ವಾಡಿ | ಸೆ.21ರಂದು ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ : ಸೂರ್ಯಕಾಂತ ರದ್ದೇವಾಡಿ

ವಾಡಿ : ಪಟ್ಟಣದ ಸಿದ್ದಾರ್ಥ ಭವನದಲ್ಲಿ ಸೆಪ್ಟೆಂಬರ್ 21ರಂದು ಬೆಳಿಗ್ಗೆ 11 ಗಂಟೆಗೆ ಪಿಎಂಕೆ ಫ್ಯಾನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ‘ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ ಪ್ರದಾನ ಸಮಾರಂಭ ಆಯೋಜಿಸಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಸೂರ್ಯಕಾಂತ ರದ್ದೇವಾಡಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಶಿಕ್ಷಕರ ಸೇವಾ ನಿಷ್ಠೆ, ಪ್ರಾಮಾಣಿಕತೆ, ವಿದ್ಯಾರ್ಥಿಗಳು ಹಾಗೂ ಸಹೋದ್ಯೋಗಿಗಳೊಂದಿಗೆ ಹೊಂದಿರುವ ಬಾಂಧವ್ಯ, ಬೋಧನಾ ಕೌಶಲ್ಯ ಮತ್ತು ಪಾಠ ಮಾಡುವ ಶೈಲಿಯನ್ನು ಪರಿಗಣಿಸಿ ಅತ್ಯುತ್ತಮ ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಸಮಾರಂಭವನ್ನು ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮೆಹಮೂದ್ ಚಿಸ್ತಿ ಉದ್ಘಾಟಿಸಲಿದ್ದು, ಸ್ಥಳೀಯ ಬೌದ್ಧ ಸಮಾಜದ ಅಧ್ಯಕ್ಷ ಟೋಪಣ್ಣ ಕೋಮಟೆ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ಪಿಎಸ್‌ಐ ತಿರುಮಲೇಶ ಕುಂಬಾರ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಕಾಂತ ಬಿರಾದಾರ, ಎಸಿಸಿ ಕಾರ್ಮಿಕ ಸಂಘದ ಅಧ್ಯಕ್ಷ ಶರಣಬಸ್ಸು ಸಿರೂರಕರ, ಇಂಗಳಗಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶುಭಾಶ್ಚಂದ್ರ ಯಾಮೇರ, ಎಪಿಎಂಸಿ ಮಾಜಿ ಅಧ್ಯಕ್ಷ ಶಂಕ್ರಯ್ಯ ಸ್ವಾಮಿ ಮದ್ರಿ, ಪತ್ರಕರ್ತರಾದ ದಯಾನಂದ ಖಜೂರಿ ಮತ್ತು ಮಡಿವಾಳಪ್ಪ ಹೇರೂರ, ಪುರಸಭೆ ಮಾಜಿ ಸದಸ್ಯ ಶರಣು ಮಾಟೇಕರ ಹಾಗೂ ಬಾಬುಮುಯಾ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.






