Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಾಡಿ | ಕೃಷಿಯೊಂದಿಗೆ ಪಶುಸಾಕಣೆ ಮಾಡಿದರೆ...

ವಾಡಿ | ಕೃಷಿಯೊಂದಿಗೆ ಪಶುಸಾಕಣೆ ಮಾಡಿದರೆ ರೈತರ ಆರ್ಥಿಕ ಸ್ಥಿತಿ ಸುಧಾರಣೆ: ಡಾ.ಶಂಕರ್ ಕಣ್ಣಿ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ23 Nov 2026 12:19 AM IST
share
ವಾಡಿ | ಕೃಷಿಯೊಂದಿಗೆ ಪಶುಸಾಕಣೆ ಮಾಡಿದರೆ ರೈತರ ಆರ್ಥಿಕ ಸ್ಥಿತಿ ಸುಧಾರಣೆ: ಡಾ.ಶಂಕರ್ ಕಣ್ಣಿ

ವಾಡಿ: ರೈತರು ವ್ಯವಸಾಯದ ಜತೆಗೆ ಜಾನುವಾರು ಮತ್ತು ಮೇಕೆಗಳ ಸಾಕಣೆಯನ್ನೂ ಕೈಗೊಂಡರೆ ಆರ್ಥಿಕವಾಗಿ ಸಬಲರಾಗಲು ಸಾಧ್ಯವಿದೆ ಎಂದು ಚಿತ್ತಾಪುರ ಪಶುಪಾಲನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ. ಶಂಕರ್ ಕಣ್ಣಿ ಹೇಳಿದರು.

ವಾಡಿ ಸಮೀಪದ ಲಾಡ್ಲಾಪುರ ಗ್ರಾಮದಲ್ಲಿ ಪಶುಪಾಲನಾ ಇಲಾಖೆ ವತಿಯಿಂದ ಭಾನುವಾರ ಆಯೋಜಿಸಿದ್ದ ಜಾನುವಾರು ಆರೋಗ್ಯ ಶಿಬಿರ, ಕರುಗಳ ಪ್ರದರ್ಶನ ಹಾಗೂ ಉಚಿತ ಔಷಧ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಕೃಷಿ ಬಿಕ್ಕಟ್ಟು ಮತ್ತು ರೈತರ ಆರ್ಥಿಕ ಸಂಕಷ್ಟಕ್ಕೆ ಪಶುಪಾಲನಾ ವೃತ್ತಿ ಕಣ್ಮರೆಯಾಗಿರುವುದೂ ಪ್ರಮುಖ ಕಾರಣವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ಮಾರ್ಗದರ್ಶನದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ರೈತರು ತಮ್ಮ ಜಾನುವಾರುಗಳನ್ನು, ವಿಶೇಷವಾಗಿ ಕರುಗಳನ್ನು ಉತ್ತಮವಾಗಿ ಪಾಲನೆ ಮಾಡುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು. ಕಾಲಕಾಲಕ್ಕೆ ಇಲಾಖೆಯಿಂದ ನೀಡಲಾಗುವ ಉಚಿತ ಲಸಿಕೆಗಳನ್ನು ಹಾಕಿಸಿ ಜಾನುವಾರುಗಳನ್ನು ರೋಗಗಳಿಂದ ರಕ್ಷಿಸಬೇಕು. ನೀರಾವರಿ ಸೌಲಭ್ಯ ಹೊಂದಿರುವ ರೈತರು ಇಲಾಖೆಯಲ್ಲಿ ಉಚಿತವಾಗಿ ದೊರೆಯುವ ಮೇವಿನ ಬೀಜಗಳನ್ನು ಪಡೆದು ಮೇವು ಬೆಳೆಸಬೇಕು ಎಂದು ಸಲಹೆ ನೀಡಿದರು.

ಶಿಬಿರದಲ್ಲಿ ಗ್ರಾಮದ ಸುಮಾರು 65 ಜಾನುವಾರುಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ರೈತರು 40ಕ್ಕೂ ಹೆಚ್ಚು ಕರುಗಳನ್ನು ಪ್ರದರ್ಶನಕ್ಕೆ ತಂದಿದ್ದರು.

ಗ್ರಾಮದ ಮುಖಂಡ ಬಸವರಾಜ ಮಾಲಿ ಪಾಟೀಲ ಮಾತನಾಡಿ, ಹಿಂದೆ ಪ್ರತಿಯೊಂದು ಮನೆಯಲ್ಲೂ ಜಾನುವಾರು, ಕೋಳಿ ಹಾಗೂ ಕುರಿ ಸಾಕಣೆ ಪದ್ಧತಿ ಇತ್ತು. ಆದರೆ ನಗರೀಕರಣದ ಪ್ರಭಾವದಿಂದ ಇವೆಲ್ಲವೂ ಕ್ರಮೇಣ ಕಣ್ಮರೆಯಾಗುತ್ತಿವೆ. ಜನರು ಆರ್ಥಿಕ ಸಂಕಷ್ಟವನ್ನು ತಾಳಲಾರದೆ ನಗರಗಳತ್ತ ಗುಳೆ ಹೋಗುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ 40ಕ್ಕೂ ಹೆಚ್ಚು ಕರುಗಳನ್ನು ಪರಿಶೀಲಿಸಿ, ಉತ್ತಮ ಮಿಶ್ರತಳಿ ಹಾಗೂ ಇತರ ಕರುಗಳನ್ನು ಆಯ್ಕೆ ಮಾಡಲಾಯಿತು. ಪಶುಪಾಲನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಒಟ್ಟು ಒಂಬತ್ತು ಕರುಗಳು ಮತ್ತು ಒಂದು ಆಕಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಪಶುವೈದ್ಯಾಧಿಕಾರಿ ಡಾ. ಮಂಜುನಾಥ, ಹಿರಿಯ ಪಶುವೈದ್ಯಾಧಿಕಾರಿ ಡಾ. ಆಕಾಶ್, ಗ್ರಾಮದ ಮುಖಂಡರಾದ ನಾಗೇಂದ್ರಪ್ಪ ಮುಕ್ತೆದಾರ, ವಿಶ್ವನಾಥ ಗಂಧಿ, ಸಾಬಣ್ಣ ಮುಸಲಾ, ಹಣಮಂತ ಗಲಗಿನ, ಮಲ್ಲಣ್ಣ ಸಾಹುಕಾರ, ಇಲಾಖೆಯ ನಿವೃತ್ತ ಸಿಬ್ಬಂದಿ ಪಂಪಣ್ಣ ಸಜ್ಜನ, ಈಶ್ವರಾಜ ಮಡಿವಾಳ, ರತನಕುಮಾರ, ವಾಜೀದ ಮೀಯಾ, ಭೀಮಾಶಂಕರ, ವಿಜಯಕುಮಾರ, ನಾಗರಾಜು, ಪರಮೇಶ್ವರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

WadiFarmers
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X