ಎಸ್ಸೆಸ್ಸೆಲ್ಸಿ ಪರೀಕ್ಷೆ : ಅಫಜಲಪುರ ಮಹಾಂತೇಶ್ವರ ಪ್ರೌಢಶಾಲೆಯ ಅಮೋಗಿ ತೆಗ್ಗಿಳ್ಳಿ ಪ್ರಥಮ

ಕಲಬುರಗಿ: 2025 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಫಜಲಪುರ ಪಟ್ಟಣದ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಪ್ರೌಢಶಾಲೆಯ ವಿದ್ಯಾರ್ಥಿ ಅಮೋಗಿ ರಮೇಶ ತೆಗ್ಗಿಳ್ಳಿ 91.52% ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದು, ಓಂಕಾರ ರಾಜು ಸುಲೇಕಾರ್ 85.44% ಅಂಕಗಳನ್ನು ಪಡೆದು ಎರಡನೇ ಸ್ಥಾನ ಗಿಟ್ಟಿಸಿದ್ದಾನೆ ಎಂದು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಚಂದ್ರಕಾಂತ ಗುಂಡದ ತಿಳಿಸಿದ್ದಾರೆ.
ಇಬ್ಬರು ವಿದ್ಯಾರ್ಥಿಗಳ ಸಾಧನೆಗಾಗಿ ಮಹಾಂತೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶಾಸಕ ಎಂ.ವೈ.ಪಾಟೀಲ್ ಮತ್ತು ಸಮಸ್ತ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
Next Story





