Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯಲ್ಲಿ ಡಿ.12ರಿಂದ ಮೂರು ದಿನಗಳ...

ಕಲಬುರಗಿಯಲ್ಲಿ ಡಿ.12ರಿಂದ ಮೂರು ದಿನಗಳ ರಾಜ್ಯಮಟ್ಟದ ರೈತ ಸಮಾವೇಶ, ಕೃಷಿಮೇಳ

ವಾರ್ತಾಭಾರತಿವಾರ್ತಾಭಾರತಿ26 Oct 2026 6:11 PM IST
share
ಕಲಬುರಗಿಯಲ್ಲಿ ಡಿ.12ರಿಂದ ಮೂರು ದಿನಗಳ ರಾಜ್ಯಮಟ್ಟದ ರೈತ ಸಮಾವೇಶ, ಕೃಷಿಮೇಳ

ಕಲಬುರಗಿ: ನವ ಕರ್ನಾಟಕ ರೈತ ಸಂಘದ ವತಿಯಿಂದ ಕಲಬುರಗಿಯಲ್ಲಿ ಡಿಸೆಂಬರ್ 12, 13 ಮತ್ತು 14ರಂದು ಮೂರು ದಿನಗಳ ರಾಜ್ಯಮಟ್ಟದ ರೈತ ಸಮಾವೇಶ ಹಾಗೂ ಕೃಷಿಮೇಳ ಆಯೋಜಿಸಲಾಗಿದೆ ಎಂದು ಸಮಾವೇಶದ ಸ್ವಾಗತ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 18 ಎಕರೆ ವಿಶಾಲ ಪ್ರದೇಶದಲ್ಲಿ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿದೆ. ಗ್ರಾಮ ಸ್ವರಾಜ್ಯದ ಬಲವರ್ಧನೆ, ಆಹಾರ ಪದ್ಧತಿಯಲ್ಲಿನ ಬದಲಾವಣೆ, ರೈತರು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿ ಸೇರಿದಂತೆ ಕೃಷಿ ಕ್ಷೇತ್ರದ ಪ್ರಮುಖ ಸಮಸ್ಯೆಗಳ ಕುರಿತು ಸಮಾವೇಶದಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.

ಕೃಷಿ ಬಿಕ್ಕಟ್ಟಿನ ನಿವಾರಣೆಗೆ ದೇಶದಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಬೆಳಕು ಚೆಲ್ಲುವ ಉದ್ದೇಶದಿಂದ ಪ್ರಥಮ ಬಾರಿಗೆ ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ರೈತ ಸಮಾವೇಶವನ್ನು ಸಂಘಟಿಸಲಾಗುತ್ತಿದೆ. ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಸೇರಿದಂತೆ ದೇಶದ ವಿವಿಧ ರಾಜ್ಯಗಳ ರೈತ ಮುಖಂಡರು, ಕೃಷಿ ತಜ್ಞರು ಹಾಗೂ ಗಣ್ಯರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಸ್ವಾವಲಂಬಿ ಕೃಷಿ ಪದ್ಧತಿ, ಆಹಾರ ಪದ್ಧತಿಯಲ್ಲಿನ ಬದಲಾವಣೆ, ಗ್ರಾಮ ಸ್ವರಾಜ್ಯದ ಬಲವರ್ಧನೆ ಹಾಗೂ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ನಿಗದಿಪಡಿಸುವುದು ಸಮಾವೇಶದ ಪ್ರಮುಖ ವಿಷಯಗಳಾಗಿವೆ. ದೇಶದ ಪ್ರಸಿದ್ಧ ಕೃಷಿ ತಜ್ಞರು ಹಾಗೂ ರೈತ ಮುಖಂಡರು ವಿವಿಧ ವಿಷಯಗಳ ಕುರಿತು ವಿಚಾರ ಮಂಡಿಸಲಿದ್ದಾರೆ. ರೈತರ ಸಮಸ್ಯೆಗಳು, ಕೃಷಿ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳು, ಕೃಷಿ ಅಭಿವೃದ್ಧಿ ಮತ್ತು ರೈತರ ಹಕ್ಕುಗಳ ಕುರಿತು ವಿಚಾರ ವಿನಿಮಯ ನಡೆಯಲಿದೆ ಎಂದು ವಿವರಿಸಿದರು.

ಸಮಾವೇಶದ ಅಂಗವಾಗಿ ನಡೆಯುವ ಕೃಷಿಮೇಳದಲ್ಲಿ ರೈತರಿಗೆ ಅನುಕೂಲವಾಗುವಂತೆ ಕೃಷಿ ಉತ್ಪನ್ನಗಳು, ಕೃಷಿ ಪರಿಕರಗಳು ಹಾಗೂ ಕೃಷಿ ಸಂಬಂಧಿತ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಕೃಷಿ ಕ್ಷೇತ್ರದಲ್ಲಿನ ನೂತನ ತಂತ್ರಜ್ಞಾನಗಳು ಹಾಗೂ ಸುಧಾರಿತ ಕೃಷಿ ಪದ್ಧತಿಗಳ ಕುರಿತು ರೈತರಿಗೆ ಮಾಹಿತಿ ನೀಡಲಾಗುತ್ತದೆ. ರೈತರಲ್ಲಿ ಜಾಗೃತಿ ಮೂಡಿಸುವುದು ಮತ್ತು ಕೃಷಿ ಕ್ಷೇತ್ರದ ಬೆಳವಣಿಗೆಗೆ ಉತ್ತೇಜನ ನೀಡುವುದು ಮೇಳದ ಮುಖ್ಯ ಉದ್ದೇಶವಾಗಿದೆ.

ಇದರೊಂದಿಗೆ ಸಾವಯವ ಕೃಷಿ, ಸ್ಥಳೀಯ ಬೀಜಗಳ ಸಂರಕ್ಷಣೆ, ಜಾನುವಾರು ಸಾಕಾಣಿಕೆ ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಸಂಬಂಧಿಸಿದ ವಿಷಯಗಳಿಗೂ ಆದ್ಯತೆ ನೀಡಲಾಗುತ್ತದೆ. ಹಸು, ಎಮ್ಮೆ, ಕುರಿ, ಆಡು ಮತ್ತು ಕೋಳಿ ಸೇರಿದಂತೆ ವಿವಿಧ ಜಾನುವಾರುಗಳ ಸಾಕಾಣಿಕೆ ಕುರಿತು ಮಾಹಿತಿ ನೀಡುವುದರ ಜತೆಗೆ ಪ್ರದರ್ಶನ ಆಯೋಜಿಸುವ ಉದ್ದೇಶವೂ ಇದೆ ಎಂದು ತಿಳಿಸಿದರು.

ಸಮಾವೇಶದಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಸಿಎಂ ಡಿ.ಕೆ. ಶಿವಕುಮಾರ್, ಸಾಮಾಜಿಕ ಚಿಂತಕ ಅಣ್ಣಾ ಹಜಾರೆ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಕಣ್ಣೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಗಳು, ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸೇರಿದಂತೆ ಹಲವು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಮಾಲೀಕಯ್ಯ ಗುತ್ತೇದಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ದಯಾನಂದ ಪಾಟೀಲ್, ಉಪಾಧ್ಯಕ್ಷ ಶಿವಕಾಂತ್ ಮಹಾಜನ್, ಕಾರ್ಯದರ್ಶಿ ಶಿವಕುಮಾರ್ ಪಾಟೀಲ್, ಖಜಾಂಚಿ ಸಂತೋಷ್ ಗುತ್ತೇದಾರ್, ಪವನ್‌ಕುಮಾರ್ ಒಳಕೇರಿ, ಸಂಗಮೇಶ ವಾಲಿ, ನಾಗಲಿಂಗಯ್ಯ ಮಠಪತಿ ಇದ್ದರು.

Tags

farmersconferenceagriculturalKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X