Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲ್ಯಾಣ ಕರ್ನಾಟಕ ವಿಮೋಚನೆಗೂ ರಕ್ತಸಿಕ್ತ...

ಕಲ್ಯಾಣ ಕರ್ನಾಟಕ ವಿಮೋಚನೆಗೂ ರಕ್ತಸಿಕ್ತ ಇತಿಹಾಸವಿದೆ: ತಹಶೀಲ್ದಾರ್ ನಾಗಯ್ಯ ಹಿರೇಮಠ

ಚಿತ್ತಾಪುರದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ; ಧ್ವಜಾರೋಹಣ, ಸಾಧಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ17 Sept 2026 4:47 PM IST
share
ಕಲ್ಯಾಣ ಕರ್ನಾಟಕ ವಿಮೋಚನೆಗೂ ರಕ್ತಸಿಕ್ತ ಇತಿಹಾಸವಿದೆ: ತಹಶೀಲ್ದಾರ್ ನಾಗಯ್ಯ ಹಿರೇಮಠ

ಚಿತ್ತಾಪುರ: ಭಾರತಕ್ಕೆ 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ದೊರೆತರೆ, ಹೈದರಾಬಾದ್ ಕರ್ನಾಟಕ ಭಾಗಕ್ಕೆ ಒಂದು ವರ್ಷದ ಬಳಿಕ 1948ರ ಸೆಪ್ಟೆಂಬರ್ 17ರಂದು ಸ್ವಾತಂತ್ರ್ಯ ದೊರೆಯಿತು. ಹೀಗಾಗಿ ಕಲ್ಯಾಣ ಕರ್ನಾಟಕ ವಿಮೋಚನೆಗೂ ರಕ್ತಸಿಕ್ತ ಇತಿಹಾಸವಿದೆ ಎಂದು ತಹಶೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.

ಪಟ್ಟಣದ ಪ್ರಜಾಸೌಧ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದಿಟ್ಟ ನಿರ್ಧಾರದಿಂದ ನಡೆದ ಆಪರೇಷನ್ ಪೋಲೊ ಪೊಲೀಸ್ ಕಾರ್ಯಾಚರಣೆಯ ಮೂಲಕ ಹೈದರಾಬಾದ್ ಕರ್ನಾಟಕ ವಿಮೋಚನೆಗೊಂಡಿತು. ಈ ಇತಿಹಾಸವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳುವುದು ಅಗತ್ಯ ಎಂದು ಕರೆ ನೀಡಿದರು.

ಉತ್ತಮ ಶಿಕ್ಷಣದ ಮೂಲಕವೇ ಜೀವನದಲ್ಲಿ ಸಾಧನೆ ಸಾಧ್ಯ. 371(ಜೆ) ತಿದ್ದುಪಡಿಯಿಂದ ಕಲ್ಯಾಣ ಕರ್ನಾಟಕ ಭಾಗದ ಯುವಕರಿಗೆ ಕೆಎಎಸ್, ಪಿಎಸ್‌ಐ ಸೇರಿದಂತೆ ವಿವಿಧ ಸರ್ಕಾರಿ ಹುದ್ದೆಗಳು ಹಾಗೂ ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ವೃತ್ತಿಪರ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶಗಳು ಲಭ್ಯವಾಗಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ, ತಾಲೂಕು ಪಂಚಾಯಿತಿ ಇಒ ಮಹಮ್ಮದ್ ಅಕ್ರಂ ಪಾಶಾ, ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಬಿರಾದಾರ ಮಾತನಾಡಿದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಪ್ರಲ್ಲಾದ ವಿಶ್ವಕರ್ಮ, ದೇವಿಂದ್ರ ಅಣಕಲ್, ಅರಣ್ಯಾಧಿಕಾರಿ ವಿಜಯಕುಮಾ‌ರ್ ಬಡಿಗೇ‌ರ್, ಸಿಪಿಐ ಎಸ್.ಸಿ ಪಾಟೀಲ್, ಪಿಎಸ್‌ಐ ಮಂಜುನಾಥ ರೆಡ್ಡಿ, ನಾಗರೆಡ್ಡಿ ಗೋಪಸೇನ್, ಪಂಡಿತ್ ಸಿಂಧೆ, ಮೈನೋದ್ದಿನ್, ರಾಜಣ್ಣ ಕರದಾಳ ಸೇರಿದಂತೆ ಇತರರು ಇದ್ದರು.

ಶಂಕರ ಕಣ್ಣಿ ನಿರೂಪಿಸಿ, ವಂದಿಸಿದರು.

Tags

Kalyana KarnatakaLiberation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X