Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Shahabad | ಪತ್ರಿಕೆ ಓದಿನಿಂದ...

Shahabad | ಪತ್ರಿಕೆ ಓದಿನಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಾದ ಜ್ಞಾನ ಲಭ್ಯ: ಮನೋಜಕುಮಾರ ಗುದ್ದಿ

ವಾರ್ತಾಭಾರತಿವಾರ್ತಾಭಾರತಿ7 Nov 2026 6:47 PM IST
share
Shahabad | ಪತ್ರಿಕೆ ಓದಿನಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಾದ ಜ್ಞಾನ ಲಭ್ಯ: ಮನೋಜಕುಮಾರ ಗುದ್ದಿ

ಶಹಾಬಾದ್ : ಪತ್ರಿಕೆಗಳು ಕೇವಲ ಸುದ್ದಿಯ ಮಾಧ್ಯಮವಲ್ಲ, ಅವು ಜ್ಞಾನದ ಭಂಡಾರವಾಗಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಾದ ಹೆಚ್ಚಿನ ಜ್ಞಾನ ಪತ್ರಿಕೆಗಳ ಓದಿನಿಂದ ಲಭಿಸುತ್ತದೆ ಎಂದು ಹಿರಿಯ ವರದಿಗಾರ ಮನೋಜಕುಮಾರ ಗುದ್ದಿ ಹೇಳಿದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಶನಿವಾರ ಆಯೋಜಿಸಿದ್ದ ‘ಪತ್ರಿಕೆ ಓದು’ ಕುರಿತು ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದು ಜನರಲ್ಲಿ ಓದುವ ಪ್ರವೃತ್ತಿ ಕಡಿಮೆಯಾಗುತ್ತಿದೆ. ಒಂದು ಪತ್ರಿಕೆ ಹೊರಬರಬೇಕಾದರೆ ಅದರ ಹಿಂದೆ ಪತ್ರಕರ್ತರ ಅಪಾರ ಶ್ರಮವಿರುತ್ತದೆ. ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಪತ್ರಕರ್ತರು ಮಾಡುವ ವರದಿಗಳಿಂದ ಪತ್ರಿಕೆ ರೂಪುಗೊಳ್ಳುತ್ತದೆ. ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ವ್ಯಾಮೋಹದಿಂದ ಓದುವ ಹವ್ಯಾಸ ಕ್ಷೀಣಿಸುತ್ತಿದೆ. ಒಂದು ಪತ್ರಿಕೆಯಲ್ಲಿ ಇಡೀ ಜಗತ್ತಿನ ಜ್ಞಾನ ಅಡಕವಾಗಿದ್ದರೂ, ಅದನ್ನು ಓದುವ ಮನಸ್ಸು ಕಡಿಮೆಯಾಗುತ್ತಿದೆ. ಪತ್ರಿಕೆಗಳೇ ಇಲ್ಲವಾದರೆ ಸಮಾಜದ ಅಸ್ತಿತ್ವಕ್ಕೂ ಧಕ್ಕೆಯಾಗಲಿದೆ ಎಂದು ಹೇಳಿದರು.

ಪತ್ರಿಕೆಗಳು ಸರ್ಕಾರಗಳ ಹಲವು ಹಗರಣಗಳನ್ನು ಬಯಲಿಗೆಳೆದು ಆಡಳಿತಾರೂಢರ ಕೆಂಗಣ್ಣಿಗೆ ಗುರಿಯಾಗಿವೆ. ಹಲವು ಸಂದರ್ಭಗಳಲ್ಲಿ ಸರ್ಕಾರಗಳು ಜಾಹೀರಾತುಗಳನ್ನು ತಡೆಹಿಡಿಯುವ ಮೂಲಕ ಪತ್ರಿಕೆಗಳ ಮೇಲೆ ಒತ್ತಡ ಹೇರಿವೆ. ಇಂತಹ ಸವಾಲುಗಳ ನಡುವೆಯೂ ಪತ್ರಕರ್ತರು ಎದೆಗುಂದದೆ ದೇಶದ ನಾಲ್ಕನೇ ಸ್ತಂಭವನ್ನು ಉಳಿಸಿಕೊಂಡು ಬಂದಿದ್ದಾರೆ. ವಿದ್ಯಾರ್ಥಿಗಳು ನಿರಂತರವಾಗಿ ಪತ್ರಿಕೆಗಳನ್ನು ಓದುವ ಮೂಲಕ ಹೆಚ್ಚಿನ ಜ್ಞಾನ ಸಂಪಾದಿಸಬೇಕು ಎಂದು ಸಲಹೆ ನೀಡಿದರು.

ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಮಾತನಾಡಿ, ದೇಶದ ವಿವಿಧ ಕ್ಷೇತ್ರಗಳ ಸಾಧಕರನ್ನು ಗಮನಿಸಿದಾಗ ಅವರಲ್ಲಿ ಓದುವ ಹವ್ಯಾಸ ಪ್ರಮುಖವಾಗಿರುವುದು ಕಂಡುಬರುತ್ತದೆ. ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಯುಪಿಎಸ್‌ಸಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬೇಕಾದರೆ ಪತ್ರಿಕೆಗಳ ಓದು ಬಹಳ ಮುಖ್ಯ. ಯುಪಿಎಸ್‌ಸಿ ಪರೀಕ್ಷೆ ಬರೆಯುವವರು ಪಠ್ಯಪುಸ್ತಕಗಳಿಗಿಂತಲೂ ಪತ್ರಿಕೆಗಳಿಂದ ಹೆಚ್ಚಿನ ಪ್ರಚಲಿತ ಜ್ಞಾನ ಪಡೆಯುತ್ತಾರೆ. ಹಿಂದುಳಿದ ರಾಜ್ಯವೆಂದು ಗುರುತಿಸಲ್ಪಡುವ ಬಿಹಾರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಹೊರಬರಲು ಓದುವ ಹವ್ಯಾಸವೂ ಪ್ರಮುಖ ಕಾರಣವಾಗಿದೆ. ಜಿಲ್ಲೆಯ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಗಳಿಸಲು ಪತ್ರಿಕೆ ಓದುವುದನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪರಮೇಶ್ವರ ಪೆಂಚನಕರ್ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ವ್ಯಾಮೋಹದಿಂದ ಹೊರಬಂದು ಪತ್ರಿಕೆಗಳನ್ನು ಓದುವ ಮೂಲಕ ಉತ್ತಮ ಜ್ಞಾನ ಸಂಪಾದಿಸಬೇಕು ಎಂದು ಕರೆ ನೀಡಿದರು.

ಉದ್ಯಮಿ ಅಣವೀರ ಇಂಗಿನಶೆಟ್ಟಿ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ವಾಸುದೇವ ಚವ್ಹಾಣ ಹಾಗೂ ತಾಲೂಕು ಸಂಘದ ಅಧ್ಯಕ್ಷ ಕೆ. ರಮೇಶ ಭಟ್ಟ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಪೂಜಾ, ಮಿನಾಕ್ಷಿ, ಅಂಜಲಿ, ಶರಣಬಸವ ಹಾಗೂ ನಾಗವೇಣಿ ಅವರು ಪತ್ರಿಕೆಗಳ ಕುರಿತು ಹಿರಿಯ ಪತ್ರಕರ್ತರೊಂದಿಗೆ ಸಂವಾದ ನಡೆಸಿದರು.

ದೇವಿಕಾ ಸಂಗಡಿಗರು ಪ್ರಾರ್ಥಿಸಿದರು. ನಿಂಗಣ್ಣ ಜಂಬಗಿ ಸ್ವಾಗತಿಸಿದರು. ಕೆ. ರಮೇಶ ಭಟ್ಟ ಪ್ರಾಸ್ತಾವಿಕವಾಗಿ ಮಾತನಾಡಿದರು. ಲೋಹಿತಕಟ್ಟಿ ನಿರೂಪಿಸಿದರು. ಖಾಜಾ ಪಟೇಲ ವಂದಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಬನ್ಸಿಲಾಲ್ ಚವ್ಹಾಣ, ಮರಲಿಂಗ ಯಾದಗಿರಿ, ಪತ್ರಕರ್ತರಾದ ಮ. ಮಸ್ತಾನ, ಸಿದ್ದರಾಜ ಮಲ್ಕಂಡಿ, ಮಡಿವಾಳಪ್ಪ ಹೇರೂರ, ರಾಯಪ್ಪ ಕೊಟಗಾರ, ಶಿವಕುಮಾರ ಕುಸಾಳೆ, ದಯಾನಂದ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪತ್ರಿಕೆಗಳ ಕುರಿತು ಕೇಳಲಾದ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳಲ್ಲಿ ವರದಿಗಾರಿಕೆಯ ಆಸಕ್ತಿ ಬೆಳೆಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಪತ್ರಿಕೆ, ನೋಟ್‌ಪ್ಯಾಡ್ ಹಾಗೂ ಪೆನ್ನುಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ವರದಿ ಬರೆದು ಸಲ್ಲಿಸುವ ಇಬ್ಬರು ವಿದ್ಯಾರ್ಥಿಗಳನ್ನು ಮುಂದಿನ ಕಾರ್ಯಕ್ರಮದಲ್ಲಿ ಸತ್ಕರಿಸಿ, ಪ್ರಮಾಣಪತ್ರ ಹಾಗೂ ಬಹುಮಾನ ನೀಡಲಾಗುವುದು ಎಂದು ಘೋಷಿಸಲಾಯಿತು.

Tags

Shahabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X