ನಾಳೆ ಕಲಬುರಗಿಯಲ್ಲಿ ಜೀತ ಪದ್ಧತಿಯ ರದ್ದತಿ ದಿನಾಚರಣೆ
ಕಲಬುರಗಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ “ಜೀತ ಪದ್ಧತಿ ರದ್ದತಿ ದಿನಾಚರಣೆ” ಕಾರ್ಯಕ್ರಮವನ್ನು ಫೆ.14 ರಂದು ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಹಳೆಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಲಬುರಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಕಲಬುರಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ ಎ.ಶಿಂಧಿಹಟ್ಟಿ ಅವರು ವಿಶೇಷ ಉಪನ್ಯಾಸ ನೀಡುವರು.







