Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಶಹಾಬಾದ್‌ | ಹುಬ್ಬಳ್ಳಿಯ ಮರ್ಯಾದೆಗೇಡು...

ಶಹಾಬಾದ್‌ | ಹುಬ್ಬಳ್ಳಿಯ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಾದಿಗ ಸಮಾಜದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ26 Dec 2025 6:23 PM IST
share
ಶಹಾಬಾದ್‌ | ಹುಬ್ಬಳ್ಳಿಯ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಾದಿಗ ಸಮಾಜದಿಂದ ಪ್ರತಿಭಟನೆ

ಶಹಾಬಾದ್‌ : ಹುಬ್ಬಳ್ಳಿ ತಾಲೂಕಿನ ಇನಾಂ ವೀರಪುರದಲ್ಲಿ ಗರ್ಭಿಣಿ ಯುವತಿಯ ಮರ್ಯಾದೆಗೇಡು ಹತ್ಯೆಯನ್ನು ಖಂಡಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಶುಕ್ರವಾರ ಮಾದಿಗ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ನೀಲಪ್ರಭಾ ಬಬಲಾದ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಮಾತನಾಡಿ, ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರದಲ್ಲಿ ಅನ್ಯ ಜಾತಿ ಯುವಕ ವಿವೇಕಾನಂದ ದೊಡ್ಡಮನಿಯನ್ನು ಮದುವೆಯಾಗಿದ್ದಕ್ಕೆ ಏಳು ತಿಂಗಳು ಗರ್ಭಿಣಿಯಾಗಿದ್ದ ಯುವತಿಯ ಮೇಲೆ ಸ್ವತಃ ತಂದೆ ಹಾಗೂ ಕುಟುಂಬಸ್ಥರು ನಡೆಸಿದ್ದ ಮರ್ಯಾದೆಗೇಡು ಭೀಕರ ಹತ್ಯೆಯು ನಾಗರೀಕ ಸಮಾಜಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಈ ಘಟನೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಎಂಟು ಶತಮಾನಗಳ ಹಿಂದೆಯೇ ಬಸವಣ್ಣನವರು ಅಂತರ್‌ ಜಾತಿ ವಿವಾಹವನ್ನು ಮಾಡಿ ಜಾತಿಯತೆಯನ್ನು ಹೋಗಲಾಡಿಸಲು ಅಡಿಪಾಯ ಹಾಕಿದ್ದರು. ಸಮಾಜದಲ್ಲಿ ಇಂದಿಗೂ ಮೇಲ್ಜಾತಿಯವರ ಅಟ್ಟಹಾಸ, ಜಾತಿ ತಾರತಮ್ಯ, ಜಾತಿ ದ್ವೇಷ, ಅಸ್ಪೃಷ್ಯತೆ, ದಲಿತರನ್ನು ಒಪ್ಪಿಕೊಳ್ಳಲಾಗದಂತ ಮನೋಸ್ಥಿತಿ ಆಳವಾಗಿದೆ ಎಂಬುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಮಾದಿಗ ಸಮಾಜದ ಮುಖಂಡರಾದ ಡಿ.ಡಿ.ಓಣಿ ಹಾಗೂ ಶರಣು ಪಗಲಾಪೂರ ಮಾತನಾಡಿದರು.

ಮಾದಿಗ ಸಮಾಜದ ಶಿವರಾಜ ಕೋರೆ, ಯಲ್ಲಾಲಿಂಗ ಹೈಯ್ಯಾಳಕರ್, ಮೋಹನಹಳ್ಳಿ, ಶ್ರೀಧರ ಕೊಲ್ಲೂರ್, ಹಣವೇಶ ಕುಲಕರ್ಣಿ, ರವಿ ಬೆಳಮಗಿ, ನಾಗಪ್ಪ ರಾಯಚೂರಕರ್, ನಾಗರಾಜ ಮುದ್ನಾಳ, ಮನೋಹರ ಹಳ್ಳಿ, ಅನೀಲ ಮೈನಾಳಕರ್, ಬಸವರಾಜ ಮಯೂರ, ಸತೀಶ ಕೋಬಾಳಕರ್, ಮಲ್ಲಿಕಾರ್ಜುನ ಕಟ್ಟಿ, ಶಿವಶಾಲಕುಮಾರ ಪಟ್ಟಣಕರ್, ರಾಜೇಶ ಯನಗುಂಟಿಕರ್ ಸೇರಿದಂತೆ ಅನೇಕರು ಇದ್ದರು.

Tags

Shahabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X