Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಉರ್ದು ಭಾಷೆ ಯಾವುದೇ ಧರ್ಮದ ಸ್ವತ್ತಲ್ಲ;...

ಉರ್ದು ಭಾಷೆ ಯಾವುದೇ ಧರ್ಮದ ಸ್ವತ್ತಲ್ಲ; ಡಾ.ಅಥರ್ ಮೊಯಿಸ್

ವಾರ್ತಾಭಾರತಿವಾರ್ತಾಭಾರತಿ11 Nov 2026 7:23 PM IST
share
ಉರ್ದು ಭಾಷೆ ಯಾವುದೇ ಧರ್ಮದ ಸ್ವತ್ತಲ್ಲ; ಡಾ.ಅಥರ್ ಮೊಯಿಸ್

ಕಲಬುರಗಿ: ಉರ್ದು ಭಾಷೆ ಯಾವುದೇ ಧರ್ಮ ಅಥವಾ ಸಮುದಾಯಕ್ಕೆ ಸೀಮಿತವಾಗಿಲ್ಲ. ವಿವಿಧ ಧರ್ಮಗಳ ಕವಿಗಳು, ಸಾಹಿತಿಗಳು ಹಾಗೂ ಚಿಂತಕರು ಉರ್ದು ಭಾಷೆಯ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕೆಬಿಎನ್ ವಿವಿಯ ಪ್ರಾಧ್ಯಾಪಕ ಡಾ.ಅಥರ್ ಮೊಯಿಸ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ಹಿದಾಯತ್ ಸೆಂಟರ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಹಾಗೂ ಎಂಪ್ಲಾಯೀಸ್ ಅಸೋಸಿಯೇಷನ್‌ಗಳ ಸಹಯೋಗದಲ್ಲಿ ವಿಶ್ವ ಉರ್ದು ದಿನಾಚರಣೆ ಅಂಗವಾಗಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ ಹಿರಿಯ ಸಾಹಿತಿ ಡಾ. ಫಹೀಮುದ್ದೀನ್ ಆಲಂ ಮಾತನಾಡಿ, ಉರ್ದು ಭಾಷೆ ಎಲ್ಲರನ್ನೂ ಒಗ್ಗೂಡಿಸುವ ಭಾಷೆಯಾಗಿದೆ. ಅದನ್ನು ಯಾವುದೇ ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು. ಉರ್ದು ಭಾಷೆಯ ಮೂಲಕ ಸಮಾಜದಲ್ಲಿ ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂದೇಶ ಸಾರಬೇಕು. ಉರ್ದು ಭಾಷೆಯ ಬೆಳವಣಿಗೆಗೆ ಮುಸ್ಲಿಮರಷ್ಟೇ ಅಲ್ಲದೆ ಮುಸ್ಲಿಮೇತರ ಸಾಹಿತಿಗಳು, ಕವಿಗಳು ಹಾಗೂ ಲೇಖಕರೂ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಸಾಹಿತ್ಯ ಸೇವೆಯನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉರ್ದು ಭಾಷೆ ಮತ್ತು ಸಾಹಿತ್ಯಕ್ಕೆ ಗಣನೀಯ ಸೇವೆ ಸಲ್ಲಿಸಿದ ಹಾಮಿದ್ ಅಕ್ಮಲ್, ಅಬ್ದುಲ್ ಹಮೀದ್ ಸುಹ್ರವರ್ದಿ, ಹಕೀಮ್ ಶಕೀರ್, ಅಬ್ದುಲ್ ಹಮೀದ್ ಅಕ್ಬರ್, ಮುಸ್ತಾಕ್ ಅಹ್ಮದ್ ಸುಹ್ರವರ್ದಿ, ಡಾ. ಅಕ್ರಮ್ ನಕಾಶ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ. ರಹೆಮಾನ್ ಪಟೇಲ್ ಮತ್ತು ಮೊಹಮ್ಮದ್ ಅಯಾಝುದ್ದೀನ್ ಪಟೇಲ್ ಅವರನ್ನು ಗೌರವಿಸಲಾಯಿತು. ಕವಿಗೋಷ್ಠಿಯಲ್ಲಿ ಸುಮಾರು 16 ಮಂದಿ ಕವಿಗಳು ಹಾಗೂ ಕವಯಿತ್ರಿಯರು ಭಾಗವಹಿಸಿ ತಮ್ಮ ಕವನಗಳನ್ನು ವಾಚಿಸಿದರು.

ಕಾರ್ಯಕ್ರಮದಲ್ಲಿ ಡಾ. ಫಾರುಕ್ ಮನ್ನೂರ್, ಅಸದ್ ಅಲಿ ಅನ್ಸಾರಿ, ಎಂ.ಎಂ ಬೇಗ್, ಆರೀಫ್ ಬೇಗ್, ಮುಜಿಬ್ ಅಲಿ ಖಾನ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಸಾಹಿತಿಗಳು ಪಾಲ್ಗೊಂಡಿದ್ದರು. ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದು, ಉರ್ದು ಭಾಷೆಯ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಪ್ರತಿಪಾದಿಸಿದರು.

Tags

Urdu languagereligion
share
ವಾರ್ತಾಭಾರತಿ
ವಾರ್ತಾಭಾರತಿ
Next Story
X