Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸುಳ್ಳು ಸುದ್ದಿಗಳಿಂದ ಆಡಳಿತ ವ್ಯವಸ್ಥೆ...

ಸುಳ್ಳು ಸುದ್ದಿಗಳಿಂದ ಆಡಳಿತ ವ್ಯವಸ್ಥೆ ಬದಲಿಸಲು ಸಾಧ್ಯವಿಲ್ಲ: ಛಲವಾದಿ ನಾರಾಯಣಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ31 Oct 2026 6:33 PM IST
share
ಸುಳ್ಳು ಸುದ್ದಿಗಳಿಂದ ಆಡಳಿತ ವ್ಯವಸ್ಥೆ ಬದಲಿಸಲು ಸಾಧ್ಯವಿಲ್ಲ: ಛಲವಾದಿ ನಾರಾಯಣಸ್ವಾಮಿ

ಶಹಾಪುರ: ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ದೇಶದ ಆಡಳಿತ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯವಿಲ್ಲ. ದೇಶದ ಸಕ್ರಮ ಮತದಾರರು ತಮ್ಮ ಮತದಾನದ ಮೂಲಕ ಸರ್ಕಾರವನ್ನು ಬದಲಾಯಿಸಬಹುದೇ ಹೊರತು, ಡಾ. ಬಿ.ಆರ್. ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಅಡಿಯಲ್ಲಿ ನಡೆಯುತ್ತಿರುವ ಆಡಳಿತ ವ್ಯವಸ್ಥೆಯನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ನಗರದಲ್ಲಿ ಬಿಜೆಪಿ ಮುಖಂಡ ಅಮೀನರಡ್ಡಿ ಯಾಳಗಿ ಅವರ ನಿವಾಸದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮಾಜಿ ಸಚಿವ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ನಕಲಿ ಜೆನ್ ಝೀಗಳ ಹೋರಾಟ ಹಾಗೂ ಆಡಳಿತ ವ್ಯವಸ್ಥೆ ಬದಲಾವಣೆಯ ಹೆಸರಿನಲ್ಲಿ ನೀಡಲಾಗುತ್ತಿರುವ ಹೇಳಿಕೆಗಳ ವಿರುದ್ಧ ವಾಗ್ದಾಳಿ ನಡೆಸಿದರು. ಇಂತಹ ಹೋರಾಟಗಾರರು ಕಾಂಗ್ರೆಸ್‌ನ ಅಸಲಿ ಮುಖಗಳಾಗಿದ್ದಾರೆ ಎಂದು ಆರೋಪಿಸಿದರು.

ಮಾಜಿ ಸಚಿವ ಎನ್.ಮಹೇಶ್ ಮಾತನಾಡಿ, ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಸಮರ್ಥಿಸಿಕೊಂಡರು. ಅಕ್ರಮ ನುಸುಳುಕೋರರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು. ದೇಶದಲ್ಲಿ ಕಾಂಗ್ರೆಸ್ ಸೃಷ್ಟಿಸಲು ಹೊರಟಿದೆ ಎನ್ನಲಾದ ಅರಾಜಕತೆಯನ್ನು ತಡೆಯುವ ನಿಟ್ಟಿನಲ್ಲಿ ಜನರು ಜಾಗೃತರಾಗಬೇಕು ಎಂದು ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರಡ್ಡಿ ಮುದ್ನಾಳ, ಮಾಜಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ, ಹಿರಿಯ ಮುಖಂಡ ಸಿದ್ದಣ್ಣಗೌಡ ವಡಿಗೇರಾ, ಉಪಾಧ್ಯಕ್ಷ ಬಸವರಾಜ ಸೊನ್ನದ, ಅಡಿವಪ್ಪ ಜಾಕಾ, ಪ್ರಧಾನ ಕಾರ್ಯದರ್ಶಿಗಳಾದ ಪರಶುರಾಮ ಕುರುಕುಂದಿ, ಶಿವರಾಜ ದೇಶಮುಖ, ಯಾದಗಿರಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ ವಡಿಗೇರಾ, ತಿರುಪತಿರೆಡ್ಡಿ, ರಾಜಶೇಖರ ಗೂಗಲ್, ರಾಜುಗೌಡ ಉಕ್ಕಿನಾಳ, ಗುರು ಕಾಮ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

fake newsChalavadi Narayanaswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X