ವಿಜಯಲಕ್ಷ್ಮಿಗೆ ಕೇಂದ್ರೀಯ ವಿವಿಯಿಂದ ಪಿಎಚ್.ಡಿ ಪದವಿ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ವಿಜಯಲಕ್ಷ್ಮಿ ದೊಡ್ಡಮನಿ ಅವರಿಗೆ ಕನ್ನಡ ವಿಷಯದಲ್ಲಿ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು.
ಅವರು "ಸೀಮಾತೀತ ಕನ್ನಡ ಸಾಹಿತ್ಯ ಚರಿತ್ರೆಯ ದಲಿತತ್ವದ ನೆಲೆಗಳು (ಹೊನ್ನ ಕೋಗಿಲೆಯ ಆರು ಸಂಪುಟಗಳನ್ನು ಅನುಲಕ್ಷಿಸಿ)" ಎಂಬ ವಿಷಯದ ಕುರಿತು ಮಹಾಪ್ರಬಂಧ ಮಂಡಿಸಿದ್ದರು.
ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅಪ್ಪಗೆರೆ ಸೋಮಶೇಖರ್ ಅವರ ಮಾರ್ಗದರ್ಶನದಲ್ಲಿ ಅವರು ಸಂಶೋಧನೆ ನಡೆಸಿದ್ದಾರೆ.
Next Story




