Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅ.30ರಿಂದ ಕಲಬುರಗಿಯಲ್ಲಿ ಎಸ್ಎಫ್ಐ 17ನೇ...

ಅ.30ರಿಂದ ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ; ಸ್ವಾಗತ ಸಮಿತಿ ರಚನೆಗೆ ಸಭೆ

ವಾರ್ತಾಭಾರತಿವಾರ್ತಾಭಾರತಿ7 Sept 2026 6:57 PM IST
share
ಅ.30ರಿಂದ ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ; ಸ್ವಾಗತ ಸಮಿತಿ ರಚನೆಗೆ ಸಭೆ

ಕಲಬುರಗಿ, ಸೆ.8: ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) 17ನೇ ರಾಜ್ಯ ಸಮ್ಮೇಳನವನ್ನು ಅ.30, 31 ಹಾಗೂ ನ.1ರಂದು ಕಲಬುರಗಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಸಮ್ಮೇಳನದ ಯಶಸ್ವಿ ಆಯೋಜನೆಗಾಗಿ ಸ್ವಾಗತ ಸಮಿತಿ ರಚನೆ ಕುರಿತು ನಗರದ ಕನ್ನಡ ಭವನದಲ್ಲಿ ಸೋಮವಾರ ಸಭೆ ನಡೆಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಗತಿಪರ ಚಿಂತಕ ಆರ್.ಕೆ. ಹುಡುಗಿ, ಎಸ್ಎಫ್ಐ ದೇಶದ ಪ್ರಮುಖ ಸೈದ್ಧಾಂತಿಕ ವಿದ್ಯಾರ್ಥಿ ಸಂಘಟನೆಗಳಲ್ಲಿ ಒಂದಾಗಿದ್ದು, ಅದರ 17ನೇ ರಾಜ್ಯ ಸಮ್ಮೇಳನವನ್ನು ತೊಗರಿಯ ನಾಡು ಕಲಬುರಗಿಯಲ್ಲಿ ಆಯೋಜಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಹೇಳಿದರು.

ಸಮ್ಮೇಳನ ಯಶಸ್ವಿಯಾಗಲು ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ ಅವರು, ವಿದ್ಯಾರ್ಥಿ ಚಳವಳಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಸಮ್ಮೇಳನ ಮಹತ್ವದ ವೇದಿಕೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಸಾಹಿತಿಗಳಾದ ಕೆ. ನೀಲಾ, ಮೀನಾಕ್ಷಿ ಬಾಳಿ, ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್., ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ, ಸಾಹಿತಿ ಡಾ. ಜಯದೇವಿ ಗಾಯಕವಾಡ, ಪ್ರಗತಿಪರ ಚಿಂತಕ ಅಫ್ಜಲ್ ಮೆಹಮೂದ್, ಎಸ್ಎಫ್ಐ ಮಾಜಿ ರಾಜ್ಯ ಮುಖಂಡ ಸಿ.ಬಿ. ಪಾಟೀಲ ಒಕಳಿ, ಹಾಸ್ಟೆಲ್ ಹೊರಗುತ್ತಿಗೆ ನೌಕರರ ಸಿಬ್ಬಂದಿ ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಅಸ್ಗರ ಅಲಿ ಚುಲಬುಲ್, ದಲಿತಪರ ಮುಖಂಡರಾದ ಅರ್ಜುನ ಭದ್ರೆ, ಮರೆಯಪ್ಪ ಹಳ್ಳಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಆರ್.ಜಿ. ಶೆಟ್ಕಾರ್ ಸೇರಿದಂತೆ ವಿವಿಧ ಕ್ಷೇತ್ರಗಳ ಮುಖಂಡರು ಭಾಗವಹಿಸಿ ಸಮ್ಮೇಳನದ ಯಶಸ್ಸಿಗೆ ಸಲಹೆ-ಸೂಚನೆಗಳನ್ನು ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ಎಸ್ಎಫ್ಐ ರಾಜ್ಯಾಧ್ಯಕ್ಷ ಶಿವಪ್ಪ ಅಂಬ್ಲಿಕಲ್ ವಹಿಸಿದ್ದರು. ರಾಜ್ಯ ಕಾರ್ಯದರ್ಶಿ ವಿಜಯಕುಮಾರ್ ಟಿ.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಇಮಾಮ್ ಸಾಬ್ ನದಾಫ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಗುಳೆದಾಳ, ಜಿಲ್ಲಾಧ್ಯಕ್ಷ ಸರ್ವೆಶ್ ಪಿ. ಮಾವಿನಕರ್, ಕಾರ್ಯದರ್ಶಿ ಸುಜಾತ ವೈ., ಉಪಾಧ್ಯಕ್ಷೆ ಪ್ರೇಮ, ಮುಖಂಡರಾದ ಮಂಜು, ಪ್ರದೀಪ್ ಮ್ಯಾಗಡಿ, ತಯಣ್ಣ, ನಾಗರಾಜ್, ಬೃಂದಾ ಎಸ್., ಸಿಐಟಿಯು ಕಾರ್ಯದರ್ಶಿ ಶಾಂತ ಎಸ್. ಘಂಟೆ, ದೇವದಾಸಿ ಮಹಿಳಾ ಸಂಘದ ಚಂದಾಮ್ಮ, ಕಟ್ಟಡ ಕಾರ್ಮಿಕ ಮುಖಂಡರಾದ ಶ್ರೀಮಂತ ಬಿರಾದಾರ, ನಾಗಪ್ಪ ರಾಯಚೂರುಕರ್, ಡಿವೈಎಫ್ಐ ಜಿಲ್ಲಾಧ್ಯಕ್ಷೆ ಸಮೀನಾ, ಸಾಮೂಹಿಕ ಸಂಘಟನೆಗಳ ಮುಖಂಡರಾದ ಸುಧಾಮ ಧನ್ನಿ, ಪಾಂಡುರಂಗ ಮಾವಿನಕರ್ ಸೇರಿದಂತೆ ಎಸ್ಎಫ್ಐ ಜಿಲ್ಲಾ ಸಮಿತಿ ಸದಸ್ಯರು, ವಿವಿಧ ತಾಲೂಕುಗಳ ಮುಖಂಡರು, ಚಳುವಳಿಯ ಹಿತೈಷಿಗಳು ಹಾಗೂ ಸಾಮೂಹಿಕ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

Tags

KalaburagiSFI
share
ವಾರ್ತಾಭಾರತಿ
ವಾರ್ತಾಭಾರತಿ
Next Story
X