Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸಾಮಾಜಿಕ ಹೋರಾಟದ ಮೂಲಕ ಗ್ರಾಮೀಣ ಸಮಸ್ಯೆ...

ಸಾಮಾಜಿಕ ಹೋರಾಟದ ಮೂಲಕ ಗ್ರಾಮೀಣ ಸಮಸ್ಯೆ ನಿವಾರಣೆ : ನಟ ಚೇತನ್‌

ವಾರ್ತಾಭಾರತಿವಾರ್ತಾಭಾರತಿ2 Jan 2025 10:40 PM IST
share
ಸಾಮಾಜಿಕ ಹೋರಾಟದ ಮೂಲಕ ಗ್ರಾಮೀಣ ಸಮಸ್ಯೆ ನಿವಾರಣೆ : ನಟ ಚೇತನ್‌

ಕಲಬುರಗಿ: ʼಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಮತ್ತು ಸಾಮಾಜಿಕ ಹೋರಾಟಗಳ ಮೂಲಕ ಸಮಾಜದಲ್ಲಿ ಪರಿವರ್ತನೆ ತರಲು ಎಲ್ಲರ ಸಹಕಾರ ಅಗತ್ಯವಿದೆ. ಗ್ರಾಮೀಣ ಯುವಜನರು ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಹಾಗೂ ಸಾಮಾಜಿಕ ಜಾಗೃತಿಗಾಗಿ ಮುಂದಾಗಬೇಕುʼ ಎಂದು ಬೆಂಗಳೂರಿನ ಖ್ಯಾತ ಚಲನ ಚಿತ್ರನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಭಿಪ್ರಾಯಪಟ್ಟರು.

ಆಳಂದ ತಾಲೂಕಿಗೆ ಗುರುವಾರ 2ನೇ ಬಾರಿಗೆ ಆಗಮಿಸಿ ಕಿಣ್ಣಿಸುಲ್ತಾನ ಗ್ರಾಮದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳಲು ತೆರಳುವ ಮಾರ್ಗಮಧ್ಯದ ತೆಲಾಕುಣಿ ಗ್ರಾಮದಲ್ಲಿ ಗ್ರಾಮಸ್ಥರ ಪರ ಗ್ರಾಪಂ ಅಧ್ಯಕ್ಷ ಮಹಿಬೂಬ್‌ಭಾಷಾ ಶೇಖ್ ಅವರು ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ʼಗ್ರಾಮೀಣ ಪರಿಸರ ಸಂರಕ್ಷಣೆಯು ಇಂದು ಅಗತ್ಯವಾಗಿದೆ. ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಪಾತ್ರವು ಮುಖ್ಯ, ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಸಮೀಕ್ಷೆ, ಪರಿಶ್ರಮ ಮತ್ತು ಶ್ರದ್ಧೆ ಅಗತ್ಯವಿದೆʼ ಎಂದರು.

ಸಮಾಜದಲ್ಲಿ ಶ್ರೇಣಿಬದ್ಧತೆ, ಅಸಮಾನತೆ ಮತ್ತು ಅನ್ಯಾಯವನ್ನು ತಡೆಹಿಡಿಯುವಲ್ಲಿ ಎಲ್ಲಾ ವರ್ಗದ ಜನರು ಜಾಗೃತರಾಗುವ ಅಗತ್ಯವಿದೆ ಎಂದು ಹೇಳಿದರು.

ʼಸಮಾಜದಲ್ಲಿ ಸಮಾನತೆ ಸ್ಥಾಪಿಸಲು ಎಲ್ಲರಿಗೂ ನ್ಯಾಯ ದೊರಕುವ ವ್ಯವಸ್ಥೆ ಅತೀ ಅಗತ್ಯ. ಇದಕ್ಕಾಗಿ ನಿರಂತರ ಜನಜಾಗೃತಿ, ಚರ್ಚೆಗಳು ಮತ್ತು ಹೋರಾಟಗಳು ಪ್ರಮುಖವಾಗಿದೆʼ ಎಂದು ಅವರು ಹೇಳಿದರು.

ಸಮಾಜದಲ್ಲಿ ಅಸಮಾನತೆ ನಿವಾರಣೆಗೆ ಕಾನೂನು ವ್ಯವಸ್ಥೆ ಅಷ್ಟೇ ಅಲ್ಲ, ಬೋಧನೆ, ಜಾಗೃತಿಯ ಮೂಲಕ ಎಲ್ಲರ ಮನಸ್ಸುಗಳಲ್ಲಿ ಪರಿವರ್ತನೆ ತರಬೇಕು. ಜನರಲ್ಲಿ ಸಮಾನತೆಯ ಅರಿವು ಮೂಡಿಸುವ ಕಾರ್ಯದಲ್ಲಿ ಯುವಕರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರು, ಗ್ರಾಮಸ್ಥರು ಹಾಗೂ ಅಭಿಮಾನಿಗಳು ಚೇತನ್‌ ಅವರಿಗೆ ಮಾಲೆಹಾಕಿ ಸನ್ಮಾನಿಸಿದರು.

ಆಳಂದ ಪಟ್ಟಣದಲ್ಲಿ ನಟ ಚೇತನ್‌ ಅವರಿಗೆ ಭೇಟಿ ಮಾಡಿದ ಬಂಜಾರಾ ಕ್ರಾಂತಿದಳ ತಾಲೂಕು ಅಧ್ಯಕ್ಷ ವೆಂಕಟೇಶ ರಾಠೋಡ, ನ್ಯಾಯವಾದಿ ಬಿ.ಜಿ.ಬೀಳಗಿ, ಅಕ್ಷಯ ಸಿಎಂ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X