನಗಳಲ್ಲಿ ದೇವಾಲಯಗಳ ಆಸ್ತಿಗಳ ಒತ್ತುವರಿ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ವಿಭಾಗದಲ್ಲಿ ಒಟ್ಟು 7,606 ದೇವಾಲಯಗಳಿದ್ದು, ಇದುವರೆಗೆ 2,635 ದೇವಾಲಯಗಳ ಖಾತೆ ಮಾಡಲಾಗಿದೆ. ಬಾಕಿ ಉಳಿದಿರುವ 4,971 ದೇವಾಲಯಗಳ ಖಾತೆ ಪ್ರಕ್ರಿಯೆಯನ್ನು ಸಂಬಂಧಿತ ತಹಶೀಲ್ದಾರರು ಆದ್ಯತೆಯ ಮೇರೆಗೆ ಪೂರ್ಣಗೊಳಿಸುವಂತೆ ಸೂಚಿಸಿದರು.

Tags

G.Parameshwara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X