Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅವಿಕಂಪಿತ ಕನ್ನಡಪ್ರೇಮಿ...

ಅವಿಕಂಪಿತ ಕನ್ನಡಪ್ರೇಮಿ ಗೊ.ರು.ಚನ್ನಬಸಪ್ಪ: ಡಾ.ವೀರಣ್ಣ ದಂಡೆ

ವಾರ್ತಾಭಾರತಿವಾರ್ತಾಭಾರತಿ29 Nov 2024 10:41 PM IST
share
Photo of Program

ಕಲಬುರಗಿ : ನಾಡು, ನುಡಿ, ನರ ನಾಡಿಗಳಲ್ಲಿ ಅವಿಕಂಪಿತ ಕನ್ನಡ ಪ್ರೇಮ ಹೊಂದಿರುವ ಹಿರಿಯ ಜಾನಪದ ಮತ್ತು ವಚನ ವಿದ್ವಾಂಸ ಗೊ.ರು.ಚನ್ನಬಸಪ್ಪ ಅವರು ಈ ನಾಡು ಕಂಡು ಅಪ್ರತಿಮ ಮೇಧಾವಿ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ವೀರಣ್ಣ ದಂಡೆ ಅಭಿಪ್ರಾಯಪಟ್ಟರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಆಶ್ರಯದಲ್ಲಿ ನಗರದ ಕನ್ನಡ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅವರ ಅಭಿನಂದನಾ ಸಮಾರಂಭದಲ್ಲಿ ಅಭಿನಂದನಾ ನುಡಿಗಳನ್ನಾಡಿದ ಅವರು, ಜಾನಪದ ಸಾಹಿತ್ಯ, ಶರಣ ಸಾಹಿತ್ಯ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ತಮ್ಮ ಸೃಜನಶೀಲತೆ ಮತ್ತು ಕ್ರಿಯಾಶೀಲತೆಯಿಂದ ಇತರರಿಗೆ ಮಾದರಿಯಾಗಿದ್ದಾರೆ ಎಂದರು.

ಸ್ವಾತಂತ್ರ್ಯ ಚಳವಳಿ, ಭೂದಾನ ಚಳವಳಿಯಲ್ಲಿ ಭಾಗವಹಿಸಿರುವ ಗೋ.ರು.ಚ ಅವರು ಶಿಕ್ಷಕರಾಗಿ ವಯಸ್ಕರ ಶಿಕ್ಷಣದ ಸಂಪನ್ಮೂಲ ವ್ಯಕ್ತಿಯಾಗಿ, ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಪ್ರಧಾನ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದಾರೆ. ತಮ್ಮ 87ರ ಈ ಇಳಿವಯಸ್ಸಿನಲ್ಲೂ ಕುಗ್ಗದ ಉತ್ಸಾಹದಿಂದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ಅವರಲ್ಲಿರುವ ಜೀವನೋತ್ಸಾಹವನ್ನು ಪ್ರದರ್ಶಿಸುವಂತಿದೆ ಎಂದು ಬಣ್ಣಿಸಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಿರಿಯ ಉಪಾಧ್ಯಕ್ಷ ಅಪ್ಪಾರಾವ ಅಕ್ಕೋಣೆ ಅಧ್ಯಕ್ಷತೆ ವಹಿಸಿದ್ದರು. ಸೊನ್ನ ವಿರಕ್ತಮಠದ ಡಾ.ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಅಭಿನಂದನೆ ಸ್ವೀಕರಿಸಿದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಸರ್ವಾಧ್ಯಕ್ಷ ಗೊ.ರು.ಚನ್ನಬಸಪ್ಪ ಮಾತನಾಡಿದರು. ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ಸ್ವಾಗತಿಸಿದರು. ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ. ಮಲ್ಲಿಕಾರ್ಜುನ ವಡ್ಡನಕೇರಿ ಪ್ರಾಸ್ತಾವಿಕ ಮಾತನಾಡಿದರು. ಉಪಾಧ್ಯಕ್ಷ ಡಾ. ಶಿವರಂಜನ ಸತ್ಯಂಪೇಟೆ ನಿರೂಪಿಸಿದರು. ವಿಶ್ವನಾಥ ಮಂಗಲಗಿ ಪ್ರಾರ್ಥಿಸಿದರು. ಸಂಜಯ ಪಾಟೀಲ ವಂದಿಸಿದರು.

ಶಿವರಾಜ ಅಂಡಗಿ, ಶಾಂತಲಿoಗ ಪಾಟೀಲ ಕೋಳಕೂರ, ಶರಣರಾಜ್ ಛಪ್ಪರಬಂದಿ, ಬಸವರಾಜ ಧೂಳಾಗುಂಡಿ, ಬಾಬುರಾವ ಮಡ್ಡೆ, ಬಸವರಾಜ ಚಾಂದಕವಟೆ, ಅಪ್ಪಾಸಾಬ ತೀರ್ಥೆ, ಡಾ.ನೀಲಾಂಬಿಕಾ ಪೊಲೀಸ್ ಪಾಟೀಲ, ಜಯಶ್ರೀ ಚಟ್ನಳ್ಳಿ, ಸಿದ್ದಪ್ಪ ತಳ್ಳಳ್ಳಿ, ಪ್ರಭಾಕರ ಜೋಶಿ, ಮಹಿಪಾಲರೆಡ್ಡಿ ಮುನ್ನೂರ್, ಬಾಬುರಾವ ಚಿತ್ತಕೋಟೆ, ಶಿಲ್ಪಾ ಜೋಶಿ, ಎಚ್.ಬಿ.ತೀರ್ಥೆ, ಎಸ್.ಕೆ.ಬಿರಾದಾರ, ಬಸವರಾಜ ಮೊರಬದ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X