Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಶಹಾಬಾದ್‌ | ಬಸವ ಜಯಂತಿ ಸಾಂಸ್ಕೃತಿಕ...

ಶಹಾಬಾದ್‌ | ಬಸವ ಜಯಂತಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ29 April 2025 6:02 PM IST
share
ಶಹಾಬಾದ್‌ | ಬಸವ ಜಯಂತಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ : ಹಳೇ ಶಹಾಬಾದ್‌ ಶ್ರೀ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಸೋಮವಾರ ಜರುಗಿದ ವಚನ ನೃತ್ಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಕ್ಕಳಿಂದ ಮೂಡಿಬಂದ ವಚನ ನೃತ್ಯವು ನೆರೆದ ಕಲಾ ಆಸಕ್ತರ ಮನರಂಜಿಸಲು ಯಶಸ್ವಿಯಾಯಿತು.

ಶಹಾಬಾದ್‌ ಪಟ್ಟಣದ ಹಳೇ ಶಹಾಬಾದಿನ ಶ್ರೀ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಬಸವಾದಿ ಶರಣರ ಒಕ್ಕೂಟ ಸಮಿತಿ, ಜಾಗತಿಕ ಲಿಂಗಾಯತ ಮಹಾಸಭೆ ಹಾಗೂ ಶ್ರೀ ವೀರಭದ್ರೇಶ್ವರ ಚಾರಿಟೇಬಲ್ ಟ್ರಸ್ಟ್ ಹಳೇ ಶಹಾಬಾದ್‌ ಇವರ ಸಂಯುಕ್ತಾಶ್ರಯದಲ್ಲಿ ಬಸವ ಜಯಂತಿ ನಿಮಿತ್ಯ ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಹಾಬಾದಿನ ದಿ.ಸ್ಪಿರಿಟ್ ಡ್ಯಾನ್ಸ್ ಅಕಾಡೆಮಿಯ ಮಕ್ಕಳು‌ ಪ್ರಮೋದ‌ ನಾಟೀಕರ ನಿರ್ದೇಶನದಲ್ಲಿ ಅಣ್ಣ ಬಸವಣ್ಣ ಸೇರಿದಂತೆ ಬಸವಾದಿ ಶರಣರ ವಚನಗಳ ಮೇಲೆ ನೃತ್ಯ ಮಾಡಿ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡರು.

ಅನೇಕ ಚಿಣ್ಣರು ಭಾಗಿಯಾಗುವ ಮೂಲಕ ಎಲ್ಲರ ಗಮನ ಸೆಳೆದರು. ಸೋಜಿಗಾದ ಸೂಜು ಮಲ್ಲಿಗೆ, ಏನ್ ಕೊಡ ಏನ್ ಕೊಡವಾ ಹುಬ್ಬಳ್ಲಿ ಮಾಠ ಎಂತಹ ಚೆಂದುಳ್ಳಿ ಕೊಡವಾದಂತಹ ಜಾನಪದ ಗೀತೆಗಳ ನೃತ್ಯಕ್ಕೂ ವೇದಿಕೆ ಸಾಕ್ಷಿಯಾಯಿತು. ಸೌಮ್ಯ ಎಸ್.ಪಾಟೀಲ ಅವರ ಮುಗ್ಧ ನೃತ್ಯ ಕಲಾಭಿಮಾನಿಗಳ ಮನ ತಣಿಸಿತು.

ಲಿಂಗಾಯತ ಮಹಾಸಭಾ ಕಲಬುರಗಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆರ್.ಜಿ.ಶೆಟ್ಟಿಗಾರ ಅವರು ವಿಶ್ವಗುರು ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಇಂದಿಗೂ‌ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮರೀಚಿಕೆಯಾಗಿಯೆ ಉಳಿದಿದೆ. ಆದರೆ 12ನೇ ಶತಮಾನದಲ್ಲಿಯೆ ಮಹಿಳೆಯರಿಗೆ ಸಮಾನತೆಯ ಸ್ವಾತಂತ್ರ್ಯ ನೀಡುವ ಮೂಲಕ ಲಿಂಗ‌ಬೇಧ ತೊರೆದವರು ಬಸವಣ್ಣನವರು ಎಂದರು.

ಲಿಂಗ ಧಾರಣೆ, ವಿಭೂತಿ ಬಳಕೆ ಬಗ್ಗೆ ತಾಯಂದಿರು ಮಕ್ಕಳಿಗೆ ತಿಳುವಳಿಕೆ ನೀಡಬೇಕು. ಮಕ್ಕಳಿಗೆ ಮೊಬೈಲ್ ಕೊಡಿಸುವ ಬದಲು ವಚನ ಪುಸ್ತಕ ಕೊಟ್ಟು ಅರಿವಿನ ದಾಹ ನೀಗಿಸಬೇಕು. ಬಸವಣ್ಣನವರು ಹೇಳಿದಂತೆ ಅಂಧಕಾರ, ಮೂಡನಂಬಿಕೆಯಿಂದ ಹೊರಬಂದು ವೈಚಾರಿಕತೆ ತಮ್ಮ‌ ಜೀವನದಲ್ಲಿ ಬೆಳೆಸಿಕೊಳ್ಳಬೇಕು ಎಂದು ಚಿಂತಕ ಸಂತೋಷ ಹೂಗಾರ ಅಭಿಪ್ರಾಯಪಟ್ಟರು.

ಅಖಿಲ ಭಾರತ ವೀರಶೈವ ಮಹಾಸಭೆಯ ಹಳೇ ಶಹಾಬಾದ್‌ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಚಂದನಕೇರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಯಮಿ ನರೇಂದ್ರ ವರ್ಮಾ, ಭಂಕೂರ ಬಸವ ಸಮಿತಿ ಅಧ್ಯಕ್ಷ ನೀಲಕಂಠ ಮುಧೋಳಕರ್, ಯುವ ಮುಖಂಡರಾದ ಮಹಾಂತಗೌಡ ಪೊಲೀಸ್ ಪಾಟೀಲ, ಅಭಿಷೇಕ್ ಮಾಲಿಪಾಟೀಲ, ಅಣವೀರ ದ್ಯಾಮಾ, ರವಿ ಮಿರಸ್ಕರ್, ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಚೆನ್ನಮಲ್ಲಪ್ಪ ಸಿನ್ನೂರ, ಕುಪೇಂದ್ರ ತುಪ್ಪದ, ಗಿರಿಮಲ್ಲಪ್ಪ ವಳಸಂಗ್, ರಮೇಶ ಜೋಗ್ದನಕರ್ ಸೇರಿದಂತೆ ಪಟ್ಟಣದ ಮುಖಂಡರು, ಸಾರ್ವಜನಿಕರು, ತಾಯಂದಿರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ವಚನೋತ್ಸವ ಸಮಿತಿ ಸದಸ್ಯ ಶರಣಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಂತಪ್ಪ ಹಡಪದ ಸ್ವಾಗತಿಸಿದರು. ಶಿಕ್ಷಕ ವಿಶ್ವನಾಥ ಹಡಪದ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X