Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ನೀಟ್ ಅಕ್ರಮ ಖಂಡಿಸಿ ಜೇವರ್ಗಿಯಲ್ಲಿ...

ನೀಟ್ ಅಕ್ರಮ ಖಂಡಿಸಿ ಜೇವರ್ಗಿಯಲ್ಲಿ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 July 2026 11:32 PM IST
share
ನೀಟ್ ಅಕ್ರಮ ಖಂಡಿಸಿ ಜೇವರ್ಗಿಯಲ್ಲಿ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ಜೇವರ್ಗಿ: ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿ-ಯುವಕರ ಹೋರಾಟಕ್ಕೆ ಬೆಂಬಲ ಸೂಚಿಸಿ ಹಾಗೂ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ವಿವಿಧ ವಿದ್ಯಾರ್ಥಿ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

ಪ್ರತಿಭಟನಾಕಾರರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಬಳಿಕ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ವ್ಯವಸ್ಥೆಯಲ್ಲಿನ ಪಾರದರ್ಶಕತೆ ಕೊರತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಕುರಿತು ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮನವಿಯಲ್ಲಿ, ದೇಶದಾದ್ಯಂತ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಅಥವಾ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಅಲ್ಲದೆ, ದೆಹಲಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ಕುರಿತು ನ್ಯಾಯಸಮ್ಮತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯನ್ನು ರದ್ದುಗೊಳಿಸಿ ವೈದ್ಯಕೀಯ ಶಿಕ್ಷಣವನ್ನು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ತರಬೇಕು. ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವರು ಹಾಗೂ ಪ್ರಧಾನಮಂತ್ರಿಗಳು ದೇಶದ ವಿದ್ಯಾರ್ಥಿಗಳು ಮತ್ತು ಅವರ ಪಾಲಕರಲ್ಲಿ ಕ್ಷಮೆಯಾಚಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಪ್ರತಿಭಟನೆಯಲ್ಲಿ ಡಾ. ಮಹೇಶಕುಮಾರ ರಾಠೋಡ, ಇಬ್ರಾಹಿಂ ಪಟೇಲ್ ಯಾಳವಾರ, ಭೀಮರಾಯ ನಗನೂರ, ಇಬ್ರಾಹಿಂ ಪಟೇಲ್ ಜೇವರಗಿ, ಬಾಬು ಬಿ. ಪಾಟೀಲ, ಮೊಯಿನುದ್ದೀನ್ ಇನಾಮದಾರ್, ಬಿ.ಎಚ್. ಮಾಲೀಪಾಟೀಲ್, ರಾಜಾ ಪಟೇಲ್ ಯಾಳವಾರ, ಗುರುನಾಥ ಸಾಹು ರಾಜವಾಳ, ಮಹಾದೇವ ಕೊಳಕೂರ, ಸಿದ್ದು ಕೆರೂರ, ಈರಣ್ಣಗೌಡ ಕುರನಳ್ಳಿ, ಅಜೀಜ್ ಪಟೇಲ್ ಯಾಳವಾರ, ಬಸವರಾಜ ಬಾಗೇವಾಡಿ, ಭೀಮಾಶಂಕರ ಜನಿವಾರ, ಮಹಮ್ಮದ್ ಚೌದರಿ, ಶಾಂತಯ್ಯ ಗುತ್ತೇದಾರ, ಅಲ್ಲಾ ಪಟೇಲ್ ಇಜೇರಿ, ಸದ್ಧಾಂ ಪಟೇಲ್ ಸಿಗರತಳ್ಳಿ, ಶಾಹೀರ್ ಪಟೇಲ್ ಮಾಲಿ, ಸಿದ್ದು ಪೂಜಾರಿ ಜನಿವಾರ, ಸುನೀಲ ಕುಮಾರ ಬಡಿಗೇರ, ರವಿ ಪಾಟೀಲ, ರವಿಚಂದ್ರ, ಸಮೀರ್ ಗೌಸ್ ಇನಾಂದಾರ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಪ್ರತಿಭಟನೆ ಶಾಂತಿಯುತವಾಗಿ ನಡೆಯಿತು. ಬಳಿಕ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳು ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ರವಾನಿಸಲಾಯಿತು.

Tags

Jewargiproteststudent
share
ವಾರ್ತಾಭಾರತಿ
ವಾರ್ತಾಭಾರತಿ
Next Story
X