ಪತ್ರಕರ್ತರಿಗೆ ಅಧ್ಯಯನ ಶಿಬಿರ : ಅರ್ಜಿ ಆಹ್ವಾನ

ಕಲಬುರಗಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಆಗಸ್ಟ್ 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
20 ರಿಂದ 40 ವರ್ಷ ವಯೋಮಾನದ ಈಗಾಗಲೇ ಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಪತ್ರಿಕೋದ್ಯಮ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-07-2025 ಆಗಿದೆ. ಆಸಕ್ತರು, ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್‍ದಲ್ಲಿ https://sahithyaacademy.karnataka.gov.in ಮೂಲಕ ವಿವರ ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ ಕರಿಯಪ್ಪ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Next Story





