ಕಲಬುರಗಿ | ಸಾಲಬಾಧೆ; ನದಿಗೆ ಹಾರಿ ರೈತ ಆತ್ಮಹತ್ಯೆ

ಶಂಕರ್ ಚಿಮ್ಮನಚೋಡ (58)
ಕಲಬುರಗಿ : ಸಾಲದ ಬಾಧೆ ತಾಳಲಾರದೆ ನದಿಗೆ ಹಾರಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಂಚೋಳಿ ತಾಲೂಕಿನ ಚೆನ್ನೂರು ಗ್ರಾಮದ ಚೆನ್ನೂರು ನದಿಯಲ್ಲಿ ಮಂಗಳವಾರ ನಡೆದಿದೆ.
ಬೀದರ್ ಜಿಲ್ಲೆ ಚಿಟಗುಪ್ಪಾ ಗ್ರಾಮದ ಶಂಕರ್ ಚಿಮ್ಮನಚೋಡ (58) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದುಬಂದಿದೆ.
ಬ್ಯಾಂಕ್ನಲ್ಲಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ಶಂಕರ್ಗೆ ಸಾಲ ತೀರಿಸುವಂತೆ ಒತ್ತಡ ಹೇರಲಾಗಿತ್ತು ಎನ್ನಲಾಗಿದೆ. ಆದರೆ ಸಾಲಬಾಧೆ ತಾಳಲಾರದೆ ರೈತ ಶಂಕರ್ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ರೈತನ ಮೃತದೇಹವನ್ನು ಮಂಗಳವಾರ ಹೊರ ತೆಗೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸ್ಥಳಕ್ಕೆ ಚಿಂಚೋಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Next Story





