ಚಿತ್ತಾಪುರ ತಾಲೂಕು ಶಿಕ್ಷಕರ ಸಂಘಕ್ಕೆ ಅವಿರೋಧ ಆಯ್ಕೆ

ಚಿತ್ತಾಪುರ : ತಾಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಐವರು ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿ ಕಿಶನ್ ರಾಠೋಡ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಕನ್ಯಾ ಮಾದರಿ ಪ್ರೌಢಶಾಲೆ ಸಭಾಂಗಣದಲ್ಲಿ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ಸಂಘದ ಐದು ಪದಾಧಿಕಾರಿಗಳ ಸ್ಥಾನಗಳಿಗೆ ಐವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಪ್ರತಿಸ್ಪರ್ಧಿಗಳಿಲ್ಲದೆ ಅವಿರೋಧ ಆಯ್ಕೆ ನಡೆದಿದೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಚಿತ್ತಾಪುರ ತಾಲೂಕು ಸಮಿತಿಗೆ ಎರಡನೇ ಬಾರಿಗೆ ಶಿವಾನಂದ ನಾಲವಾರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಸ್ವರ್ಣಲತಾ ರೆಡ್ಡಿ ದುಗನೂರ, ಪ್ರಧಾನ ಕಾರ್ಯದರ್ಶಿಯಾಗಿ ಶರಣಪ್ಪ ಐಕೂರ, ಸಹ ಕಾರ್ಯದರ್ಶಿಯಾಗಿ ನಿರ್ಮಾಲಾದೇವಿ ಹಾಗೂ ಖಜಾಂಚಿಯಾಗಿ ಮಹಾಂತೇಶ ಆಯ್ಕೆಯಾದರು.
ಚುನಾವಣಾಧಿಕಾರಿಗಳಾದ ಕಿಶನ್ ರಾಠೋಡ ಹಾಗೂ ಎಂ.ಡಿ. ಅಬ್ದುಲ್ ನಬಿ ಅವರು ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಿಸಿದರು.
Next Story




