ಕಲಬುರಗಿ: ಹಾವು ಕಡಿದು ವಿದ್ಯಾರ್ಥಿನಿ ಮೃತ್ಯು

ಕಲಬುರಗಿ: ಹಾವು ಕಡಿದು ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರದಲ್ಲಿ ಬುಧವಾರ ರಾತ್ರಿ ನಡೆದಿದೆ.
ದೇವಲ ಗಾಣಗಾಪುರ ಗ್ರಾಮದ ಅವಧೂತ್ ಟಾಕಲೆ ಅವರ ಪುತ್ರಿ ಶ್ರೀದೇವಿ (15) ಮೃತ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.
ದೇವಲಗಾಣಗಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಹಾಗೂ ಆಕೆಯ ಕುಟುಂಬದವರು ಗ್ರಾಮದ ಹೊಲದ ಮನೆಯಲ್ಲಿ ನೆಲೆಸಿದ್ದರು. ವಿದ್ಯಾರ್ಥಿನಿ ಮನೆಯಿಂದ ಹೊರಗೆ ಬಂದಾಗ ಹಾವು ಕಚ್ಚಿದೆ.
ಕೂಡಲೇ ಬಾಲಕಿಯನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ದೇವಲ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





