Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದದಲ್ಲಿ ಶಿರಪೂರ ಮಾದರಿ ಸಂಪೂರ್ಣ...

ಆಳಂದದಲ್ಲಿ ಶಿರಪೂರ ಮಾದರಿ ಸಂಪೂರ್ಣ ವಿಫಲ: ಮಾಜಿ ಶಾಸಕ ಸುಭಾಷ್ ಗುತ್ತೇದಾರ

ವಾರ್ತಾಭಾರತಿವಾರ್ತಾಭಾರತಿ6 Jun 2026 6:21 PM IST
share
ಆಳಂದದಲ್ಲಿ ಶಿರಪೂರ ಮಾದರಿ ಸಂಪೂರ್ಣ ವಿಫಲ: ಮಾಜಿ ಶಾಸಕ ಸುಭಾಷ್ ಗುತ್ತೇದಾರ

ಕಲಬುರಗಿ: ಆಳಂದ ತಾಲೂಕಿನಲ್ಲಿ ಮೂರು ವರ್ಷಗಳಿಂದ ಅಭಿವೃದ್ಧಿ ಎನ್ನುವುದು ಕಾಣೆಯಾಗಿದೆ. ಶಾಸಕ ಬಿ.ಆರ್ ಪಾಟೀಲರ ಸ್ವಂತ ಗ್ರಾಮ ಸರಸಂಬಾದಲ್ಲಿ ಜೂನ್ ತಿಂಗಳು ಆರಂಭವಾದರೂ ಕುಡಿಯುವ ನೀರಿನ ಬವಣೆ ತಪ್ಪಿಲ್ಲ, ಗ್ರಾಮಸ್ಥರು ಕುಡಿಯುವ ನೀರಿಗಾಗಿ ದಿನಪೂರ್ತಿ ಕೊಡಗಳೊಂದಿಗೆ ನಿಲ್ಲುವ ಪರಿಸ್ಥಿತಿ ಬಂದಿದೆ ಎಂದು ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ತಾಲೂಕಿನ ಹಲವು ಗ್ರಾಮಗಳು ಗಂಭೀರ ಕುಡಿಯುವ ನೀರಿನ ಪರಿಸ್ಥಿತಿ ಎದುರುಸುತ್ತಿವೆ. ಆಳಂದ ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಶಿರಪೂರ ಮಾದರಿ ಕಾಮಗಾರಿಗಳು ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದು, ಸರ್ಕಾರದ ಹಣವನ್ನು ಸಮರ್ಪಕವಾಗಿ ಬಳಸುವಲ್ಲಿ ಸಂಬoಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ದೂರಿದ್ದಾರೆ.

ಆಳಂದ ತಾಲೂಕು ಬರಪೀಡಿತ ಪ್ರದೇಶವಾಗಿದ್ದು, ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಶಿರಪೂರ ಮಾದರಿ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆದರೆ ಯೋಜನೆಯ ಮೂಲ ಉದ್ದೇಶವೇ ಹಾಳಾಗಿದ್ದು, ಅನೇಕ ಕಡೆಗಳಲ್ಲಿ ಕಾಮಗಾರಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳದೇ ಕೇವಲ ಹಣ ಖರ್ಚು ಮಾಡುವ ಉದ್ದೇಶದಿಂದ ನಡೆಸಲಾಗಿದೆ ಎಂದು ಹೇಳಿದ್ದಾರೆ.

ತಾಲೂಕಿನ ಹಲವಾರು ಹಳ್ಳಿಗಳಲ್ಲಿ ಶಿರಪೂರ ಮಾದರಿ ಕಾಮಗಾರಿಗಳಿಂದ ಅಂತರ್ಜಲ ಮಟ್ಟ ಹೆಚ್ಚಾಗಿಲ್ಲ ಎಂದು ಆರೋಪ ಮಾಡಿದರು.

ಈ ಯೋಜನೆಯಿಂದ ರೈತರಿಗೆ ಯಾವುದೇ ಪ್ರಯೋಜನವಾಗಿಲ್ಲ. ಮಳೆಗಾಲದಲ್ಲಿ ನೀರು ಸಂಗ್ರಹವಾಗಬೇಕಾದ ಸ್ಥಳಗಳಲ್ಲಿ ಸಮರ್ಪಕ ನಿರ್ವಹಣೆ ಇಲ್ಲದ ಕಾರಣ ಯೋಜನೆ ಪರಿಣಾಮಕಾರಿಯಾಗಿಲ್ಲ. ಯೋಜನೆಗೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದ್ದರೂ ನಿರೀಕ್ಷಿತ ಫಲಿತಾಂಶ ಕಂಡುಬoದಿಲ್ಲ ಎಂದು ಆಪಾದಿಸಿದ್ದಾರೆ.

ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದು ಹೋಗಿದೆ. ಇಸ್ಪೀಟ್ ಎಗ್ಗಿಲ್ಲದೇ ನಡೆಯುತ್ತಿದೆ ಇದರ ಕುರಿತು ಕ್ರಮ ತೆಗೆದುಕೊಳ್ಳಬೇಕಾದವರು ಯಾವುದೇ ಕಾನೂನು ಕ್ರಮಕ್ಕೆ ಮುಂದಾಗುತ್ತಿಲ್ಲ. ಆಳಂದ ತಾಲೂಕಿನ ಜನರು ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಅವ್ಯವಸ್ಥೆಗಳನ್ನು ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ಈ ವಿಷಯದ ಕುರಿತು ಜನಾಂದೋಲನ ರೂಪಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Tags

Subhashkalburgi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X