Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಇದು ವೈಯಕ್ತಿಕ ಗೆಲುವಲ್ಲ, ಕಲ್ಯಾಣ...

ಇದು ವೈಯಕ್ತಿಕ ಗೆಲುವಲ್ಲ, ಕಲ್ಯಾಣ ಕರ್ನಾಟಕದ ಶಿಕ್ಷಕರ ಗೆಲುವು: ಶಶೀಲ್ ನಮೋಶಿ

"ಕಲ್ಯಾಣ ಕರ್ನಾಟಕದ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದು ಮೊದಲ ಆದ್ಯತೆ"

ವಾರ್ತಾಭಾರತಿವಾರ್ತಾಭಾರತಿ29 Oct 2026 8:15 PM IST
share
ಇದು ವೈಯಕ್ತಿಕ ಗೆಲುವಲ್ಲ, ಕಲ್ಯಾಣ ಕರ್ನಾಟಕದ ಶಿಕ್ಷಕರ ಗೆಲುವು: ಶಶೀಲ್ ನಮೋಶಿ

ಕಲಬುರಗಿ : “ಶಿಕ್ಷಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸವೇ ನನ್ನ ಗೆಲುವಿನ ಶಕ್ತಿ. ಇದು ನನ್ನ ವೈಯಕ್ತಿಕ ಗೆಲುವಲ್ಲ, ಕಲ್ಯಾಣ ಕರ್ನಾಟಕದ ಸಮಸ್ತ ಶಿಕ್ಷಕರ ಗೆಲುವು. ಅವರ ಸಮಸ್ಯೆಗಳಿಗೆ ಸ್ಪಂದಿಸಿ, ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಧ್ವನಿಯಾಗುವುದು ನನ್ನ ಮೊದಲ ಆದ್ಯತೆ” ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಹೇಳಿದರು.

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಸ್ಯಾಕ್ ಸಭಾಂಗಣದಲ್ಲಿ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕದ ಶಿಕ್ಷಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಚಿವರ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಲು ನಿರಂತರವಾಗಿ ಪ್ರಯತ್ನಿಸುವುದಾಗಿ ತಿಳಿಸಿದರು. ಶಿಕ್ಷಕರಿಗೆ ಕೇವಲ ಭರವಸೆ ನೀಡುವುದಕ್ಕಿಂತ, ಅವರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸುವುದು ಮುಖ್ಯ ಎಂದರು.

ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ದೊರಕಿಸುವುದು, ಜೆಒಸಿ ಸಿಬ್ಬಂದಿಯ ಉದ್ಯೋಗ ಭದ್ರತೆ, ಶಿಕ್ಷಕರ ಭಡ್ತಿ ಸಮಸ್ಯೆ ಹಾಗೂ ಹಿಂದಿ ಭಾಷಾ ಶಿಕ್ಷಕರ ಬೇಡಿಕೆಗಳಿಗೆ ಸಂಬಂಧಿಸಿದಂತೆ ತಾವು ನಡೆಸಿದ ಪ್ರಯತ್ನಗಳನ್ನು ಸ್ಮರಿಸಿದರು. ಶಿಕ್ಷಕರ ಭಡ್ತಿ ಸಮಸ್ಯೆಯನ್ನು ಶಿಕ್ಷಣ ಸಚಿವರ ಗಮನಕ್ಕೆ ತಂದು, ಈ ಕುರಿತು ಸಮಿತಿ ರಚಿಸಲು ಪ್ರಯತ್ನಿಸಿರುವುದಾಗಿಯೂ ಹೇಳಿದರು.

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶಿಕ್ಷಕರು ಶೇ. 97ರಷ್ಟು ಮತದಾನದಲ್ಲಿ ಭಾಗವಹಿಸಿ ತಮ್ಮ ಗೆಲುವಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದ ಅವರು, ಶಿಕ್ಷಕರು ತೋರಿದ ಬೆಂಬಲ ಮತ್ತು ವಿಶ್ವಾಸವನ್ನು ಎಂದಿಗೂ ಮರೆಯುವುದಿಲ್ಲ ಎಂದರು.

“ನನ್ನ ಜವಾಬ್ದಾರಿ ಒಂದು ಸಂಸ್ಥೆ ಅಥವಾ ಜಿಲ್ಲೆಗೆ ಸೀಮಿತವಲ್ಲ. ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲೆಗಳ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಸ್ಯೆಗಳು ನನಗೆ ಮುಖ್ಯ. ಶಿಕ್ಷಕರ ಹಿತಾಸಕ್ತಿ ಕಾಪಾಡಲು ಮತ್ತು ಅವರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸದಾ ಪ್ರಯತ್ನಿಸುತ್ತೇನೆ” ಎಂದು ಭರವಸೆ ನೀಡಿದರು.

ಶಿಕ್ಷಕರು ತಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಗುಣವನ್ನು ಮೆಚ್ಚಿ ಮಾತನಾಡುವುದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ ಎಂದು ಭಾವುಕರಾಗಿ ನುಡಿದ ಅವರು, ಐದನೇ ಬಾರಿ ತಮ್ಮನ್ನು ಬೆಂಬಲಿಸಿದ ಎಲ್ಲ ಶಿಕ್ಷಕ ಬಂಧುಗಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ರಾಜಾ ಭೀ ಭೀಮಳ್ಳಿ, ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ. ಸಂಜಯ್ ಮಾಕಲ್, ಎಂಆರ್‌ಎಂಸಿಯ ಡಾ. ಅರುಂಧತಿ ಪಾಟೀಲ್ ಹಾಗೂ ವಿಜಯನಗರ ಮಹಿಳಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಮಹೇಶ್ ಗಂವ್ಹಾರ ಅವರು ಶಶೀಲ್ ನಮೋಶಿ ಅವರ ಸಾಧನೆ ಕುರಿತು ಮಾತನಾಡಿದರು.

ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಡಾ. ಶರಣಬಸಪ್ಪ ಹರವಾಳ, ಡಾ. ಮಹಾದೇವಪ್ಪ ರಾಂಪೂರೆ, ಅನೀಲಕುಮಾರ ಮರಗೋಳ, ನಾಗಣ್ಣ ಗಂಟಿ, ನಿಶಾಂತ್ ಎಲಿ, ಡಾ. ಎಸ್.ಆರ್. ಹೊಟ್ಟಿ ಹಾಗೂ ಆಡಳಿತಾಧಿಕಾರಿ ಡಾ. ಎಸ್.ಎಲ್. ಹಿರೇಮಠ ವೇದಿಕೆಯಲ್ಲಿದ್ದರು. ಕಾರ್ಯದರ್ಶಿ ಉದಯಕುಮಾರ್ ಚಿಂಚೋಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಶರಣಬಸಪ್ಪ ಕಮ್ಮಾರ ಪ್ರಾರ್ಥಿಸಿದರು. ಉಮಾ ರೇವೂರ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ವಿವಿಧ ಕಾಲೇಜುಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags

shashil namoshiTeachersKalyana Karnataka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X