Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಶಹಾಬಾದ್ | ಯುವ ಸಂಸತ್ ಕಾರ್ಯಕ್ರಮದಲ್ಲಿ...

ಶಹಾಬಾದ್ | ಯುವ ಸಂಸತ್ ಕಾರ್ಯಕ್ರಮದಲ್ಲಿ ಮರಗೋಳ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ವಾರ್ತಾಭಾರತಿವಾರ್ತಾಭಾರತಿ12 Nov 2026 9:32 PM IST
share
ಶಹಾಬಾದ್ | ಯುವ ಸಂಸತ್ ಕಾರ್ಯಕ್ರಮದಲ್ಲಿ ಮರಗೋಳ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಶಹಾಬಾದ್: ನಗರದ ಸೇಂಟ್ ಥಾಮಸ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಯುವ ಸಂಸತ್ ಕಾರ್ಯಕ್ರಮದಲ್ಲಿ ಎಸ್.ಎಸ್. ಮರಗೋಳ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಶಿವಕುಮಾರ ಅವರು ಅತ್ಯುತ್ತಮ ಮುಖ್ಯಮಂತ್ರಿ ಹಾಗೂ ಬಾಬು ಅವರು ಅತ್ಯುತ್ತಮ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಾರೆ. ಈ ಸಾಧನೆಗಾಗಿ ಕಾಲೇಜಿನ ವತಿಯಿಂದ ಇಬ್ಬರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿ ಶಿವಕುಮಾರ, ಯುವ ಸಂಸತ್ ಕಾರ್ಯಕ್ರಮವು ವಿದ್ಯಾರ್ಥಿಗಳು ಮತ್ತು ಯುವಜನರಲ್ಲಿ ಸಂಸದೀಯ ವ್ಯವಸ್ಥೆ, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ದೇಶದ ಕಾಯ್ದೆ-ನೀತಿಗಳ ಬಗ್ಗೆ ಅರಿವು ಮೂಡಿಸುವ ಪ್ರಮುಖ ವೇದಿಕೆಯಾಗಿದೆ. ತಾಲೂಕು ಮಟ್ಟದ ಯುವ ಸಂಸತ್ ಕಾರ್ಯಕ್ರಮದಲ್ಲಿ ಅತ್ಯುತ್ತಮ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದರು.

ಇದಕ್ಕೆ ಮುಖ್ಯ ಕಾರಣ ನಮ್ಮ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಸವರಾಜ ಹಿರೇಮಠ ಅವರು ಪಠ್ಯೇತರ ಚಟುವಟಿಕೆಗಳು ಮತ್ತು ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ನೀಡುತ್ತಿರುವ ಪ್ರೇರಣೆ. ನನ್ನಲ್ಲಿರುವ ಪ್ರತಿಭೆಯನ್ನು ಗುರುತಿಸಿ ನಿರಂತರವಾಗಿ ಪ್ರೋತ್ಸಾಹಿಸುತ್ತಿದ್ದಾರೆ. ಅವರ ಮಾರ್ಗದರ್ಶನದ ಫಲವಾಗಿ ಇಂದು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿಯಲು ಸಾಧ್ಯವಾಗಿದೆ ಎಂದು ಹೇಳಿದರು.

ಎಸ್.ಎಸ್. ಮರಗೋಳ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಬಸವರಾಜ ಹಿರೇಮಠ ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ತಾಲೂಕು ಮಟ್ಟದ ಯುವ ಸಂಸತ್ ಕಾರ್ಯಕ್ರಮದಲ್ಲಿ ಅತ್ಯುತ್ತಮ ಮುಖ್ಯಮಂತ್ರಿ ಹಾಗೂ ಅತ್ಯುತ್ತಮ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವುದು ಅತೀವ ಸಂತಸ ತಂದಿದೆ. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪೋಷಿಸುವ ಕೆಲಸ ಎಲ್ಲರಿಂದಲೂ ಆಗಬೇಕು ಎಂದರು.

ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಧಾರದಲ್ಲಿಯೇ ನಮ್ಮ ರಾಜಕೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಆಡಳಿತ ನಡೆಯುತ್ತಿದೆ. ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಪಾತ್ರದ ಬಗ್ಗೆ ಅರಿವು ಮೂಡಿಸಿಕೊಳ್ಳುವುದರ ಜೊತೆಗೆ, ಪ್ರಶ್ನಿಸುವ ಗುಣವನ್ನೂ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Tags

Shahabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X