Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ತಳವಾರ ಎಸ್‌ಟಿ ಪ್ರಮಾಣ ಪತ್ರ ಅರ್ಜಿ...

ತಳವಾರ ಎಸ್‌ಟಿ ಪ್ರಮಾಣ ಪತ್ರ ಅರ್ಜಿ ತಿರಸ್ಕಾರ: ತಹಶೀಲ್ದಾರ್ ವಜಾಕ್ಕೆ ಜಿಲ್ಲಾಧಿಕಾರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ9 Jun 2026 9:46 PM IST
share
ತಳವಾರ ಎಸ್‌ಟಿ ಪ್ರಮಾಣ ಪತ್ರ ಅರ್ಜಿ ತಿರಸ್ಕಾರ: ತಹಶೀಲ್ದಾರ್ ವಜಾಕ್ಕೆ ಜಿಲ್ಲಾಧಿಕಾರಿಗೆ ಮನವಿ

ಅಫಜಲಪುರ: ತಳವಾರ ಹಾಗೂ ಪರಿವಾರ ಸಮುದಾಯವನ್ನು ಕೇಂದ್ರ ಸರಕಾರ ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರ್ಪಡೆಗೊಳಿಸಿ ಅಧಿಸೂಚನೆ ಹೊರಡಿಸಿದ್ದರೂ, ಅಫಜಲಪುರ ತಾಲೂಕಿನಲ್ಲಿ ಅರ್ಹ ಫಲಾನುಭವಿಗಳಿಗೆ ಎಸ್‌ಟಿ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಅನ್ಯಾಯ ನಡೆಯುತ್ತಿದೆ ಎಂದು ಆರೋಪಿಸಿ ಗ್ರೇಡ್-2 ತಹಶೀಲ್ದಾರ್ ಅವರನ್ನು ವಜಾಗೊಳಿಸುವಂತೆ ತಾಲೂಕು ಪರಿಶಿಷ್ಟ ಪಂಗಡ ಸಮಾಜ ಸೇವಾ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಅಂಬಣ್ಣ ನಾಯ್ಕೋಡಿ ಅವರು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ, ಗ್ರಾಮ ಒನ್ ಕೇಂದ್ರ, ನಾಡಕಚೇರಿ ಹಾಗೂ ಅಟಲ್ ಜಿ ಜನಸ್ನೇಹಿ ಕೇಂದ್ರಗಳಲ್ಲಿ ತಳವಾರ ಸಮುದಾಯದ ಎಸ್‌ಟಿ ಜಾತಿ ಪ್ರಮಾಣ ಪತ್ರದ ಅರ್ಜಿಗಳನ್ನು ಸ್ವೀಕರಿಸದಂತೆ ಮೌಖಿಕ ಸೂಚನೆ ನೀಡಲಾಗಿದೆ ಎಂದು ಆರೋಪಿಸಿದರು.

ಅರ್ಜಿ ಸ್ವೀಕರಿಸಿದ ಕೆಲ ಪ್ರಕರಣಗಳಲ್ಲಿಯೂ ಸ್ಥಳೀಯ ಪರಿಶೀಲನೆ ನಡೆಸದೆ ಕಚೇರಿಯಲ್ಲಿಯೇ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ. ತಾಲೂಕಿನಲ್ಲಿ 22 ಸಾವಿರಕ್ಕೂ ಅಧಿಕ ತಳವಾರ ಸಮುದಾಯದ ಜನಸಂಖ್ಯೆ ಇದ್ದರೂ, ಈವರೆಗೆ ಅತಿ ಕಡಿಮೆ ಸಂಖ್ಯೆಯ ಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರಕಾರದ ಹೊಸ ಸುತ್ತೋಲೆಗಳು ಜಾರಿಯಲ್ಲಿದ್ದರೂ, ಹಳೆಯ ಆದೇಶಗಳನ್ನೇ ಆಧಾರವಾಗಿಟ್ಟುಕೊಂಡು ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ. ಇದರಿಂದ ಸಮುದಾಯದ ಅರ್ಹರು ಸರಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಅಂಬಣ್ಣ ನಾಯ್ಕೋಡಿ ದೂರಿದರು.

ಖಾಸಗಿ ಕೇಂದ್ರಗಳಲ್ಲಿ ಹೆಚ್ಚುವರಿ ಹಣ ಪಾವತಿಸಿ ಅರ್ಜಿ ಸಲ್ಲಿಸುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಂತಹ ಅರ್ಜಿಗಳನ್ನೂ ಹಳೆಯ ಸುತ್ತೋಲೆಗಳ ಆಧಾರದ ಮೇಲೆ ತಿರಸ್ಕರಿಸುವ ಮೂಲಕ ಗ್ರೇಡ್-2 ತಹಶೀಲ್ದಾರ್ ಸಮುದಾಯದ ವಿರುದ್ಧ ವೈಯಕ್ತಿಕ ದ್ವೇಷ ಸಾಧಿಸುತ್ತಿದ್ದಾರೆ. ಹೀಗಾಗಿ ಅವರನ್ನು ತಕ್ಷಣ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಇಕ್ರಮ್ ಶರೀಫ್, “ಸಮಸ್ಯೆ ಕುರಿತು ಗ್ರೇಡ್-2 ತಹಶೀಲ್ದಾರ್ ಅವರನ್ನು ಕರೆಸಿ ವಿಷಯವನ್ನು ಕೂಲಂಕಷವಾಗಿ ಪರಿಶೀಲಿಸಲಾಗುವುದು. ತಳವಾರ ಸಮುದಾಯದ ಅರ್ಹರಿಗೆ ನ್ಯಾಯಯುತವಾಗಿ ಜಾತಿ ಪ್ರಮಾಣ ಪತ್ರ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ, ತಹಶೀಲ್ದಾರ್ ಸಂಜೀವಕುಮಾರ್‌ ದಾಸರ, ಪರಿಶಿಷ್ಟ ಪಂಗಡ ಸಮಾಜ ಸೇವಾ ಸಾಂಸ್ಕೃತಿಕ ಸಂಘದ ಉಪಾಧ್ಯಕ್ಷ ಭೀಮರಾಯ ಜಮಾದಾರ, ಸಂತೋಷ ತಳವಾರ, ದೇವಿಂದ್ರ ಜಮಾದಾರ, ಮಲ್ಲು ಜಮಾದಾರ ಹಾಗೂ ದತ್ತಪ್ಪ ಜಮಾದಾರ ಉಪಸ್ಥಿತರಿದ್ದರು.

Tags

TalwarST Certificate
share
ವಾರ್ತಾಭಾರತಿ
ವಾರ್ತಾಭಾರತಿ
Next Story
X