Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ...

ಕಲಬುರಗಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭ: 4.06 ಲಕ್ಷ ಗಣತಿ ನಮೂನೆಗಳ ವಿತರಣೆ

ವಾರ್ತಾಭಾರತಿವಾರ್ತಾಭಾರತಿ1 July 2026 10:07 PM IST
share
ಕಲಬುರಗಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭ: 4.06 ಲಕ್ಷ ಗಣತಿ ನಮೂನೆಗಳ ವಿತರಣೆ
ಜು.29ರವರೆಗೆ ಮನೆ-ಮನೆಗೆ ಭೇಟಿ ನೀಡಲಿರುವ ಬಿಎಲ್‌ಒಗಳು; ಮತದಾರರ ಸಹಕಾರಕ್ಕೆ ಜಿಲ್ಲಾಧಿಕಾರಿ ಮನವಿ

ಕಲಬುರಗಿ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ವಿಶೇಷ ಸಮಗ್ರ ಮತದಾರರ ಪಟ್ಟಿಯ ಪರಿಷ್ಕರಣೆ (ಎಸ್‌ಐಆರ್-2026) ಪ್ರಕ್ರಿಯೆ ಆರಂಭವಾಗಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಜೂನ್ 30ರಿಂದ ಮನೆ-ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಕೈಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜೂ.16ರ ಮಾಹಿತಿಯಂತೆ ಜಿಲ್ಲೆಯಲ್ಲಿ ಒಟ್ಟು 23,71,542 ಮತದಾರರು ನೋಂದಣಿಯಾಗಿದ್ದು, ಎಲ್ಲ ಬಿಎಲ್‌ಒಗಳಿಗೆ ಗಣತಿ ನಮೂನೆಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 96.84 ಶೇಕಡಾ ಮತದಾರರ ಮ್ಯಾಪಿಂಗ್ ಪೂರ್ಣಗೊಂಡಿದ್ದು, ಮನೆ-ಮನೆ ಗಣತಿ ಹಾಗೂ ಡಿಜಿಟಲೀಕರಣ ಕಾರ್ಯವು ಜೂನ್ 30ರಿಂದ ಜುಲೈ 29ರವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಈವರೆಗೆ 4,06,323 ಗಣತಿ ನಮೂನೆಗಳು (ಶೇ.17.13) ಮತದಾರರಿಗೆ ವಿತರಿಸಲಾಗಿದ್ದು, 4,784 ನಮೂನೆಗಳು (ಶೇ.0.20) ಡಿಜಿಟಲೀಕರಣಗೊಂಡಿವೆ. ಅಲ್ಲದೆ, 783 ಮತದಾರರು (ಶೇ.0.03) ಆನ್‌ಲೈನ್ ಮೂಲಕ ಗಣತಿ ನಮೂನೆಗಳನ್ನು ಸಲ್ಲಿಸಿದ್ದಾರೆ.

ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಇದುವರೆಗೆ 7 ಶಾಶ್ವತವಾಗಿ ಸ್ಥಳಾಂತರಗೊಂಡ ಮತದಾರರು, 42 ಮೃತ ಮತದಾರರು ಹಾಗೂ 23 ಈಗಾಗಲೇ ನೋಂದಣಿಯಾಗಿರುವ ಮತದಾರರು ಗುರುತಿಸಲ್ಪಟ್ಟಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತದಾರರ ಪಟ್ಟಿಯನ್ನು ನಿಖರ ಹಾಗೂ ದೋಷರಹಿತವಾಗಿ ಸಿದ್ಧಪಡಿಸಲು ಎಲ್ಲ ಮತದಾರರು ಬಿಎಲ್‌ಒಗಳಿಗೆ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸಿ ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Tags

KalaburagiSIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X