Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಯುಎಸ್–ಭಾರತ ವ್ಯಾಪಾರ ಒಪ್ಪಂದ| ಬಿಜೆಪಿ...

ಯುಎಸ್–ಭಾರತ ವ್ಯಾಪಾರ ಒಪ್ಪಂದ| ಬಿಜೆಪಿ ಸರಕಾರದ ಶರಣಾಗತಿ: ಸಿಪಿಐ(ಎಂ) ತೀವ್ರ ಟೀಕೆ

ವಾರ್ತಾಭಾರತಿವಾರ್ತಾಭಾರತಿ8 Feb 2026 10:36 PM IST
share
ಯುಎಸ್–ಭಾರತ ವ್ಯಾಪಾರ ಒಪ್ಪಂದ| ಬಿಜೆಪಿ ಸರಕಾರದ ಶರಣಾಗತಿ: ಸಿಪಿಐ(ಎಂ) ತೀವ್ರ ಟೀಕೆ

ಕಲಬುರಗಿ: ಭಾರತ–ಅಮೆರಿಕ ನಡುವೆ ನಡೆಯುತ್ತಿರುವ ತಥಾಕಥಿತ ‘ಮಧ್ಯಂತರ ವ್ಯಾಪಾರ ಒಪ್ಪಂದ’ದ ವಿವರಗಳು ನಿಧಾನವಾಗಿ ಬಹಿರಂಗಗೊಳ್ಳುತ್ತಿದ್ದು, ಈ ಒಪ್ಪಂದದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಅಮೆರಿಕದ ಎದುರು ಶರಣಾಗಿರುವುದು ಸ್ಪಷ್ಟವಾಗುತ್ತಿದೆ ಎಂದು ಸಿಪಿಐ(ಎಂ) ಪೊಲಿಟ್‌ಬ್ಯುರೊ ಹೇಳಿಕೊಂಡಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಸಿಪಿಐ(ಎಂ) ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ, ಅಮೆರಿಕದಿಂದ ಆಮದು ಆಗುವ ಹಣ್ಣುಗಳು, ಹತ್ತಿ, ಮರದ ಕಾಯಿ ಉತ್ಪನ್ನಗಳು, ಸೋಯಾಬೀನ್ ಎಣ್ಣೆ ಸೇರಿದಂತೆ ಹಲವು ಆಹಾರ ಮತ್ತು ಕೃಷಿ ಉತ್ಪನ್ನಗಳ ಮೇಲೆ ಭಾರತ ಸರ್ಕಾರ ಶೂನ್ಯ ಸುಂಕ ವಿಧಿಸಲು ಒಪ್ಪಿಕೊಂಡಿದೆ. ಈ ನಿರ್ಧಾರವು ದೇಶದಾದ್ಯಂತ ಲಕ್ಷಾಂತರ ಸೇಬು ಬೆಳೆಗಾರರು, ಹತ್ತಿ ಹಾಗೂ ಸೋಯಾ ರೈತರ ಜೀವನೋಪಾಯಕ್ಕೆ ಗಂಭೀರ ಹೊಡೆತ ನೀಡಲಿದೆ ಎಂದು ಹೇಳಿದ್ದಾರೆ.

ಹಿಮಾಚಲ ಪ್ರದೇಶ, ಜಮ್ಮು–ಕಾಶ್ಮೀರ ಸೇರಿದಂತೆ ವಿವಿಧ ರಾಜ್ಯಗಳ ಸೇಬು ಬೆಳೆಗಾರರು ಈಗಾಗಲೇ ನ್ಯೂಜಿಲ್ಯಾಂಡ್ ಮೊದಲಾದ ದೇಶಗಳೊಂದಿಗೆ ಮಾಡಲಾದ ಹಿಂದಿನ ವ್ಯಾಪಾರ ಒಪ್ಪಂದಗಳಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅಮೆರಿಕದೊಂದಿಗೆ ಹೊಸ ಒಪ್ಪಂದವು ಅವರ ಬದುಕನ್ನು ಮತ್ತಷ್ಟು ನಾಶಗೊಳಿಸುವ ಭೀತಿ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದಲ್ಲದೆ, ಆಹಾರ ಮತ್ತು ಕೃಷಿ ಉತ್ಪನ್ನಗಳ ಮೇಲಿನ ಸುಂಕೇತರ ಅಡೆತಡೆಗಳನ್ನು (ನಾನ್-ಟಾರಿಫ್ ಬ್ಯಾರಿಯರ್ಸ್) ತೆಗೆದುಹಾಕಲು ಕೇಂದ್ರ ಸರಕಾರ ಒಪ್ಪಿಕೊಂಡಿದೆ ಎಂಬ ವರದಿಗಳು ಆತಂಕಕಾರಿ. ಇದರ ಪರಿಣಾಮವಾಗಿ ಭಾರತೀಯ ರೈತರಿಗೆ ನೀಡಲಾಗುತ್ತಿರುವ ಬೆಂಬಲ ಮತ್ತು ಸಬ್ಸಿಡಿಗಳನ್ನು ಹಿಂಪಡೆಯುವ ಪರಿಸ್ಥಿತಿ ಉಂಟಾಗಲಿದೆ. ಇದರಿಂದ ಭಾರೀ ಸಬ್ಸಿಡಿಗಳನ್ನು ಪಡೆಯುತ್ತಿರುವ ಅಮೆರಿಕದ ಕೃಷಿ ಉತ್ಪನ್ನಗಳೊಂದಿಗೆ ಭಾರತೀಯ ರೈತರು ಸ್ಪರ್ಧಿಸಬೇಕಾದ ಅನಿವಾರ್ಯತೆ ಎದುರಾಗಲಿದೆ ಎಂದು ಹೇಳಿದರು.

ರಷ್ಯಾದಿಂದ ತೈಲ ಖರೀದಿಸುವುದು ಸೇರಿದಂತೆ ಭಾರತದ ವಿದೇಶಾಂಗ ಹಾಗೂ ಆರ್ಥಿಕ ಧೋರಣೆಗಳ ಬಗ್ಗೆ ಅಮೆರಿಕ ನಿರ್ದೇಶನ ನೀಡುವಂತಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊರಡಿಸಿರುವ ಕಾರ್ಯಕಾರಿ ಆದೇಶವು ಈ ನಿರ್ದೇಶನಗಳ ಅನುಷ್ಠಾನಕ್ಕೆ ವ್ಯವಸ್ಥೆ ಮಾಡಿದ್ದು, ಉಲ್ಲಂಘನೆಯಾದರೆ ಸುಂಕ ಹೇರುವ ಬೆದರಿಕೆಯನ್ನು ಒಡ್ಡಲಾಗಿದೆ. ಇದು ಬಿಜೆಪಿ ನೇತೃತ್ವದ ಸರಕಾರದ ಲಜ್ಜಾಸ್ಪದ ಶರಣಾಗತಿಯಾಗಿದೆ ಎಂದು ಆರೋಪಿಸಿದ್ದಾರೆ.

ಈ ವ್ಯಾಪಾರ ಒಪ್ಪಂದದ ಸಂಪೂರ್ಣ ವಿವರಗಳನ್ನು ತಕ್ಷಣವೇ ಸಂಸತ್ತಿನ ಮುಂದೆ ಮಂಡಿಸಿ ಸಾರ್ವಜನಿಕಗೊಳಿಸಬೇಕು, ಭಾರತೀಯ ಕಾರ್ಮಿಕರು, ರೈತರು ಹಾಗೂ ಸಾಮಾನ್ಯ ಜನರ ಹಿತಾಸಕ್ತಿಗಳಿಗೆ ಧಕ್ಕೆಯಾಗುವ ಯಾವುದೇ ಒಪ್ಪಂದಕ್ಕೆ ಸಹಿ ಹಾಕುವುದನ್ನು ಕೇಂದ್ರ ಸರ್ಕಾರ ತಕ್ಷಣವೇ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

Tags

US-Indiatrade deal:BJPCPI(M)
share
ವಾರ್ತಾಭಾರತಿ
ವಾರ್ತಾಭಾರತಿ
Next Story
X