Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Shahabad | ಮಹಾನ್ ಚಿಂತಕರ ಆದರ್ಶಗಳನ್ನು...

Shahabad | ಮಹಾನ್ ಚಿಂತಕರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಲಿ : ಗಣಪತರಾವ್ ಮಾನೆ

ವಾರ್ತಾಭಾರತಿವಾರ್ತಾಭಾರತಿ15 Oct 2026 5:08 PM IST
share
Shahabad | ಮಹಾನ್ ಚಿಂತಕರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಲಿ : ಗಣಪತರಾವ್ ಮಾನೆ

ಶಹಾಬಾದ್: ಇಂದಿನ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಹಾಗೂ ನೈತಿಕತೆಯ ಕುಸಿತವನ್ನು ತಡೆಯಲು ಮಹಾನ್ ಚಿಂತಕರು ಮತ್ತು ಕ್ರಾಂತಿಕಾರಿ ಹೋರಾಟಗಾರರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಎಐಕೆಕೆಎಂಎಸ್ ರೈತ ಸಂಘಟನೆಯ ಜಿಲ್ಲಾ ಅಧ್ಯಕ್ಷ ಗಣಪತರಾವ್ ಕೆ. ಮಾನೆ ಹೇಳಿದರು.

ನಗರದ ಲಕ್ಷ್ಮಿ ಗಂಜ್‌ನಲ್ಲಿ ಗುರುವಾರ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ವತಿಯಿಂದ ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ ಜನ್ಮ ವರ್ಷಾಚರಣೆಯ ಅಂಗವಾಗಿ ಆಯೋಜಿಸಿದ್ದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಅವರು ಮಾತನಾಡಿದರು.

ಇಂದಿನ ಆಳುವ ಸರ್ಕಾರಗಳು ವಿದ್ಯಾರ್ಥಿಗಳು ಹಾಗೂ ಯುವಜನರ ಮೇಲೆ ಬೀರುವ ಸಾಂಸ್ಕೃತಿಕ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಅಶ್ಲೀಲತೆ ಮತ್ತು ಕ್ರೌರ್ಯವನ್ನು ವೈಭವೀಕರಿಸುವ ಸಿನಿಮಾಗಳು ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತಿವೆ. ಇಂತಹ ದೃಶ್ಯಗಳು ಮಕ್ಕಳಲ್ಲಿ ವಿಕೃತ ಮನೋಭಾವವನ್ನು ಬೆಳೆಸುವುದರ ಜೊತೆಗೆ ಕೊಲೆ, ದರೋಡೆ ಹಾಗೂ ಅತ್ಯಾಚಾರದಂತಹ ಅಪರಾಧ ಕೃತ್ಯಗಳತ್ತ ಪ್ರೇರೇಪಿಸುವ ಅಪಾಯವಿದೆ ಎಂದರು.

ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ಮಹಾತ್ಮ ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ ಹಾಗೂ ಖುದಿರಾಮ್ ಬೋಸ್ ಅವರಂತಹ ಮಹಾನ್ ನಾಯಕರು ಸಮಾನತೆ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ್ದಾರೆ. ಆದರೆ, ಇಂತಹ ಮಹನೀಯರ ನೈಜ ಇತಿಹಾಸ ಹಾಗೂ ಕ್ರಾಂತಿಕಾರಿ ವಿಚಾರಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಹಾನ್ ನಾಯಕರ ತ್ಯಾಗ, ಹೋರಾಟ ಮತ್ತು ಆದರ್ಶಗಳನ್ನು ಯುವಜನರಿಂದ ದೂರವಿಡುತ್ತಿರುವುದರಿಂದ ಸಮಾಜದಲ್ಲಿ ಮಾನವೀಯ ಮೌಲ್ಯಗಳ ಕುಸಿತ ಕಂಡುಬರುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ಮಹಾನ್ ವ್ಯಕ್ತಿಗಳ ಜೀವನ ಮತ್ತು ಹೋರಾಟಗಳನ್ನು ಅಧ್ಯಯನ ಮಾಡಿ, ಅವರ ಆದರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ವೈಜ್ಞಾನಿಕ ಚಿಂತನೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

ಶಿಬಿರದಲ್ಲಿ ಮಹಾತ್ಮ ಜ್ಯೋತಿಬಾ ಫುಲೆ ಅವರ ಜೀವನ ಚರಿತ್ರೆಯ ಕುರಿತು ಚರ್ಚೆ ಮತ್ತು ಸಂವಾದ, ಕಿರುಚಿತ್ರ ಪ್ರದರ್ಶನ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ಸೇರಿದಂತೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಹಲವು ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಎಐಡಿಎಸ್‌ಒ ಜಿಲ್ಲಾ ಸಮಿತಿ ಸದಸ್ಯರಾದ ಸ್ಪೂರ್ತಿ ಗುರುಜಲ್ಕರ್, ಬಾಬು ಪವರ್, ಅಜಯ್ ಗುರುಜಲ್ಕರ್, ಬೃಂದಾ, ಬಿಂದು, ಸೃಷ್ಟಿ, ಚೇತನ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

studentsShahabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X