Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿಂಚೋಳಿಯಲ್ಲಿ ಮೇ 25ರಂದು ಶ್ರೀ...

ಚಿಂಚೋಳಿಯಲ್ಲಿ ಮೇ 25ರಂದು ಶ್ರೀ ಜಗದ್ಗುರು ರೇಣುಕಾಚಾರ್ಯ, ಬಸವ ಜಯಂತಿ ಮಹೋತ್ಸವ

ವಾರ್ತಾಭಾರತಿವಾರ್ತಾಭಾರತಿ23 May 2026 6:38 PM IST
share
ಚಿಂಚೋಳಿಯಲ್ಲಿ ಮೇ 25ರಂದು ಶ್ರೀ ಜಗದ್ಗುರು ರೇಣುಕಾಚಾರ್ಯ, ಬಸವ ಜಯಂತಿ ಮಹೋತ್ಸವ

ಚಿಂಚೋಳಿ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ರೇಣುಕೇಶ್ವರ ದೇವಸ್ಥಾನ ಆವರಣದಲ್ಲಿ ಮೇ 25ರಂದು ಬೆಳಿಗ್ಗೆ 10 ಗಂಟೆಗೆ ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತಿ, ಪಂಚಾಚಾರ್ಯರ ಯುಗಮಾನೋತ್ಸವ ಹಾಗೂ ಮಹಾತ್ಮ ಬಸವೇಶ್ವರ ಜಯಂತಿ ಮಹೋತ್ಸವದ ಜಂಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಶ್ರೀ ರೇಣುಕಾಚಾರ್ಯ ಯುಗಮಾನೋತ್ಸವ ಸ್ವಾಗತ ಸಮಿತಿ ಹಾಗೂ ಬಸವೇಶ್ವರ ಜಯಂತ್ಯುತ್ಸವ ಸಮಿತಿ ಅವರುಗಳ ಆಶ್ರಯದಲ್ಲಿ ಈ ಭವ್ಯ ಧರ್ಮಸಭೆ ನಡೆಯಲಿದೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರರಾದ 1008 ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹಾಗೂ ಶ್ರೀಶೈಲ ಸೂರ್ಯಸಿಂಹಾಸನಾಧೀಶ್ವರರಾದ 1008 ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ವಹಿಸಲಿದ್ದಾರೆ.

ಅಲೂರ ಸಂಸ್ಥಾನ ಹಿರೇಮಠದ ಶ್ರೀ ಷ.ಬ್ರ. ಕೆಂಚವೃಷಭೇಂದ್ರ ಶಿವಾಚಾರ್ಯರು, ಕೆಸರಟಗಿ ಸಂಸ್ಥಾನದ ಶ್ರೀ ಷ.ಬ್ರ. ತಪೋರತ್ನ ದ್ವಿತೀಯ ಸಾಂಬ ಶಿವಾಚಾರ್ಯರು ಸೇರಿದಂತೆ ಹಲವಾರು ಮಠಾಧೀಶರು ಹಾಗೂ ಪೂಜ್ಯರು ಕಾರ್ಯಕ್ರಮದ ನೇತೃತ್ವ ಮತ್ತು ಸಮ್ಮುಖ ವಹಿಸಲಿದ್ದಾರೆ. ತೊಟ್ನಳ್ಳಿ ಮಹಾಂತೇಶ್ವರ ಮಠದ ಮೂರ್ತಿ ಶಿವಾಚಾರ್ಯರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಬಿ.ಖಂಡ್ರೆ, ಚಿಂಚೋಳಿ ಶಾಸಕ ಡಾ.ಅವಿನಾಶ್ ಉಮೇಶ್ ಜಾಧವ್, ಸಂಸದ ಸಾಗರ ಈಶ್ವರ್‌ ಖಂಡ್ರೆ, ಮಾಜಿ ಶಾಸಕರಾದ ಸುಭಾಷ್ ಗುತ್ತೇದಾರ, ಸುನೀಲ ವಲ್ಲಾಪುರೆ, ಮಾಜಿ ಸಂಸದ ಡಾ. ಉಮೇಶ್ ಜಾಧವ್ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಅನೇಕ ಶಾಸಕರು, ಮಾಜಿ ಶಾಸಕರು ಹಾಗೂ ಹಿರಿಯ ಸಹಕಾರಿ ಧುರೀಣರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೇಣುಕಾಚಾರ್ಯ ಯುಗಮಾನೋತ್ಸವ ಸ್ವಾಗತ ಸಮಿತಿಯ ಅಧ್ಯಕ್ಷ ಸಂಗಯ್ಯ ಸ್ವಾಮಿ ಆಣವಾರ ವಹಿಸಲಿದ್ದಾರೆ.

ಚಿಂಚೋಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಮಸ್ತ ಸದ್ಭಕ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸ್ವಾಗತ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Tags

Chincholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X