Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ...

ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಮತದಾನಕ್ಕೆ ಆದ್ಯತೆ: ಝಹೀರಾ ನಸೀಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಕಲ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ9 Oct 2026 9:34 PM IST
share
ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಮತದಾನಕ್ಕೆ ಆದ್ಯತೆ: ಝಹೀರಾ ನಸೀಮ್

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಝಹೀರಾ ನಸೀಮ್ ತಿಳಿಸಿದರು.

ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿ ಮಾತನಾಡಿದ ಅವರು, ಕ್ಷೇತ್ರದ ಎಲ್ಲ ತಾಲೂಕುಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೊಳಿಸುವ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಚುನಾವಣೆಗೆ ಸಂಬಂಧಿಸಿದ ದೂರುಗಳನ್ನು ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ 08472-200255ಕ್ಕೆ ಕರೆ ಮಾಡಿ ಸಲ್ಲಿಸಬಹುದು ಎಂದು ಹೇಳಿದರು.

ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ಅಕ್ಟೋಬರ್‌ 23ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಶುಕ್ರವಾರ ಕೊನೆಯ ದಿನವಾಗಿದ್ದು, ಪಕ್ಷೇತರ ಅಭ್ಯರ್ಥಿ ನಬಿರಸೂಲ್ ದಸ್ತಗೀರಸಾಬ್ ಜಕಾತಿ ಅವರು ನಾಮಪತ್ರ ಹಿಂಪಡೆದಿದ್ದಾರೆ. ಹೀಗಾಗಿ ಅಂತಿಮವಾಗಿ 13 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ ಎಂದು ತಿಳಿಸಿದರು.

34,784 ಮತದಾರರು, 144 ಮತಗಟ್ಟೆಗಳು:

ಕ್ಷೇತ್ರದಲ್ಲಿ ಒಟ್ಟು 34,784 ಮತದಾರರು ನೋಂದಣಿಯಾಗಿದ್ದು, ಇವರಲ್ಲಿ 20,040 ಪುರುಷರು ಹಾಗೂ 14,744 ಮಹಿಳೆಯರಿದ್ದಾರೆ. ಬಳ್ಳಾರಿಯ ಒಂದು ಹೆಚ್ಚುವರಿ ಮತಗಟ್ಟೆ ಸೇರಿದಂತೆ ಒಟ್ಟು 144 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತಗಟ್ಟೆ ಏಜೆಂಟರ ನೇಮಕಾತಿಗೆ ಸಂಬಂಧಿಸಿದ ವಿವರಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕು ಎಂದು ಅಭ್ಯರ್ಥಿಗಳಿಗೆ ಸೂಚಿಸಿದರು.

ಚುನಾವಣಾ ಪ್ರಚಾರಕ್ಕೆ ವಾಹನಗಳನ್ನು ಬಳಸಲು ಜಿಲ್ಲಾಧಿಕಾರಿ ಕಚೇರಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಮತಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ಸಂಚಾರಕ್ಕೆ ಸಂಬಂಧಿಸಿದ ಅನುಮತಿಯನ್ನು ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಪಡೆಯಬೇಕು. ಚುನಾವಣಾ ಕರಪತ್ರಗಳ ಮುದ್ರಣಕ್ಕೂ ನಿಗದಿತ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು.

ಮತದಾನ ನಡೆಯುವ ಸಂದರ್ಭದಲ್ಲಿ ಮತಗಟ್ಟೆಗಳ ಸುತ್ತಲಿನ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಮದ್ಯ ಮಾರಾಟ ಹಾಗೂ ಸೇವನೆಯನ್ನು ನಿಷೇಧಿಸಲಾಗುತ್ತದೆ. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಲು ಎಲ್ಲ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗುತ್ತದೆ. ಮತದಾರರು ಚುನಾವಣಾ ಆಯೋಗ ಸೂಚಿಸಿರುವ ಅಧಿಕೃತ ಗುರುತಿನ ಚೀಟಿಗಳಲ್ಲಿ ಯಾವುದಾದರೂ ಒಂದನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು ಎಂದು ಹೇಳಿದರು.

ಅ. 27ರಂದು ಮತ ಎಣಿಕೆ:

ಅಕ್ಟೋಬರ್‌ 27ರಂದು ಕಲಬುರಗಿಯ ನಗರದ ಗುಲ್ಬರ್ಗಾ ವಿಶ್ವವಿದ್ಯಾಲಯದ ಭಾಸ್ಕರ್‌ ಹಾಲ್‌ನಲ್ಲಿ ಭದ್ರತಾ ಕೊಠಡಿ ಹಾಗೂ ಮತ ಎಣಿಕೆ ಕೇಂದ್ರ ಸ್ಥಾಪಿಸಲಾಗುವುದು. ಸಮೀಪದ ಪ್ರಾಣಿಶಾಸ್ತ್ರ ವಿಭಾಗದ ಸಭಾಂಗಣದಲ್ಲಿ ಮಾಧ್ಯಮ ಕೇಂದ್ರ ತೆರೆಯಲಾಗುತ್ತದೆ. ಮತ ಎಣಿಕೆಗಾಗಿ 14 ಟೇಬಲ್‌ಗಳ ವ್ಯವಸ್ಥೆ ಮಾಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಮತ ಎಣಿಕೆ ಏಜೆಂಟರ ವಿವರಗಳನ್ನು ಭಾವಚಿತ್ರದೊಂದಿಗೆ ನಿಗದಿತ ನಮೂನೆ-18ರಲ್ಲಿ ಸಲ್ಲಿಸಬೇಕು ಎಂದು ಸೂಚಿಸಿದರು.

ಅಂದು ಬೆಳಿಗ್ಗೆ 7.45ಕ್ಕೆ ಭದ್ರತಾ ಕೊಠಡಿಯ ಮುದ್ರೆ ತೆರೆಯಲಾಗುವುದು. ಈ ಸಂದರ್ಭದಲ್ಲಿ ಸಂಬಂಧಪಟ್ಟವರು ಕಡ್ಡಾಯವಾಗಿ ಹಾಜರಿರಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್‌, ಮಹಾನಗರ ಪಾಲಿಕೆಯ ಉಪ ಆಯುಕ್ತೆ (ಆಡಳಿತ) ಪ್ರಮೀಳಾ ಎಂ.ಕೆ. ಸೇರಿದಂತೆ ಚುನಾವಣಾಧಿಕಾರಿಗಳು ಹಾಗೂ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಉಪಸ್ಥಿತರಿದ್ದರು.

Tags

KalaburagiNorth-East Teachers' Constituency
share
ವಾರ್ತಾಭಾರತಿ
ವಾರ್ತಾಭಾರತಿ
Next Story
X