ಶಹಾಬಾದ್ | ಜ.20ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ: ಕೃಷ್ಣಪ್ಪ ಕರಣಿಕ

ಶಹಾಬಾದ್: ತಾಲೂಕ ಕಚೇರಿಗಳನ್ನು ಕೂಡಲೇ ಪ್ರಾರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜ.20ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಒಂದು ದಿನದ ಸಾಂಕೇತಿಕ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಕೃಷ್ಣಪ್ಪ ಕರಣಿಕ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ತಾಲೂಕಿನ ವಿವಿಧ ಗ್ರಾಮಗಳಲ್ಲಿ ದಲಿತರಿಗೆ ಸ್ಮಶಾನ ಭೂಮಿ ಮಂಜೂರು ಮಾಡಬೇಕು, ಅಂಗನವಾಡಿ ಮೇಲ್ವಿಚಾರಕಿಯ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದರು.
ಧರಣಿ ಸತ್ಯಾಗ್ರಹದಲ್ಲಿ ಶಹಾಬಾದ್‌ನ ಪ್ರಗತಿ ಪರ ಚಿಂತಕರು, ನಾಗರಿಕರು, ಕಾರ್ಮಿಕರು, ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
Next Story





