ನ.18ರಂದು ಸೇಡಂನಲ್ಲಿ ‘ವೋಟ್ ಬಚಾವ್, ದೇಶ ಬಚಾವ್’ ಪ್ರತಿಭಟನಾ ರ‍್ಯಾಲಿ

ಸೇಡಂ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ಆದೇಶದ ಮೇರೆಗೆ ಸೇಡಂ ಮತ್ತು ಮುಧೋಳ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ನಾಳೆ (ನ.18) ಸೇಡಂ ಪಟ್ಟಣದಲ್ಲಿ ‘ವೋಟ್ ಬಚಾವ್, ದೇಶ ಬಚಾವ್’ ಘೋಷವಾಕ್ಯದಡಿ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಮುಖಂಡರು ತಿಳಿಸಿದ್ದಾರೆ.
ಬೆಳಿಗ್ಗೆ 10.45ಕ್ಕೆ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಮೂರ್ತಿಯಿಂದ ಪ್ರತಿಭಟನಾ ರ‍್ಯಾಲಿ ಆರಂಭವಾಗಿ ಬಸ್ ನಿಲ್ದಾಣದವರೆಗೆ ಸಾಗಲಿದೆ.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಯುವ ನಾಯಕರು, ಹಾಲಿ ಹಾಗೂ ಮಾಜಿ ಚುನಾಯಿತ ಜನಪ್ರತಿನಿಧಿಗಳು, ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಿಳಾ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸೇಡಂ ಮತ್ತು ಮುಧೋಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶಿವಶರಣರೆಡ್ಡಿ ಪಾಟೀಲ್ ಹಾಗೂ ರವೀಂದ್ರ ನಂದಿಗಾಮ್ ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.
Next Story




