Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಿಳಂಬವಿಲ್ಲದೆ ರೈತರಿಗೆ ಬಿತ್ತನೆ ಬೀಜ,...

ವಿಳಂಬವಿಲ್ಲದೆ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಮಾಡಿ: ರಾಜ್ಯ ರೈತ ಸಂಘ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ19 May 2026 6:54 PM IST
share
ವಿಳಂಬವಿಲ್ಲದೆ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಮಾಡಿ: ರಾಜ್ಯ ರೈತ ಸಂಘ ಆಗ್ರಹ

ಕಲಬುರಗಿ: ಈ ವರ್ಷ ಮುಂಗಾರು ಹಂಗಾಮು ಮುಂಗಡವಾಗಿಯೇ ಆರಂಭವಾಗುವ ಮುನ್ಸೂಚನೆ ಇರುವ ಹಿನ್ನೆಲೆ, ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಯಾವುದೇ ವಿಳಂಬವಿಲ್ಲದೆ ಸಮರ್ಪಕವಾಗಿ ಪೂರೈಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಸರಕಾರವನ್ನು ಆಗ್ರಹಿಸಿದೆ.

ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಕರೆಪ್ಪ ಕರಗೊಂಡ್ ಹಾಗೂ ಜಿಲ್ಲಾಧ್ಯಕ್ಷ ನಾಗೇಂದ್ರ ಸಿದ್ದು ಎಸ್‌ಎಲ್ ನೇತೃತ್ವದಲ್ಲಿ ರೈತ ಮುಖಂಡರ ನಿಯೋಗವು ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

ಮುಂಗಾರು ಆರಂಭವಾಗುವ ಮುನ್ನವೇ ಎಲ್ಲ ತಾಲೂಕುಗಳ ಕೃಷಿ ಇಲಾಖೆ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿ, ವಿವಿಧ ಬಗೆಯ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರಗಳ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ರೈತರಿಗೆ ಸಮಯಕ್ಕೆ ಸರಿಯಾಗಿ ಗುಣಮಟ್ಟದ ಬೀಜ ಮತ್ತು ರಸಗೊಬ್ಬರ ಲಭ್ಯವಾಗುವಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ಸಂಘದ ಮುಖಂಡರು ಆಗ್ರಹಿಸಿದರು.

ಇದಲ್ಲದೆ, ರೈತರಿಗೆ ಪೂರೈಸುವ ಬೀಜಗಳು ಕಳಪೆ ಗುಣಮಟ್ಟದಿಂದ ಕೂಡಿರಬಾರದು. ಹೊರ ರಾಜ್ಯಗಳಿಂದ ಅಕ್ರಮವಾಗಿ ತರಲಾಗುವ ಕಳಪೆ ಬೀಜಗಳ ಮಾರಾಟದ ಮೇಲೆ ಕೃಷಿ ಇಲಾಖೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ರಸಗೊಬ್ಬರ ವಿತರಣೆಯನ್ನು ಎಫ್‌ಐಡಿ (FID) ವ್ಯವಸ್ಥೆಯ ಮೂಲಕ ಮಾಡುವ ತೀರ್ಮಾನವನ್ನು ಕೈಬಿಡಬೇಕು ಎಂದು ರೈತ ಸಂಘ ಆಗ್ರಹಿಸಿದೆ. ಎಫ್‌ಐಡಿ ಪದ್ಧತಿಯಿಂದ ರೈತರಿಗೆ ಅನಗತ್ಯ ತೊಂದರೆಗಳು ಎದುರಾಗುವ ಸಾಧ್ಯತೆ ಇದೆ ಎಂದು ಮುಖಂಡರು ಅಭಿಪ್ರಾಯಪಟ್ಟರು.

ಇದೇ ವೇಳೆ, ಕೃತಕ ಅಭಾವ ಸೃಷ್ಟಿಸಿ ರೈತರನ್ನು ಸಂಕಷ್ಟಕ್ಕೆ ತಳ್ಳುವ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕೀಟನಾಶಕ ಅಂಗಡಿ ಮಾಲಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಇಂತಹ ಅಕ್ರಮಗಳಲ್ಲಿ ತೊಡಗುವ ವ್ಯಾಪಾರಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ರೈತ ಸಂಘ ಎಚ್ಚರಿಸಿದೆ.

ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಉಪ ನಿರ್ದೇಶಕರಿಗೆ ಈ ಸಂಬಂಧ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಜಿಲ್ಲಾಡಳಿತಕ್ಕೆ ರೈತ ಮುಖಂಡರು ಮನವಿ ಮಾಡಿಕೊಂಡಿದ್ದಾರೆ.

Tags

Supply seedFarmers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X