ಗ್ಯಾರಂಟಿ ಯೋಜನೆಗಳ ಬಗ್ಗೆ ಅನಾವಶ್ಯಕವಾಗಿ ಗೊಂದಲ ಸೃಷ್ಟಿ : ಸಚಿವ ಶರಣಪ್ರಕಾಶ್ ಪಾಟೀಲ್

ಡಾ.ಶರಣಪ್ರಕಾಶ್ ಪಾಟೀಲ್
ಕಲಬುರಗಿ : ಗೃಹಜ್ಯೋತಿ ಹಣ ಹಾಕದಿದ್ದರೆ ಜನರಿಂದ ಹಣ ವಸೂಲಿ ಎನ್ನುವ ಎಸ್ಕಾಂ ಪ್ರಸ್ತಾವನೆ ಸಲ್ಲಿಕೆ ಬಗ್ಗೆ ನನಗೆ ಮಾಹಿತಿ ಇಲ್ಲವೆಂದು ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಕಲಬುರಗಿ ನಗರದಲ್ಲಿ ಮಾತನಾಡಿದ ಅವರು, ಜನರಿಗೆ ಕೊಟ್ಟ ಐದು ಗ್ಯಾರಂಟಿಗಳನ್ನು ಖಂಡಿತ ಜನರಿಗೆ ಮುಟ್ಟಿಸುತ್ತೇವೆಂದು ಸಿಎಂ ಅವರು ಸ್ಪಷ್ಟವಾಗಿ ಹೇಳಿದ್ದು, ಅನಾವಶ್ಯಕವಾಗಿ ಗೊಂದಲ ಸೃಷ್ಟಿ ಮಾಡಬೇಡಿ ಎಂದರು.
ಗೃಹಜ್ಯೋತಿ ಹಣ ಹಾಕದಿದ್ದರೆ ಜನರಿಂದ ಹಣ ವಸೂಲಿ ಎನ್ನುವ ಎಸ್ಕಾಂ ಪ್ರಸ್ತಾವನೆ ಸಲ್ಲಿಕೆ ಪ್ರಸ್ತಾವನೆ ಇಲಾಖೆಯವರು ಕೊಟ್ಟಿರೋದು ಗೋತ್ತಿಲ್ಲವೆಂದು ತಿಳಿಸಿದ್ದಾರೆ.
Next Story





