Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಶರಣಬಸವ ವಿಶ್ವವಿದ್ಯಾಲಯ 7ನೇ ಘಟಿಕೋತ್ಸವ:...

ಶರಣಬಸವ ವಿಶ್ವವಿದ್ಯಾಲಯ 7ನೇ ಘಟಿಕೋತ್ಸವ: ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ14 Dec 2025 10:52 PM IST
share
ಶರಣಬಸವ ವಿಶ್ವವಿದ್ಯಾಲಯ 7ನೇ ಘಟಿಕೋತ್ಸವ: ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕಲಬುರಗಿ: ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಅಪ್ಪ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಅವರು ಪ್ರತಿಷ್ಠಿತ ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತರು ಹಾಗೂ ಮುತ್ಯಾನ ಬಬಲಾದನ ಶ್ರೀ ಗುರು ಚೆನ್ನವೀರೇಶ್ವರ ವಿರಕ್ತಮಠದ ಪೀಠಾಧಿಪತಿ ಪೂಜ್ಯ ಶ್ರೀ ಗುರುಪಾದಲಿಂಗ ಮಹಾಶಿವಯೋಗಿಗಳು ಹಾಗೂ ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಶಶೀಲ ಜಿ. ನಮೋಶಿ ಅವರನ್ನು ಕಲಬುರಗಿ ನಗರದ ಶರಣಬಸವೇಶ್ವರ ದೇವಾಲಯದ ಆವರಣದಲ್ಲಿರುವ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಅನುಭವ ಮಂಟಪದಲ್ಲಿ ರವಿವಾರ ನಡೆದ ಶರಣಬಸವ ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಿದರು. ಗೌರವ ಡಾಕ್ಟರೇಟ್‍ನ ಮೂರನೇ ಪುರಸ್ಕೃತರಾದ ಖಾಜಾ ಬಂದಾ ನವಾಜ್ ದರ್ಗಾದ ಸಜ್ಜದಾ ನಶೀನ್ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ ಅವರಿಗೆ ಗೈರುಹಾಜರಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮೊದಲ ಬಾರಿಗೆ, ವಿಶ್ವವಿದ್ಯಾಲಯವು ಪುರುಷ ಮತ್ತು ಮಹಿಳಾ ಪದವೀಧರರಲ್ಲಿ ವಿಶ್ವವಿದ್ಯಾಲಯದ ಅತಿ ಹೆಚ್ಚು ಅಂಕಗಳನ್ನು ಪಡೆದವರಿಗೆ ಎರಡು ನಗದು ಪ್ರಶಸ್ತಿಗಳು ಮತ್ತು ಡಾ. ಶರಣಬಸವಪ್ಪ ಅಪ್ಪಾಜಿ ಅವರ ಹೆಸರಿನಲ್ಲಿ ಸ್ಥಾಪಿಸಲಾದ ಚಿನ್ನದ ಪದಕವನ್ನು ನೀಡಿತು. 7ನೇ ಘಟಿಕೋತ್ಸವದಲ್ಲಿ ಎಂ.ಎಸ್ಸಿ ಗಣಿತದಲ್ಲಿ ಪ್ರಥಮ ಸ್ಥಾನ ಪಡೆದ ಕು. ಸಿಮ್ರಾ ನಿಶಾತ್ ಬಂದೇನವಾಜ್ ಕಲಕೇರಿ ಅವರು 9.95 ಸಿಜಿಪಿಎ ಅಂಕಗಳೊಂದಿಗೆ ಪದವಿ ಪಡೆದ ಮಹಿಳಾ ವಿದ್ಯಾರ್ಥಿಗಳಲ್ಲಿ ಪ್ರಥಮ ಸ್ಥಾನ ಪಡೆದರು ಮತ್ತು ಬಿ.ಟೆಕ್ ಮೆಕ್ಯಾನಿಕಲ್‍ನಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ರಾಹುಲ್ ಅವರು 9.76 ಸಿಜಿಪಿಎ ಅಂಕಗಳೊಂದಿಗೆ ಪುರುಷರಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರಿಬ್ಬರಿಗೆ ತಲಾ 21,000 ರೂ. ನಗದು ಬಹುಮಾನ, ಚಿನ್ನದ ಪದಕ ಮತ್ತು ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಲಾಯಿತು.

ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದ ಡಾ. ಅವ್ವಾಜಿ ಅವರು, ಆಯಾ ಕೋರ್ಸ್‍ಗಳಲ್ಲಿ ರ್ಯಾಂಕ್ ಪಡೆದ 199 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಮತ್ತು ಚಿನ್ನದ ಪದಕಗಳನ್ನು ಪಡೆದ 45 ವಿದ್ಯಾರ್ಥಿಗಳಿಗೆ, ಚಿನ್ನದ ಪದಕಗಳು ಮತ್ತು ಪ್ರಮಾಣಪತ್ರಗಳನ್ನು ವಿತರಿಸಿದರು. ಡಾ. ಅವ್ವಾಜಿ ಮತ್ತು ಘಟಿಕೋತ್ಸವದ ಇತರ ಗೌರವಾನ್ವಿತ ಅತಿಥಿಗಳು, ಯುಜಿ ಮತ್ತು ಪಿಜಿ ಕೋರ್ಸ್‍ಗಳಲ್ಲಿ ಚಿನ್ನದ ಪದಕ ಗೆದ್ದ ಎಲ್ಲಾ 44 ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ಚಿನ್ನದ ಪದಕ ಮತ್ತು ಪ್ರಮಾಣಪತ್ರಗಳ ಜೊತೆಗೆ ಪ್ರದಾನ ಮಾಡಲಾಯಿತು. ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಸ್ಥಾಪಿಸಲಾದ ನಗದು ಬಹುಮಾನಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಸನ್ಮಾನಿಸಿದರು. ಅದೇ ರೀತಿ ಡಾ. ಅವ್ವಾಜಿ ಅವರು 21 ಪ್ರತಿಭಾನ್ವಿತ ವಿದ್ವಾಂಸರಿಗೆ ಪಿಎಚ್.ಡಿ. ಪದವಿಗಳನ್ನು ಪ್ರದಾನ ಮಾಡಿದರು.

ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ, ವಿವಿಧ ಗಣ್ಯವ್ಯಕ್ತಿಗಳು ತಮ್ಮ ಆತ್ಮೀಯರ ಸ್ಮರಣಾರ್ಥ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳ ಜೊತೆಗೆ, ಐದು ನಗದು ಪ್ರಶಸ್ತಿಗಳನ್ನು ನೀಡಲಾಯಿತು. ಲಿಂಗೈಕ್ಯ ಶ್ರೀಮತಿ ಚನ್ನಬಸಮ್ಮ ಸಿದ್ಧರಾಮಪ್ಪ ದೇಶಮುಖ ಅವರ ಹೆಸರಿನಲ್ಲಿ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ, ಶ್ರೀ ಬಸವರಾಜ ದೇಶಮುಖ ಮತ್ತು ಶ್ರೀಮತಿ ಕೊಪ್ಪಳದ ವಿಜಯಲಕ್ಷ್ಮಿ ಮುದಗಲ್ ಅವರು ವ್ಯವಹಾರ ಅಧ್ಯಯನ ನಿಕಾಯದ ಬಿಬಿಎ (ಮಹಿಳಾ) ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ರೂ. 11,000 ನಗದು ಬಹುಮಾನ ನೀಡಿ ಗೌರವಿಸಿದರು. ಲಿಂಗೈಕ್ಯ ಮಹಾದೇವಿ ಚಂದ್ರಶೇಖರ್ ನರಕೆ ಅವರ ಸ್ಮರಣಾರ್ಥ ಸ್ಥಾಪಿಸಲಾದ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದಲ್ಲಿ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್‍ನಲ್ಲಿ ಮಹಿಳಾ ಟಾಪರ್‍ಗೆ ಚಂದ್ರಶೇಖರ ಶರಣಪ್ಪ ನರಕೆ ಅವರು 10,000 ರೂ. ನಗದು ಬಹುಮಾನ ನೀಡಿ ಸನ್ಮಾನಿಸಿದರು.

ವಿಶ್ವವಿದ್ಯಾಲಯದ ಡೀನ್ ಡಾ. ಲಕ್ಷ್ಮಿ ಪಾಟೀಲ್ ಮಾಕಾ ಅವರು ದಿವಂಗತ ಪ್ರೊ. ಬಿ. ಬಿ. ಪಾಟೀಲ್ ಅವರ ಸ್ಮರಣಾರ್ಥ ಸ್ಥಾಪಿಸಿರುವ ಮೂರನೇ 5000 ರೂ. ನಗದು ಬಹುಮಾನವನ್ನು ವ್ಯವಹಾರ ಅಧ್ಯಯನ ವಿಭಾಗದಲ್ಲಿ ಎಂಬಿಎ (ಸಹ-ಶಿಕ್ಷಣ) ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಪ್ರದಾನ ಮಾಡಲಾಯಿತು. ಉಳಿದೆರಡು ಬಹುಮಾನಗಳನ್ನು ಶ್ರೀ ಬಸವರಾಜಪ್ಪ ಅಪ್ಪಾ ಅವರ ಸ್ಮರಣಾರ್ಥ ಲಲಿತಕಲೆ ಮತ್ತು ಸಂಗೀತ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರಿಗೆ ತಲಾ 12,000 ರೂ. ನಗದು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ಡಾ. ಅವ್ವಾಜಿ ತಮ್ಮ ಭಾವನಾತ್ಮಕ ಅಧ್ಯಕ್ಷೀಯ ಭಾಷಣದಲ್ಲಿ, ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಮತ್ತು ಶರಣಬಸವ ವಿಶ್ವವಿದ್ಯಾಲಯದ ಸಂಸ್ಥಾಪಕ ಕುಲಾಧಿಪತಿ ಲಿಂಗೈಕ್ಯ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರು, ಶಿಕ್ಷಣದ ಗುಣಮಟ್ಟವನ್ನು ತನ್ನ ವಿಶಿಷ್ಟ ಗುಣಲಕ್ಷಣವಾಗಿಟ್ಟುಕೊಂಡು, ಶಿಕ್ಷಣ ಸಂಸ್ಥೆಗಳ ಸರಪಳಿಯನ್ನು ಪ್ರಾರಂಭಿಸುವ ಮೂಲಕ ಅವರ ಜೀವಮಾನದ ಕನಸಾಗಿದ್ದ ಶರಣಬಸವ ವಿಶ್ವವಿದ್ಯಾಲಯದ ಸ್ಥಾಪನೆ ಮಾಡಿ ಈ ಪ್ರದೇಶದ ಶೈಕ್ಷಣಿಕ ಸಬಲೀಕರಣದಲ್ಲಿ ಮಾಡಿದ ಪ್ರಯತ್ನಗಳನ್ನು ಸ್ಮರಿಸಿದರು.

ಘಟಿಕೋತ್ಸವದಲ್ಲಿ ಪ್ರಮಾಣಪತ್ರಗಳನ್ನು ಪಡೆದ ಎಲ್ಲಾ ಪದವೀಧರರನ್ನು ಅಭಿನಂದಿಸಿದ ಡಾ. ಅವ್ವಾಜಿ, ತಮ್ಮ ವೃತ್ತಿಪರ ಮತ್ತು ಶೈಕ್ಷಣಿಕ ಜೀವನದಲ್ಲಿ ನಿಜವಾದ ಪ್ರಯಾಣವು ಈಗ ಪ್ರಾರಂಭವಾಗುತ್ತದೆ ಮತ್ತು ಎಲ್ಲರೂ ತಮ್ಮ ತಮ್ಮ ವೃತ್ತಿ ಮತ್ತು ಶೈಕ್ಷಣಿಕ ಜೀವನದಲ್ಲಿ ಅತ್ಯುತ್ತಮವಾದದ್ದನ್ನು ಸಾಧಿಸಲು ಶ್ರಮಿಸಬೇಕು ಹಾಗೂ ರಾಷ್ಟ್ರ ನಿರ್ಮಾಣ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತನ್ನು ಹೇಳಿದರು.

ಡಾ. ಅವ್ವಾಜಿ ಅವರು, ಶರಣಬಸವ ವಿಶ್ವವಿದ್ಯಾಲಯವು ಮಹಿಳಾ ಕೇಂದ್ರಿತ ಮತ್ತು ಮಹಿಳಾ ಸ್ನೇಹಿಯಾಗಿರುವ ದೇಶದ ಅತ್ಯಂತ ವಿರಳ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ ಎಂದು ಹೆಮ್ಮೆಯಿಂದ ಹೇಳಿದರು. ಹೆಚ್ಚಿನ ಸಂಖ್ಯೆಯ ರ್ಯಾಂಕಗಳನ್ನು ಮತ್ತು ಚಿನ್ನದ ಪದಕಗಳನ್ನು ಪಡೆಯುವಲ್ಲಿ ಮಹಿಳಾ ವಿದ್ಯಾರ್ಥಿಗಳು, ಪುರುಷ ವಿದ್ಯಾರ್ಥಿಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ತಿಳಿದು ಸಂತೋಷವಾಯಿತು ಎಂದರು. ಘಟಿಕೋತ್ಸವದಲ್ಲಿ ಪ್ರಮಾಣಪತ್ರಗಳನ್ನು ಪಡೆದ 21 ಪಿಎಚ್.ಡಿ. ಪದವೀಧರರನ್ನು ಡಾ. ಅವ್ವಾಜಿ ಅಭಿನಂದಿಸಿದರು.

ಪ್ರೊ. ಚಂದ್ರಶೇಖರ್ ಎಸ್. ನರಕೆ, ವಿವಿಯ ಬಿಒಜಿ ಸದಸ್ಯೆ ಡಾ. ಉಮಾ ದೇಶಮುಖ, ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಎಚ್‍ಕೆಇ ಸೊಸೈಟಿಯ ಉಪಾಧ್ಯಕ್ಷ ರಾಜಾ ಭೀಮಳ್ಳಿ, ಡಾ. ಅಲ್ಲಮಪ್ರಭು ದೇಶಮುಖ, ವಿವಿಯ ನಿರ್ದೇಶಕ ಡಾ. ವಿ. ಡಿ. ಮೈತ್ರಿ, ಕುಲಸಚಿವ ಮೌಲ್ಯಮಾಪನ ಡಾ. ಎಸ್. ಎಚ್. ಹೊನ್ನಳ್ಳಿ, ಡೀನ್ ಡಾ. ಲಕ್ಷ್ಮಿ ಪಾಟೀಲ್ ಮಾಕಾ, ಹಣಕಾಸು ಅಧಿಕಾರಿ ಡಾ. ಕಿರಣ್ ಮಾಕಾ, ಶೈಕ್ಷಣಿಕ ಮಂಡಳಿ ಸದಸ್ಯರು ಮತ್ತು ಎಲ್ಲಾ ಅಧ್ಯಾಪಕ ಡೀನರು ಈ ಘಟಿಕೋತ್ಸವದಲ್ಲಿ ಉಪಸ್ಥಿತರಿದ್ದರು. ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಸಮಾರಂಭದಲ್ಲಿ ಸ್ವಾಗತಿಸಿದರು ಮತ್ತು ವಿಶ್ವವಿದ್ಯಾಲಯದ ಕುಲಸಚಿವ ಡಾ. ಎಸ್. ಜಿ. ಡೊಳ್ಳೇಗೌಡರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X