Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಾಡಿ | ಅ.5ರಿಂದ ಧಮ್ಮಯಾತ್ರೆ; ನ.1ರಂದು...

ವಾಡಿ | ಅ.5ರಿಂದ ಧಮ್ಮಯಾತ್ರೆ; ನ.1ರಂದು ಸನ್ನತ್ತಿಯಲ್ಲಿ 70ನೇ ಬೃಹತ್ ಧಮ್ಮದೀಕ್ಷಾ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ15 Sept 2026 5:29 PM IST
share
ವಾಡಿ | ಅ.5ರಿಂದ ಧಮ್ಮಯಾತ್ರೆ; ನ.1ರಂದು ಸನ್ನತ್ತಿಯಲ್ಲಿ 70ನೇ ಬೃಹತ್ ಧಮ್ಮದೀಕ್ಷಾ ಸಮಾರಂಭ

ವಾಡಿ: ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ, ಸೌಹಾರ್ದತೆ ಹಾಗೂ ಸಾಮಾಜಿಕ ನ್ಯಾಯದ ಆಶಯಗಳನ್ನು ಸಾಕಾರಗೊಳಿಸುವ ಮೂಲಕ ಪ್ರಬುದ್ಧ ಭಾರತ ನಿರ್ಮಾಣ ಮಾಡುವ ಉದ್ದೇಶದಿಂದ ಅಕ್ಟೋಬರ್ 5ರಿಂದ ಧಮ್ಮಯಾತ್ರೆ ಆರಂಭವಾಗಿ, ನವೆಂಬರ್ 1ರಂದು ಸನ್ನತ್ತಿ (ಕನಗನಹಳ್ಳಿ)ಯಲ್ಲಿ ಬೃಹತ್ ಧಮ್ಮದೀಕ್ಷಾ ಸಮಾರಂಭ ನಡೆಯಲಿದೆ ಎಂದು ಸನ್ನತ್ತಿ ಬೌದ್ಧ ಮಹಾಸ್ತೂಪ ಅಭಿವೃದ್ಧಿ ಹಾಗೂ ಸಂರಕ್ಷಣಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸಂದೀಪ ಕಟ್ಟಿ ತಿಳಿಸಿದರು.

ಪೂಜ್ಯ ಝೆನ್ ಗುರು ಭಂತೆ ಶಕು ಬೋಧಿಧಮ್ಮ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ, ಅಂತರರಾಷ್ಟ್ರೀಯ ಬೌದ್ಧ ಯುವ ಸಂಘಟನೆ ಮತ್ತು ಸನ್ನತ್ತಿ ಬೌದ್ಧ ಮಹಾಸ್ತೂಪ ಅಭಿವೃದ್ಧಿ ಹಾಗೂ ಸಂರಕ್ಷಣಾ ಸಂಸ್ಥೆಯ ಆಶ್ರಯದಲ್ಲಿ ನವೆಂಬರ್ 1ರಂದು ನಡೆಯಲಿರುವ 70ನೇ ಧಮ್ಮದೀಕ್ಷಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಅಕ್ಟೋಬರ್ 5ರಂದು ಕಲಬುರಗಿಯ ಜಗತ್ ವೃತ್ತದಿಂದ ಆರಂಭವಾಗುವ ಧಮ್ಮಯಾತ್ರೆ ನವೆಂಬರ್ 1ರಂದು ಸನ್ನತ್ತಿಯಲ್ಲಿ ಸಮಾರೋಪಗೊಳ್ಳಲಿದೆ. ಈ ಯಾತ್ರೆಯ ಮೂಲಕ ಕರ್ನಾಟಕದಾದ್ಯಂತ ಸುಮಾರು 5 ಲಕ್ಷ ಜನರನ್ನು ಧಮ್ಮದೀಕ್ಷೆ ಸ್ವೀಕರಿಸಲು ಸಜ್ಜುಗೊಳಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಶಿಸ್ತುಬದ್ಧ ಹಾಗೂ ಯೋಜನಾಬದ್ಧವಾಗಿ ಯಶಸ್ವಿಗೊಳಿಸಲು ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಉಪಸಮಿತಿಗಳನ್ನು ರಚಿಸಿ, ಜವಾಬ್ದಾರಿಗಳನ್ನು ಹಂಚಿಕೆ ಮಾಡುವ ಕೆಲಸ ಆರಂಭಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಸಾಯಬಣ್ಣ ಬನ್ನಟ್ಟಿ, ಇದು ಸಂಪೂರ್ಣ ರಾಜಕೀಯೇತರ ಕಾರ್ಯಕ್ರಮವಾಗಿದ್ದು, ದಲಿತ ಸಮುದಾಯದ ಪ್ರತಿಯೊಂದು ಮನೆಗೂ ಧಮ್ಮದೀಕ್ಷಾ ಕಾರ್ಯಕ್ರಮದ ಮಾಹಿತಿ ತಲುಪಿಸಬೇಕು. ಪ್ರತಿಯೊಬ್ಬ ಅಂಬೇಡ್ಕರ್‌ವಾದಿ ಹಾಗೂ ಬೌದ್ಧ ಅನುಯಾಯಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಸಂಘಟಕರು ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಶರಬಣ್ಣ ಸನ್ನತ್ತಿ, ರಣಧೀರ ಹೊಸಮನಿ, ರಾಯಪ್ಪ ಹುಳಂಡಿಗೇರ, ಶಿವಲಿಂಗಪ್ಪ, ಭೀಮಶಂಕರ್ ತೇಲ್ಕರ್, ಜೈಭೀಮ್ ಮಾರಡಗಿ, ಶಿವಕುಮಾರ ಬಂದಳ್ಳಿ, ಸಿದ್ದಣ್ಣ ಬೆಳಗೇರಿ, ಶಿವಯೋಗಿ ಬಳಗ, ಶಿವಕುಮಾರ ಕುಲಕುಂದ, ಮಂಜುನಾಥ ಹೊನಗುಂಟ, ನಾಗರಾಜ ಸೋಗುರು, ಅಂಬರೀಶ ಹಣಕೇರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Wadi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X