Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಚಂದನಕೇರಾ ವ್ಯಾಪ್ತಿಯ...

ಕಲಬುರಗಿ| ಚಂದನಕೇರಾ ವ್ಯಾಪ್ತಿಯ ಹಳ್ಳಿಗಳನ್ನು ಚಿಂಚೋಳಿ ತಾಲೂಕಿನಿಂದ ಕೈ ಬಿಡದಂತೆ ಸ್ಥಳೀಯರಿಂದ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 Aug 2025 7:41 PM IST
share
ಕಲಬುರಗಿ| ಚಂದನಕೇರಾ ವ್ಯಾಪ್ತಿಯ ಹಳ್ಳಿಗಳನ್ನು ಚಿಂಚೋಳಿ ತಾಲೂಕಿನಿಂದ ಕೈ ಬಿಡದಂತೆ ಸ್ಥಳೀಯರಿಂದ ಆಗ್ರಹ

ಕಲಬುರಗಿ: ಚಿಂಚೋಳಿ ತಾಲೂಕಿನ ಚಂದನಕೇರಾ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿನ ಹಳ್ಳಿಗಳನ್ನು ತಾಲೂಕಿನಿಂದ ಕೈ ಬಿಟ್ಟು ಕಮಲಾಪುರ ತಾಲೂಕು ಪಟ್ಟಿಯಲ್ಲಿ ಸೇರಿಸಬಾರದು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಚಿಂಚೋಳಿ ತಾಲೂಕಿನ ತಹಶೀಲ್ದಾರ್ ಕಚೇರಿಯ ಪ್ರಜಾ ಸೌಧದ ಮುಂಭಾಗದಲ್ಲಿ ಚಂದನಕೇರಾ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಒಳಪಡುವ ಗ್ರಾಮಸ್ಥರು ಹಾಗೂ ತಾಂಡಾ ನಿವಾಸಿಗಳು ಸೇರಿಕೊಂಡು ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಹೋರಾಟಗಾರ ಹಣಮಂತ ಪೂಜಾರಿ ಮಾತನಾಡಿ, ಚಂದನಕೇರಾ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿನ ಗ್ರಾಮಸ್ಥರು ಹಲವು ವರ್ಷಗಳಿಂದ ಚಿಂಚೋಳಿ ತಾಲೂಕಿಗೆ ಒಳಪಟ್ಟಿದ್ದಾರೆ. ಕೊಟಗಾ, ರಾಣಾಪೂರ, ರಾಣಾಪೂರ ತಾಂಡಾ, ಮಂಡಗೋಳ ತಾಂಡಾ, ಸಿರಸನ್ ಬುಡಗಿ ತಾಂಡಾ, ಖನಿ ತಾಂಡಾ, ಕಲದೊಡ್ಡಿ ತಾಂಡಾ ಸೇರಿದಂತೆ ಇನ್ನಿತರ ಗ್ರಾಮ ಹಾಗೂ ತಾಂಡಾಗಳು ಚಂದನಕೇರಾ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಸೇರಿವೆ. ಆದರೆ ಇತ್ತೀಚೆಗೆ ಚಂದನಕೇರಾ ಗ್ರಾಮವನ್ನು ಕಮಲಾಪೂರ ತಾಲೂಕಿಗೆ ಸೇರಿಸುವಂತೆ ಕೆಲವರು ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.

ಚಿಂಚೋಳಿ ತಾಲೂಕು ಚಂದನಕೇರಾ ಹಾಗೂ ಅದಕ್ಕೆ ಒಳಪಡುವ ಸುತ್ತಮುತ್ತಲಿನ ಗ್ರಾಮಗಳಿಗೆ ಹಾಗೂ ತಾಂಡಾಗಳಿಗೆ ಸಮೀಪವಾಗಿರುತ್ತದೆ. ಸದರಿ ಗ್ರಾಮದ ಜನರ ಎಲ್ಲಾ ದಾಖಲೆಗಳಲ್ಲಿ ಚಿಂಚೋಳಿ ತಾಲೂಕು ಎಂದೇ ನಮೂದಾಗಿವೆ. ಅಲ್ಲದೇ, ಚಂದನಕೇರಾ ಗ್ರಾಮ ಪಂಚಾಯತ್‌ ವ್ಯಾಪ್ತಿಯ 75% ಪ್ರತಿಶತದಷ್ಟು ಜನರು ಚಿಂಚೋಳಿ ತಾಲೂಕಿನಲ್ಲಿಯೇ ಇರಲು ಹಾಗೂ ಅದನ್ನೇ ತಾಲೂಕಾಗಿ ಮುಂದುವರಿಯುವುದನ್ನು ಬಯಸಿದ್ದಾರೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಸಂದರ್ಭದಲ್ಲಿ ವಿಠ್ಠಲ ಮಂಗಲಗಿ, ಕಾಶಿನಾಥ ಮೆಲಕೇರಿ ಪೂಣಿ, ರಾಜಕುಮಾರ, ಆಕಾಶ ಮದನ, ಅಂಬರೀಷ ನಾಗೂರ, ಜಗದೇವಿ ಬಸವರಾಜ, ಮಲ್ಲಿಕಾರ್ಜುನ ಮುಕಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X